ಮೈಸೂರಿನಲ್ಲಿ ಭಾರೀ ಮಳೆ: ಧರೆಗುರುಳಿದ ಮರಗಳು; ಕಾರುಗಳು ಸಂಪೂರ್ಣ ಖಜಂ

ಮೈಸೂರಿನಲ್ಲಿ ನಿನ್ನೆ ಭಾರೀ ಮಳೆ ಸುರಿದಿದ್ದು, ರಾಜ್‌ಕುಮಾರ್ ಪಾರ್ಕ್‌ನಲ್ಲಿದ್ದ ಎರಡು ಬೃಹತ್ ಮರಗಳು ಧರೆಗುರುಳಿವೆ. ಇದರ ಪರಿಣಾಮ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಅದ್ರಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಮೈಸೂರಿನ ಶ್ರೀ ಹರ್ಷ ರಸ್ತೆಯಲ್ಲಿ ಘಟನೆ ನಡೆದಿದ್ದು, ಬೃಹತ್ ಮರ ಉರುಳಿದ ಪರಿಣಾಮ ಎರಡು ಕಾರು, 5 ವಿದ್ಯುತ್ ಕಂಬಗಳು ಜಖಂಗೊಂಡಿವೆ.

ಸಂಪೂರ್ಣವಾಗಿ ರಸ್ತೆಗೆ ಮರ ಬಿದ್ದ ಪರಿಣಾಮ ಹರ್ಷ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಪಾಲಿಕೆ ಹಾಗೂ ಸೆಸ್ಕ್ ಸಿಬ್ಬಂದಿ ಮರವನ್ನು ತೆರವು ಮಾಡುತ್ತಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಸೈಕ್ಲೋನ್ ಎಫೆಕ್ಟ್ ಕಂಡು ಬಂದಿದ್ದು, ಸತತ ಮಳೆ ಬಿದ್ದ ಪರಿಣಾಮ ಅವಘಡ ಸಂಭವಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights