ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಜೆಡಿಎಸ್‌ಗೆ ರಾಜೀನಾಮೆ; ಬಿಜೆಪಿಗೆ ಸೇರುವುದಾಗಿ ಘೋಷಣೆ!

ರಾಜ್ಯದಲ್ಲಿ ಹಲವಾರು ಜೆಡಿಎಸ್‌ ನಾಯಕರು ಪಕ್ಷ ತೊರೆದು ಇತರ ಪಕ್ಷಗಳಿಗೆ ಸೇರುತ್ತಿರುವ ಪ್ರಹಸನ ಇತ್ತೀಚೆಗೆ ಹೆಚ್ಚಾಗಿದೆ. ಅದರಲ್ಲೂ ಮೈಸೂರು ಭಾಗದ ಹಲವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರುತ್ತಿದ್ದಾರೆ. ಈ ನಡುವೆ, ಜೆಡಿಎಸ್‌ನಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಸಂದೇಶ್ ನಾಗರಾಜ್ ಅವರು ಜೆಡಿಎಸ್‌ಗೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂದೇಶ್ ನಾಗರಾಜ್, ಜೆಡಿಎಸ್‌ ಪಕ್ಷಕ್ಕೆ ಇನ್ನು ಮೂರು ದಿನಗಳಲ್ಲಿ ರಾಜೀನಾಮೆ ನೀಡಿ, ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾಗುತ್ತೇನೆ. ಬಿಜೆಪಿ ಸೇರುವ ದಿನ ನಾನು ಯಾಕೆ ಜೆಡಿಎಸ್ ಬಿಟ್ಟೆ ಎಂಬುದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ನನ್ನ ಅಗತ್ಯ ಎಚ್.ಡಿ ಕುಮಾರಸ್ವಾಮಿ ಅವರಿಗೆ ಇದ್ದಂತಿಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು. ಕಳೆದ ಮೂರು ವರ್ಷಗಳಿಂದ ನಾನು ಮಾನಸಿಕವಾಗಿ ಬಿಜೆಪಿಯಲ್ಲೆ ಇದ್ದೇನೆ. ದೈಹಿಕವಾಗಿ ಅಷ್ಟೇ ಜೆಡಿಎಸ್ ನಲ್ಲಿದ್ದೆ. ವಿಧಾನ ಪರಿಷತ್ ಒಳಗೂ ನಾನು ಬಿಜೆಪಿ ಪರವೇ ಬಿಲ್ ಗಳಿಗೆ ಕೈ ಎತ್ತಿದ್ದೇನೆ. ಮೂರು ವರ್ಷದಿಂದ ನಾನು ಜೆಡಿಎಸ್ ನಾಯಕರ ಸಂರ್ಪಕದಲ್ಲಿ ಇಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಸಂದೇಶ್ ನಾಗರಾಜ್ ತಿಳಿಸಿದರು.

ಇದನ್ನೂ ಓದಿ: ಚಳಿಗಾಲದಲ್ಲೂ ಮಳೆಯ ಅಬ್ಬರ; ತುಂಬಿ ತುಳುಕುತ್ತಿವೆ ಡ್ಯಾಂಗಳು; ಜಲಾಶಯಗಳ ಇಂದಿನ‌‌ ನೀರಿನ ಮಟ್ಟ ಹೀಗಿದೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights