ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವತಿಯನ್ನು ಅತ್ಯಾಚಾರಗೈದು ಕೊಂದ ತಂದೆ; ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಪತಿಯ ಮೃತದೇಹ ಪತ್ತೆ
ಪ್ರೀತಿಸಿ ಮದುವೆಯಾಗಿದ್ದಕ್ಕೆ 21 ವರ್ಷದ ಯುವತಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಹೇಯ ಕೃತ್ಯ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನವೆಂಬರ್ ತಿಂಗಳ ಆರಂಭದಲ್ಲಿ ನಡೆದಿತ್ತು. ದುಷ್ಕೃತ್ಯ ನಡೆದ ಕೆಲವು ದಿನಗಳ ಬಳಿಕ, ಆಕೆ ಪತಿ (ಪ್ರಿಯಕರ) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೂರ ಕೃತ್ಯಕ್ಕೆ ಬಲಿಯಾದ ಯುವತಿಯ ಪತಿ, ಇಚ್ಹಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆತನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆದರೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಯಾಂಕ್ ಅವಸ್ತಿ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಭೋಪಾಲ್‌ನ ರಾತಿಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೃತ ವ್ಯಕ್ತಿಯ ಪತ್ನಿಯನ್ನು ಆಕೆಯ ತಂದೆ (55) ಅತ್ಯಾಚಾರ ಮಾಡಿ ಕೊಂದಿದ್ದಾರೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದಾರೆ.
ಈ ಹೇಯ ಕೃತ್ಯವಯ ಸಮಸ್‌ಗಢ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ತಂದೆಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರ ಸಮಸ್‌ಗಢ ಪ್ರದೇಶದ ಪಿಲೋಟಾ ನುಲ್ಲಾ ಬಳಿ ಯುವತಿ ಮತ್ತು ಆಕೆಯ ಆರು ತಿಂಗಳ ಮಗುವಿನ ಮೃತದೇಹ ಪತ್ತೆಯಾಗಿತ್ತು. ನಂತರ, ವಿಷಯ ಬೆಳಕಿಗೆ ಬಂದಿತು.
ಇದನ್ನೂ ಓದಿ: ರೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ; ಸಾಮೂಹಿಕ ಅತ್ಯಾಚಾರದ ಶಂಕೆ
ಪೊಲೀಸರ ಪ್ರಕಾರ, ಸೆಹೋರ್ ಜಿಲ್ಲೆಯ ಬಿಲ್ಕಿಸ್‌ಗಂಜ್ ನಿವಾಸಿಯಾದ ಸಂತ್ರಸ್ತ ಯುವತಿ ಸುಮಾರು ಒಂದು ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು.
ನವೆಂಬರ್ 04ರಂದು ಆಕೆಯ ಪುಟ್ಟ ಮಗು ಅನಾರೋಗ್ಯದಿಂದ ಸಾವನ್ನಪ್ಪಿತ್ತು. ಮಗುವಿನ ಸಂಸ್ಕಾರಕ್ಕೆ ಆಯೆಕ ಹಿರಿಯ ಸಹೋದರಿ, ಆಕೆಯ ತಂದೆ ಮತ್ತು ಸಹೋದರನನ್ನು ಕರೆದಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಮೋಟಾರು ಸೈಕಲ್‌ನಲ್ಲಿ ಶವಸಂಸ್ಕಾರಕ್ಕೆ ಹೋಗುತ್ತಿದ್ದಾಗ ಆರೋಪಿ ತಂದೆ ಸಂತ್ರಸ್ತೆಯನ್ನು ಸಮಸ್‌ಗಢ ಅರಣ್ಯದೊಳಗೆ ಕರೆದೊಯ್ದು ಅತ್ಯಾಚಾರ ಎಸಗಿ ಕೊಂದಿದ್ದಾನೆ ಎಂದು ಆರೋಪಿಸಿಲಾಗಿದೆ. ಆರೋಪಿಯು ಕಾಡಿನಿಂದ ಹೊರಬಂದು ತನ್ನ ಮಗನಿಗೆ ಘಟನೆಯನ್ನು ವಿವರಿಸಿದ್ದಾನೆ. ನಂತರ, ಇಬ್ಬರೂ ಹಳ್ಳಿಗೆ ಮರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಆರೋಪಿಯು ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಮತ್ತು ಸಂತ್ರಸ್ತೆ ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ನಂತರ ತಾನು ಮತ್ತು ತನ್ನ ಕುಟುಂಬದ ಇತರ ಸದಸ್ಯರು ಸಂತ್ರಸ್ತೆಯ ಮೇಲೆ ಕೋಪಗೊಂಡಿದ್ದರು” ಎಂದು ಅಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹೇಯ ಕೃತ್ಯ: ಬಾಲಕಿಯ ಮೇಲೆ 400 ಮಂದಿ ಕಾಮುಕರಿಂದ ಅತ್ಯಾಚಾರ

