ನಿಲ್ಲದ ಮಳೆ ಅಬ್ಬರ; ನವೆಂಬರ್ 22 ರವರೆಗೆ 16 ಜಿಲ್ಲೆಗಳಲ್ಲಿ ಭಾರೀ ಮಳೆ!

ಕಳೆದ ಒಂದು ತಿಂಗಳಿನಿಂದ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು/ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ರಾಜ್ಯದ 16 ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್‌ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಎದ್ದಿರುವ ಸುಳಿಗಾಳಿ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಪ್ರವಾಹವಾಗುತ್ತಿದೆ. ಇನ್ನು ರಾಜ್ಯದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಅಲ್ಲದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿಯೂ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ದಿನ ಪೂರ್ತಿ ಜಿಟಿಜಿಟಿ ಮಳೆ, ಶೀತಗಾಳಿ, ಚಳಿ ಮತ್ತು ಮೋಡ ಕವಿದ ವಾತಾವರಣ ಆವರಿಸಿದೆ. ಮಧ್ಯೆ ಮಧ್ಯೆ ಧಾರಕಾರ ಮಳೆ ಸುರಿಯುತ್ತಿದೆ. ಸೂರ್ಯನನ್ನೇ ಕಾಣಲಾಗರ ನಗರದ ಜನರು ಮೈಕೊರೆಯುವ ಚಳಿಯಲ್ಲಿ ತಮ್ಮ ನೌಕರಿಗೆ ತೆರಳುತ್ತಿದ್ದಾರೆ.

ರಾಜ್ಯದಲ್ಲಿ ಹಳಿಯಾಳ, ಕದ್ರಾ, ಕಾರವಾರ, ಪಾವಗಡ, ಧಾರವಾಡ, ಕೊಟ್ಟಿಗೆಹಾರ, ಕೋಟ, ರಾಣೆಬೆನ್ನೂರು, ಲಕ್ಷ್ಮೇಶ್ವರ, ಬೆಳಗಾವಿ, ಹೆಸರಘಟ್ಟ, ಆನೇಕಲ್, ಎಂಎಂ ಹಿಲ್ಸ್, ಬಂಡೀಪುರ, ಹಿರಿಯೂರು, ಬೇಲಿಕೇರಿ, ಕ್ಯಾಸಲ್‌ ರಾಕ್, ಯಲ್ಲಾಪುರ, ಕುಮಟಾ, ಶಿರಸಿ, ಮುನಿರಾಬಾದ್, ಹುಕ್ಕೇರಿ, ಕಲಘಟಗಿ, ಹಾನಗಲ್, ಗದಗ, ಹೊಸಹಳ್ಳಿ, ಸಂತೆ ಬೆನ್ನೂರು, ಚಿತ್ರದುರ್ಗ, ಶಿವಮೊಗ್ಗ, ಉತ್ತರಹಳ್ಳಿ, ಸಿದ್ದಾಪುರ, ಕುಂದಾಪುರ, ಬೆಂಗಳೂರು ನಗರ ಜಿಲ್ಲೆ, ಸಾಗರ, ತಾಳಿಕೋಟೆ, ವಿಜಯಪುರ, ನಾಗನಹಳ್ಳಿ, ತಾಳಗುಪ್ಪ, ತುಮರಿ, ಚಿಕ್ಕಬಳ್ಳಾಪುರ, ಗೌರಿ ಬಿದನೂರು, ಐಟಿಸಿ ಜಾಲ, ಕನಕಪುರ, ಚನ್ನಪಟ್ಟಣ, ಮುರಗೋಡು, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆಯಾಗಿದೆ.

ಇದನ್ನೂ ಓದಿ: ನಿಗದಿತ ಸ್ಥಳದಲ್ಲಿ ನಿಲ್ಲಿಸದ KSRTC ಬಸ್: ಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರಿಗೆ ಜಯ; 1000 ರೂ. ಪರಿಹಾರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights