ಉದ್ಯೋಗ: ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಮುಂದಾದ ಸರ್ಕಾರ!

ಶಿಕ್ಷಕರ ಹುದ್ದೆಯನ್ನು ಪಡೆಯುವ ಕನಸು ಹೊತ್ತು BED – DED ಪದವಿ ಪಡೆದುಕೊಂಡಿದ್ದ ಅಭ್ಯರ್ಥಿಗಳಿಗೆ ತಮ್ಮ ಕನಸನ್ನು ನನಸಾಗಿಕೊಳ್ಳುವ ಸಮಯ ಸಮೀಪಿಸಿದೆ. ರಾಜ್ಯ ಸರ್ಕಾರವು ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳ ಪೈಕಿ 15,000 ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ಮುಂದಾಗಿದ್ದು, ಶೀಘ್ರದಲ್ಲಿ ಅಧಿಸೂಚನೆ ಹೊರಬೀಳಲಿದೆ.

ಕೊರೊನಾ ಸೋಂಕು ಆಕ್ರಮಿಸಿದ ನಂತರ ರಾಜ್ಯದ ಜನರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಹಲವಾರು ಪೋಷಕರು ತಮ್ಮ ಮಕ್ಕಳುನ್ನು ಖಾಸಗಿ ಶಾಲೆಯಿಂದ ಕರೆತಂದು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಹೀಗಾಗಿ, ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಮಾತ್ರವಲ್ಲದೆ, ಈಗಾಗಲೇ ಖಾಲಿ ಇದ್ದ ಶಿಕ್ಷಕರ ಹುದ್ದೆಯಿಂದಾಗಿ ಈಗ ಶಿಕ್ಷಕರನ್ನು ನೇಮಿಸಿಕೊಳ್ಳಬೇಕಾದ ಅಗತ್ಯ ಶಿಕ್ಷಣ ಇಲಾಖೆಗೆ ಎದುರಾಗಿದೆ. ಹೀಗಾಗಿ, ರಾಜ್ಯದಲ್ಲಿ ತುರ್ತಾಗಿ 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ.

15,000 ಶಿಕ್ಷಕರ ಹುದ್ದೆಗಳ ಪೈಕಿ, ಕಲ್ಯಾಣ ಕರ್ನಾಟಕ ಭಾಗಕ್ಕೆ 5,000, ಉಳಿದಂತೆ ಮುಂಬೈ ಕರ್ನಾಟಕ, ಕರಾವಳಿ, ಹಳೇ ಮೈಸೂರು ಭಾಗಕ್ಕೆ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ದೊರೆತಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವರ ಕಾರ್ಯಾಲಯ ತಿಳಿಸಿದೆ.

ಪಾರದರ್ಶಕ ನೇಮಕಾತಿ ನಡೆಯಲಿದ್ದು, ಸ್ಪಧಾತ್ಮಕ ಪರಿಕ್ಷೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ಯಾವುದೇ ರೀತಿಯ ಸಂದರ್ಶನ ಇರುವುದಿಲ್ಲ. ಲಿಖಿತ ಪರೀಕ್ಷೆಯಲ್ಲಿ ಗಳಿಸುವ ರ್ಯಾಂಕ್‌ ಆಧಾರದ ಮೇಲೆ ಅರ್ಹರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.  ನಡೆಯಲಿದೆ.

ಯಾವುದಾದರೂ ಪದವಿ ಜೊತೆಗೆ DED ಮತ್ತು BED ಪದವಿ ಪಡೆದಿರುವವರು, ಶಿಕ್ಷಕರ ಅರ್ಹತಾ ಪರೀಕ್ಷೆ(TET)ಯಲ್ಲಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿಯ ಕುರಿತು ಸಮಗ್ರ ವಿವರಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ದಾವಣಗೆರೆ: ಶಿಕ್ಷಕರ ತಲೆ ಮೇಲೆ ಕಸದ ಬುಟ್ಟಿ ಹಾಕಿದ್ದ ಪುಂಡ ವಿದ್ಯಾರ್ಥಿಗಳಿಗೆ ಶಾಲೆಯಿಂದ ಗೇಟ್‌ಪಾಸ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights