Fact check: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿಲ್ಲ

ಸ್ವರ್ಧಾತ್ಮಕ ಪರಿಕ್ಷೆಗಳನ್ನು ಫೆಬ್ರವರಿ 6 ರಿಂದ 28 ರವರೆಗೂ ನೆಡೆಸಲು ಬೆಂಗಳೂರು, ಬೆಂಗಳೂರು ನಗರ, ಬೆಂಗಳೂರು ಉತ್ತರ, ಮೈಸೂರು, ಶಿವಮೊಗ್ಗ, ಧಾರವಾಡ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ, ಮಂಗಳೂರು ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ, ಅಗತ್ಯ ಸೌಕರ್ಯಗಳು ಕಲ್ಪಿಸುವಂತೆ ಉನ್ನತ ಶಿಕ್ಷಣ ಇಲಾಖೆ ಸಂಬಂಧಿತ ಕುಲಪತಿಗಳಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

“ಪರೀಕ್ಷೆಗಳಿಗೆ ಸಿದ್ಧವಾಗಲು ಒಂದು ತಿಂಗಳು ಅವಕಾಶ ನೀಡಿ, ವೇಳಾಪಟ್ಟಿಯನ್ನು ಒಂದು ತಿಂಗಳು ಮುಂಚಿತವಾಗಿಯೇ ಪ್ರಕಟಿಸಬೇಕು. ದಿಢೀರ್ ಪರೀಕ್ಷೆ ನಡೆಸಬಾರದು. ಪರೀಕ್ಷೆಯನ್ನು ಡಿಸೆಂಬರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಅಧಿಕೃತ ದಿನಾಂಕವನ್ನು ಪ್ರಕಟಿಸಿರಲಿಲ್ಲ. ಹೀಗಾಗಿ, ಪರೀಕ್ಷೆಗೆ ಸಜ್ಜಾಗಲು ಕೆಇಎ ಹೆಚ್ಚಿನ ಕಾಲಾವಕಾಶ ನೀಡಬೇಕು ಮತ್ತು ಅತುರವಾಗಿ ಪರೀಕ್ಷೆಗಳನ್ನು ನಡೆಸಬಾರದುʼʼ ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಮತ್ತು ಪರೀಕ್ಷಾ ಕೇಂದ್ರಗಳನ್ನು ಪ್ರಕಟಿಸಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪಷ್ಟಪಡಿಸಿದೆ. ಅಂತಿಮ ವೇಳಾಪಟ್ಟಿಗೆ ಸಂಬಂಧಿಸಿದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ ಎಂದು ಕೆಇಎ ಪ್ರಾಧಿಕಾರ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ, ಪ್ರಸ್ತಾವಿತ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಈ ಬಗ್ಗೆ ಆಕ್ಷೇಪಗಳನ್ನು ಆಹ್ವಾನಿಸಲಾಗಿತ್ತು. ಅಕ್ಷೇಪಗಳನ್ನು ಪರಿಶೀಲಿಸಿ ಶೀಘ್ರ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

“2016ರಲ್ಲಿ ನಡೆದ ಪರೀಕ್ಷೆಯಲ್ಲಿ ಲೋಪಗಳಾಗಿದ್ದವು. ಇತಿಹಾಸ ಪ್ರಶ್ನೆಪತ್ರಿಕೆಯಲ್ಲಿ ವೆಬ್‌ತಾಣದಿಂದ ಪ್ರಶ್ನೆಗಳನ್ನು ಯಥಾವತ್ತಾಗಿ ತೆಗೆದು ನೀಡಲಾಗಿತ್ತು. ಹೀಗಾಗಿ, ಈ ಬಾರಿಯಾದರೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು” ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.


ಇದನ್ನು ಓದಿರಿ: Fact check: ಉಡುಪಿ ಕಾಲೇಜಿನಲ್ಲಿ ಕೇಸರಿ ಶಾಲು, ಪೇಟ ಹಂಚಿದ್ದು ಮುಸ್ಲಿಮರಲ್ಲ, ಹಿಂದುತ್ವವಾದಿಗಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights