ಫ್ಯಾಕ್ಟ್‌ಚೆಕ್: ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ ಎನ್ನುವುದು ಸುಳ್ಳು

ಸ್ವತಂತ್ರ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿ ಚಪ್ಪಲಿಗಳಲ್ಲಿ ಹೊಡೆದಾಡಿಕೊಂಡಿದ್ದಾರೆ ಎನ್ನುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ತೆಲಂಗಾಣದ ಕರೀಂನಗರ ಕಾಂಗ್ರೆಸ್ ಕಚೇರಿಯಲ್ಲಿ ಈ ಘಟನೆ ನಡೆದಿದೆ ಎಂದು ಪ್ರತಿಪಾದಿಸಲಾಗಿದೆ. ಈ ವಿಡಿಯೊ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

https://twitter.com/VISHNUK35030487/status/1559863573324500992

ಫ್ಯಾಕ್ಟ್‌ಚೆಕ್ :

ವೈರಲ್ ವಿಡಿಯೋದಲ್ಲಿ ಪ್ರತಿಪಾದಿಸಿ ಮಾಡಲಾದ ಪೋಸ್ಟ್‌ನ ಕೀವರ್ಡ್‌ಗಳನ್ನು ಬಳಸಿ ಗೂಗಲ್‌ ಸರ್ಚ್ ಮಾಡಿದಾಗ ವೈರಲ್ ವಿಡಿಯೋದಲ್ಲಿರುವ ಘಟನೆಯು 8 ವರ್ಷಗಳ ಹಿಂದಿನದ್ದು ಮತ್ತು YSR ಕಾಂಗ್ರೆಸ್ ಪಕ್ಷದ ಸದಸ್ಯರು ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಘಟನೆ ಎಂದು ತಿಳಿದುಬಂದಿದೆ. ಆದರೆ ಇರು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಮಾಹಿತಿ ನೀಡದ ಕಾರಣ ವೈಎಸ್‌ಆರ್ ಕಾಂಗ್ರೆಸ್‌ನ ಮಹಿಳಾ ನಾಯಕಿಯೊಬ್ಬರು ತಮ್ಮ ಪತಿಯೊಂದಿಗೆ ಪಕ್ಷದ ಜಿಲ್ಲಾಧ್ಯಕ್ಷರನ್ನು ಥಳಿಸಿದ್ದಾರೆ ಎಂದು NDTV ವರದಿ ಮಾಡಿದೆ.

ಘಟನೆಯು ಆಗಸ್ಟ್ 15, 2014 ರಂದು ನಡೆದಿದ್ದು, ಇದನ್ನು ಡೆಕ್ಕನ್ ಕ್ರಾನಿಕಲ್ ವರದಿ ಮಾಡಿದೆ. ಸುದ್ದಿ ವರದಿಯ ಪ್ರಕಾರ, ಮಹಿಳಾ ವೈಎಸ್‌ಆರ್ ಕಾಂಗ್ರೆಸ್ ನಾಯಕಿ ಗಂಟಾ ಸುಶೀಲಾ ಮತ್ತು ಅವರ ಪತಿ ಸತೀಶ್ ಅವರು ಪಕ್ಷದ ಜಿಲ್ಲಾಧ್ಯಕ್ಷ ಸಿಂಗಿರೆಡ್ಡಿ ಭಾಸ್ಕರ್ ರೆಡ್ಡಿ ಅವರಿಗೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಳಿಸಿದ್ದಾರೆ ಎಂದು ವರದಿ ಮಾಡಿದೆ.

ಸೀತಾರಾಂಪುರದಲ್ಲಿರುವ ಪಕ್ಷದ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬೆನ್ನಲ್ಲೇ ಸ್ವಯಂ ಘೋಷಿತ ಅಧ್ಯಕ್ಷೆ ಗಂಟಾ ಸುಶೀಲಾ  ಹಾಗೂ ಅವರ ಪತಿ ಸತೀಶ್‌ರವರು, ಜಿಲ್ಲಾಧ್ಯಕ್ಷರಾದ ಸಿಂಗಿರೆಡ್ಡಿ ಭಾಸ್ಕರ್ ರೆಡ್ಡಿ ಎಂಬುವವರ ಮೇಲೆ ತೀವ್ರ ವಾಗ್ವಾದ ನಡೆಸಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಪಕ್ಷದ ಇತರ ಸದಸ್ಯರು ದಂಪತಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ ಸುಶೀಲಾ ಅವರನ್ನು ತಡೆಯಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ.

ಜಿಲ್ಲಾಧ್ಯಕ್ಷರಾದ ಸಿಂಗಿರೆಡ್ಡಿ ಭಾಸ್ಕರ್ ರೆಡ್ಡಿಯವರು ಪಕ್ಷದ ಅನೇಕ ಕಾರ್ಯಕ್ರಮಗಳನ್ನು ತಮ್ಮ ವೈಯಕ್ತಿಕ ಕಾರ್ಯಕ್ರಮಗಳಂತೆ ಆಯೋಜಿಸುತ್ತಿದ್ದಾರೆ. ಅವರು ಯಾವುದೇ ಸದಸ್ಯರೊಂದಿಗೆ ಚರ್ಚಿಸುತ್ತಿಲ್ಲ. ಜಿಲ್ಲೆಯಲ್ಲಿ ಪಕ್ಷವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ಶ್ರೀ ರೆಡ್ಡಿ ಅವರು ಪಕ್ಷದ ಮಹಿಳಾ ಕಾರ್ಯಕರ್ತರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಮತ್ತು ಅವರೊಂದಿಗೆ ಮಾತನಾಡುವಾಗ ಅಸಭ್ಯ ಭಾಷೆ ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ತೆಲಂಗಾಣದಲ್ಲಿ 8 ವರ್ಷಗಳ ಹಿಂದೆ ಸೀತಾರಾಂಪುರದಲ್ಲಿರುವ ತಮ್ಮ ಪಕ್ಷದ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಂದರ್ಭದಲ್ಲಿ ಜಗಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಪಕ್ಷದ ಸದಸ್ಯರು ಹೊಡೆದಾಡಿಕೊಂಡ ದೃಶ್ಯಗಳನ್ನು ತಿರುಚಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ತೆಲೆಂಗಾಣದ ಕಾರ್ಯಕರ್ತರು ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ಹೊಡೆದಾಡಿಕೊಂಡ ಇತ್ತೀಚಿನ ಘಟನೆ ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಇಂಡಿಯಾ ಟುಡೇ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ರೈತರ ಆತ್ಮಹತ್ಯೆ ಬಗ್ಗೆ ಸಂಸತ್ತಿನಲ್ಲಿ ಸುಳ್ಳು ಹೇಳಿದ BJP ಸಂಸದ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights