ಬೆಂಗಳೂರು: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಪೋಸ್ಟ್; ಯುವಕನ್ನು ಠಾಣೆಗೆ ಕರೆಸಿದ ಪೊಲೀಸರು!
ಫೇಸ್ಬುಕ್ನಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಠಾಣೆಗೆ ಕರೆಸಿದ ಬೆಂಗಳೂರು ಗ್ರಾಮಾಂತರ ಪೊಲೀಸರು, ಆತನಿಗೆ ಬುದ್ದಿವಾದ ಹೇಳಿ, ಆತನಿಂದ ಬಹಿರಂಗವಾಗಿ ಕ್ಷಮೆಯಾಚಿಸಿ ವಾಪಸ್ ಕಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಡುವಿನಪುರ ನಿವಾಸಿ ಸಚಿನ್ ಎಂಬುವವನು ತನ್ನ ಫೇಸ್ಬುಕ್ ಖಾತೆಯಲ್ಲಿ ಅಂಬೇಡ್ಕರ್ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಅವಮಾನ ಮಾಡಿದ್ದು, ಆತನ ವಿರುದ್ದ ಕ್ರಮ ಕೈಗೊಳ್ಳಿ ಅಂತ ಸ್ಥಳಿಯ ಅಂಬೇಡ್ಕರ್ ಅಭಿಮಾನಿಗಳು ಮತ್ತು ದಲಿತ ಮುಖಂಡರು ಪೊಲೀಸ್ ಠಾಣೆಗೆ ದೂರು ನೀಡಿ ಪ್ರತಿಭಟನೆ ನಡೆಸಿದ್ದರು.
ಹೀಗಾಗಿ ದೂರಿನ ಸೂಕ್ಷ್ಮತೆ ಅರಿತ ನಂದಗುಡಿ ಪೊಲೀಸರು ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕನನ್ನು ಠಾಣೆಗೆ ಕರೆಸಿ ಬುದ್ದಿವಾದ ಹೇಳಿದ್ದಾರೆ.
ಜತೆಗೆ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಯುವಕನ ಕೈಗೆ ಅಂಬೇಡ್ಕರ್ ಪೋಟೋ ಕೊಟ್ಟು ಅದಕ್ಕೆ ಹೂವಿನ ಹಾರ ಹಾಕಿಸುವ ಮೂಲಕ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಸಚಿನ್ ಎಂಬುವನಿಂದಲೇ ಬಹಿರಂಗವಾಗಿ ಕ್ಷಮೆ ಕೇಳಿಸಿದ್ದಾರೆ. ಬಹಿರಂಗವಾಗಿ ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಇಂತಹ ಶಾಂತಿ ಸುವ್ಯವಸ್ಥೆ ಕದಡಿಸುವಂತಹ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕದಂತೆ ಯುವಕನಿಗೆ ಪೊಲೀಸರು ಎಚ್ಚರಿಕೆ ನೀಡಿ ವಾಪಸ್ ಕಳಿಸಿದ್ದಾರೆ.

