ಫ್ಯಾಕ್ಟ್‌ಚೆಕ್: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದು ಗುಜರಾತಿಗಳೆ?

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಗುಜರಾತ್ ಗೂಂಡಾಗಳು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಕೃತ್ಯವನ್ನು ಖಂಡಿಸಿ ಟ್ವಟರ್‌ನ ಬಳಕೆದಾರರು ಈ ಫೋಟೋವನ್ನು ಶೇರ್ ಮಾಡಿದ್ದಾರೆ.

“ನೀವು ಇಂದಿರಾ ಗಾಂಧಿ ಪ್ರತಿಮೆಯನ್ನು ನಾಶಪಡಿಸಬಹುದು, ಅವರ ಆಲೋಚನೆಗಳನಲ್ಲ” ಎಂಬ ಹೇಳಿಕೆಯೊಂದಿಗೆ ಉತ್ತರ ನಾಗ್ಪುರದ ಕಾಂಗ್ರೆಸ್ ಶಾಸಕ ಡಾ. ನಿತಿನ್ ರಾವುತ್ ಅವರ ಪರಿಶೀಲಿಸಿದ ಟ್ವಿಟರ್ ಖಾತೆಯಿಂದ  ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಈ ಘಟನೆ ಪ್ರಧಾನಿ ನರೇಂದ್ರ ಮೋದಿಯವರ ತವರು ಗುಜರಾತ್‌ನಲ್ಲಿ ನಡೆದಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

https://twitter.com/NitinRaut_INC/status/1571773075208933377?ref_src=twsrc%5Etfw

ಹಲವು ಸಾಮಾಜಿಕ ಮಾಧ್ಯಮದ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ನೋಡಬಹುದು.

“ಗುಜರಾತ್‌ನ ಕಜ್ರಾ ಗ್ರಾಮದಲ್ಲಿ, ಯುವಕನೊಬ್ಬ ಮೊದಲು ಸಾಮಾಜಿಕ ಮಾಧ್ಯಮದಲ್ಲಿ ಸವಾಲು ಹಾಕಿದನು, ನಂತರ ಗ್ರಾಮದ ಉದ್ಯಾನವನದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಿದ್ದಾನೆ” ಎಂದು ಖಲೀದ್ ಎಂಬ ಮತ್ತೊಬ್ಬ ಬಳಕೆದಾರರುಪೋಟೊವನ್ನು ಹಂಚಿಕೊಂಡಿದ್ದಾರೆ.

ಬಿಜೆಪಿಗೆ ನಾಚಿಕೆಯಾಗಬೇಕು, ನೀವು ದೇಶವನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯವಾಗದಿದ್ದರೆ, ಅದನ್ನು ಹಿಂದಕ್ಕೆ ಕೊಂಡೊಯ್ಯಬೇಡಿ ಎಂದು ಜೈ ಯಧುವಂಶಿ ಡೈಗ್ರಾ ಎಂಬುವವರು ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ಘಟನೆ ಹಿನ್ನಲೆ ಮತ್ತು ಇದರ ಸತ್ಯಾಸತ್ಯತೆ ಏನೆಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ನ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ. NHP ನ್ಯೂಸ್ ಮತ್ತು ಹಿಂದೂಸ್ತಾನ್ ನ್ಯೂಸ್ ಹಬ್ ನಂತಹ ಕೆವು ಸುದ್ದಿ ಮಾಧ್ಯಮಗಳು ಮಾಡಿರುವ ವರದಿಗಳು ಲಭ್ಯವಾಗಿವೆ. ಇಂದಿರಾ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಿರುವ ಘಟನೆ ನಡೆದಿರುವುದು ಗುಜರಾತ್‌ನಲ್ಲಿ ಅಲ್ಲ, ಈ ಘಟನೆ ನೆಡದಿರುವುದು ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯವಾದ ರಾಜಸ್ಥಾನದಲ್ಲಿ ಎಂಬುದು ಸ್ಪಷ್ಟವಾಗಿದೆ. ಈ ಪ್ರತಿಮೆಯು ರಾಜಸ್ಥಾನದ ರಾಜ್ಯದ ಜುಂಜುನುವಿನ ಕಜ್ರಾ ಎಂಬ ಗ್ರಾಮದಲ್ಲಿದೆ. ಎಂದು ವರದಿಯಾಗಿದೆ.

hindi pm

Hindustan news hub

ಘಟನೆಯ ಬಗ್ಗೆ ಗ್ರಾಮದ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶಗೊಂಡಿದ್ದು. ಸರಪಂಚ್ ಪ್ರತಿನಿಧಿ ಮಂಜಿತ್ ಸಿಂಗ್ ತನ್ವಾರ್ ಸೇರಿದಂತೆ ಹಲವರು ಸ್ಥಳದಲ್ಲಿ ಆಗಮಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇಲ್ಲಿ ಸಿಕ್ಕಿರುವ ಮಾಹಿತಿ ಪ್ರಕಾರ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿರುವ ವ್ಯಕ್ತಿ ಸ್ವತಃ ಬಿಜೆಪಿ ಕಾರ್ಯಕರ್ತನಾಗಿದ್ದು. ವಾಟ್ಸಾಪ್ ಸ್ಟೇಟಸ್ ಆಧಾರದಲ್ಲಿ, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಎಂದು ಹಿಂದೂಸ್ಥಾನ್ ನ್ಯೂಸ್ ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ಘಟನೆ ನಡೆದಿರುವುದು ಗುಜರಾತ್‌ನಲ್ಲಿ ಅಲ್ಲ. ಈ ಘಟನೆಯು ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನದಲ್ಲಿ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: DFRAC

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ಹಂಸಲೇಖ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ, ಸ್ಪಷ್ಟನೆ ನೀಡಿದ ತೇಜಸ್ವಿನಿ ಹಂಸಲೇಖ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights