ಫ್ಯಾಕ್ಟ್‌ಚೆಕ್ : ಪ್ರಿಯಾಂಕ ಗಾಂಧಿ ಪ್ರತಿಭಟನೆಗೆ ಸಂಬಂಧವಿಲ್ಲದ ಆಡಿಯೋವನ್ನ ಜೋಡಿಸಿ ವಿಡಿಯೊ ವೈರಲ್ ಮಾಡಲಾಗಿದೆ

ಬೆಲೆ ಏರಿಕೆ ಮತ್ತು ನಿರುದ್ಯೋಗ ಸೇರಿದಂತೆ ಹಲವು ವಿಷಯಗಳಲ್ಲಿ  BJP ದ್ವೇಷದ ರಾಜಕಾರಣ ಮಾಡುತ್ತಿದ್ದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪ್ರಿಯಾಂಕ ಗಾಂಧಿ ರಸ್ತೆಯಲ್ಲೆ ಪ್ರತಿಭಟನೆ ಮಾಡುವಾಗ ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಅವರು ಹಾಡುಗಳನ್ನು ಹಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪ್ರಿಯಾಂಕ ಗಾಂಧಿ ಈ ಹಾಡುಗಳನ್ನು ನಿಜವಾಗಿಯೂ ಹಾಡಿದ್ದರೆ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಪ್ಯಾಕ್ಟ್‌ಚೆಕ್ :

ಸಂಬಂಧಿತ ಕೀವರ್ಡ್‌ಗಳೊಂದಿಗೆ ಗೂಗಲ್ ಸರ್ಚ್ ಮಾಡಿದಾಗ ಘಟನೆಗೆ ಸಂಬಂಧಿಸಿದ ಸುದ್ದಿ ಲೇಖನಗಳು ಲಭ್ಯವಾಗಿವೆ. ಲೇಖನದ ಪ್ರಕಾರ, ಬೆಲೆ ಏರಿಕೆ ಮತ್ತು ನಿರುದ್ಯೋಗ ಸೇರಿದಂತೆ ಹಲವು ವಿಷಯಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಶುಕ್ರವಾರ ದೆಹಲಿ ಪೊಲೀಸರು ಬಂಧಿಸಿದ್ದರು.

ಈ ಘಟನೆಯಿಂದ ಸೂಚನೆಯನ್ನು ತೆಗೆದುಕೊಂಡು,  ಸಂಬಂಧಿತ ಕೀವರ್ಡ್‌ಗಳೊಂದಿಗೆ ಸರ್ಚ್ಡಿದಾಗ,ಭಾರತೀಯ ಯುವ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ವೀಡಿಯೊವನ್ನು ಕಂಡುಕೊಂಡಿದ್ದೇವೆ. ವಿವರಣೆಯು “जब जब मोदी डरता है पुलिस को आगे करता है” ( ಅನುವಾದ: ಮೋದಿ ಹೆದರಿದಾಗಲೆಲ್ಲಾ ಅವರು ಪೊಲೀಸರನ್ನು ಮುಂದೆ ಬಿಡುತ್ತಾರೆ). ಟ್ವೀಟ್ ಅನ್ನು ಇಲ್ಲಿ ಕಾಣಬಹುದು.

ಈ ವೀಡಿಯೋದಲ್ಲಿ, ಪ್ರಿಯಾಂಕಾ ಗಾಂಧಿ ಮತ್ತು ಅವರ ಬೆಂಬಲಿಗರು, “ಜಬ್ ಜಬ್ ಮೋದಿ ಡರ್ತಾ ಹೈ ಪೊಲಿಸ್ ಕೋ ಆಗೇ ಕರತಾ ಹೇ” ಎಂದು ಘೋಷಣೆ ಕೂಗುವುದನ್ನು ಕೇಳಬಹುದು. ಇದೇ ಘಟನೆಯ ವೀಡಿಯೊವನ್ನು ‘ವಿ6 ನ್ಯೂಸ್ ತೆಲುಗು’ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಪ್ರಿಯಾಂಕಾ ಗಾಂಧಿ ಮತ್ತು ಅವರ ಬೆಂಬಲಿಗರು ಅದೇ ಘೋಷಣೆಯನ್ನು ಕೂಗುತ್ತಿರುವುದನ್ನು ಈ ವೀಡಿಯೊದಲ್ಲಿ ಕೇಳಬಹುದು.

ಮತ್ತಷ್ಟು ಸರ್ಚ್ ಮಾಡಿದಾಗ, ವೈರಲ್ ವೀಡಿಯೊದಲ್ಲಿ ಬಳಸಲಾದ ಹಾಡನ್ನು 09 ಜನವರಿ 2019 ರಂದು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾದ ಈ ವೀಡಿಯೊದಿಂದ ತೆಗೆದುಕೊಳ್ಳಲಾಗಿದೆ ಎಂದು ಕಂಡುಕೊಂಡಿದ್ದೇವೆ.

ಒಟ್ಟಾರೆಯಾಗಿ ಹೇಳುವುದಾದರೆ, ಮೂಲ ವೀಡಿಯೊವನ್ನು 05 ಆಗಸ್ಟ್ 2022 ರಂದು ಭಾರತೀಯ ಯುವ ಕಾಂಗ್ರೆಸ್‌ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದೆ. ಈ ವೀಡಿಯೊದಲ್ಲಿ, ಪ್ರಿಯಾಂಕಾ ಗಾಂಧಿ ಅವರು “ಜಬ್ ಜಬ್ ಮೋದಿ ಡಾರತಾ ಹೈ ಪುಲಿಸ್ ಹ” ಎಂಬ ಘೋಷಣೆಯನ್ನು ಕೂಗುತ್ತಿರುವುದನ್ನು ಕಾಣಬಹುದು. ಕೇಂದ್ರ ಸರ್ಕಾರದ ವಿರುದ್ಧ ಹಲವು ವಿಷಯಗಳ ಕುರಿತು ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಈ ವಿಡಿಯೋ ದಾಖಲಾಗಿದೆ. ವೀಡಿಯೊದಲ್ಲಿನ ಆಡಿಯೊವನ್ನು ಸಂಬಂಧವಿಲ್ಲದ ಹಾಡಿನೊಂದಿಗೆ ಬದಲಾಯಿಸಲಾಗಿದೆ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ಧ್ವಜಕ್ಕೆ ಬೆಂಕಿ ಹಚ್ಚಿದ್ದು RSS ಕಾರ್ಯಕರ್ತನಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights