ಫ್ಯಾಕ್ಟ್‌ಚೆಕ್: ದೆಹಲಿಯ ದಸರಾದಲ್ಲಿ ಸೋನಿಯಾ ಗಾಂಧಿ ಪಾಲ್ಗೊಂಡಿದ್ದು ಇದೇ ಮೊದಲೇ?

ರಾಮಲೀಲಾ ಮೈದಾನದಲ್ಲಿ ನಡೆದ ದಸರಾ ಆಚರಣೆ ವೇಳೆ, ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿಯವರು ಶ್ರೀರಾಮ ಮತ್ತು ಲಕ್ಷ್ಮಣರ ವೇಷದಾರಿಗಳಿಗೆ ಮಕ್ಕಳಿಗೆ ತಿಲಕವನ್ನು ಇಡುತ್ತಿರುವ ಫೋಟೋ ಎಂದು ಹೇಳಿಕೊಂಡು ಪೇಸ್‌ಬುಕ್‌ನಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಿಂದೂ ಮತಗಳಿಗಾಗಿ ಇದೊಂದು ಚುನಾವಣಾ ತಂತ್ರಗಾರಿಕೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರತಿಪಾದಿಸಲಾಗುತ್ತಿದೆ.

ರಾಮ ಮಂದಿರ ನಿರ್ಮಾಣ ನಿಲ್ಲಿಸಲು 20 ವಕೀಲರನ್ನು ನೀಮಿಸಿದ್ದ ಇವರು, ಇಂದು ತಿಲಕವನ್ನು ಹಚ್ಚುತ್ತಿದ್ದಾರೆ. ಇನ್ನೂ ಎಷ್ಟು ಅಚ್ಚೇದಿನ್ ಬೇಕು ನಿಮಗೆ? ಚುನಾವಣೆ ಬರುವಾಗ ರಾಮ ಬೇಕಾಗಿದ್ದಾನೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಹಾಗಿದ್ದರೆ ಸೋನಿಯಾಗಾಂಧಿ ಇದೇ ಮೊದಲ ಬಾರಿಗೆ ಈ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆಯೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಫೋಟೋವನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಅದೇ ಚಿತ್ರವನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ 19 ಅಕ್ಟೋಬರ್ 2018 ರಂದು ರಾಮಲೀಲಾ ಮೈದಾನದಲ್ಲಿ ದಸರಾ ಆಚರಣೆಯ ಸಮಯದಲ್ಲಿ ಹಂಚಿಕೊಂಡಿರುವುದು ಕಂಡುಬಂದಿದೆ.

ರಾಮಲೀಲಾ ಮೈದಾನದಲ್ಲಿ ಸೋನಿಯಾ ಗಾಂಧಿಯವರು ದಸರಾ ಆಚರಣೆಯಲ್ಲಿ ಪಾಲ್ಗೊಂಡು, ಶ್ರೀರಾಮ, ಲಕ್ಷ್ಮಣ, ಹನುಮಾನ್ ವೇಷಧಾರಿಗಳಿಗೆ ತಿಲಕವಿಡುವ ಅಥವಾ ಧಾರ್ಮಿಕ ವಿಧಿವಿಧಾನಗಳನ್ನು ಮಾಡುವ ಹಳೆಯ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ಪ್ರತ್ಯೇಕ ಚಿತ್ರಗಳನ್ನು ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ರಾಮಲೀಲಾ ಮೈದಾನದಲ್ಲಿ ಸೋನಿಯಾ ಗಾಂಧಿ ದಸರಾ ಆಚರಣೆಯಲ್ಲಿ ಭಾಗವಹಿಸಿದ್ದು ಇದೇ ಮೊದಲಲ್ಲ. ಕನಿಷ್ಠ 2006 ರಿಂದ ಅವರು ಈ ಆಚರಣೆಯಲ್ಲಿ ಭಾಗವಹಿಸುವ ಹಲವಾರು ಚಿತ್ರಗಳು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಿದೆ. ಆದ್ದರಿಂದ ಇದೊಂದು ಚುನಾವಣೆ ಗಿಮಿಕ್ ಅಲ್ಲ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ಹಾವೊಂದು ನಿಧಿ ಕಾಯುತ್ತಿರುವ ವಿಡಿಯೋದ ವಾಸ್ತವವೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights