ಫ್ಯಾಕ್ಟ್‌ಚೆಕ್: ಕೇಂದ್ರ ಸಚಿವೆ ಇರಾನಿ ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯ ವೇಳಾ ಪಟ್ಟಿಯನ್ನು ಪರಿಶೀಲಿಸಿದರೆ ?

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು BJP ಯವರ ನಿದ್ದೆಗೆಡಿಸಿದೆ ಎಂಬ ಹೇಳಿಕೆಯೊಂದಿಗೆ ಕೆಲವು ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾರತ್ ಜೋಡೋ ಯಾತ್ರೆಯ ಅಪ್‌ಡೇಟ್‌ಗಳನ್ನು ಪರಿಶೀಲಿಸುತ್ತಿದ್ದಾರೆ ಎಂಬ ಫೋಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

“Rahul Gandhi day to day Schedule 2022-2023”  ಎಂಬ ಕಿರು ಹೊತ್ತಿಗೆಯನ್ನು ಸ್ಮೃತಿ ಇರಾನಿ ನೋಡುತ್ತಿರುವ  ಪೋಟೊದೊಂದಿಗೆ Is this real? ಎಂದು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ವೈರಲ್ ಫೋಟೋ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ,  ರಂದು ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ತಮ್ಮ ಟ್ವಿಟರ್ ಮೂಲಕ ಹಂಚಿಕೊಳ್ಳಲಾದ ಪೋಸ್ಟ್‌ವೊಂದು ಲಭ್ಯವಾಗಿದೆ.

18 ಸೆಪ್ಟಂಬರ್‌2022ರಲ್ಲಿ ಬಿಹಾರದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ್ದರು ಎಂದು Economic Times ವರದಿ ಮಾಡಿದೆ. ವರದಿಯ ಪ್ರಕಾರ ಬಿಹಾರದ ಪಾಟ್ನ ರಾಜ್ಯ BJP  ಪಕ್ಷದ ಸಭೆಯಲ್ಲಿ ಸ್ಮೃತಿ ಇರಾನಿ ಭಾಗವಹಿಸಿದ್ದರು. “ಮೋದಿ@20”  ಅಂಶಗಳನ್ನು ಆಧರಿಸಿದ ಈ ಸಭೆಯಲ್ಲಿ ಇರಾನಿಯೊಂದಿಗೆ ಸಂಪುಟ ಸಹೋದ್ಯೋಗಿ ಗಿರಿರಾಜ್ ಸಿಂಗ್, ಮಾಜಿ ಸಚಿವ ರವಿಶಂಕರ್ ಪ್ರಸಾದ್ ಮತ್ತು ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

18 sep 2022 ರಂದು ಬಿಹಾರದ ಪಾಟ್ನಾದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಸ್ಮೃತಿ ಇರಾನಿ ಭಾಗವಹಿಸಿದ ಸಂದರ್ಭದಲ್ಲಿ ಮೋದಿ@20  ಎಂಬ ಅಂಶಗಳ ಮೇಲೆ ಮುಂದಿನ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಮಾತನಾಡುತ್ತ, “ಈ ರಾಜ್ಯದಲ್ಲಿ, ಸರ್ಕಾರ ರಚಿಸಲು ಸದಾ ಇತರರ ಮೇಲೆ ಒಲವು ತೋರುವ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಮಾತನಾಡುತ್ತಾರೆ” ಎಂದು ಇರಾನಿ ನಿತೀಶ್ ಕುಮಾರ್ ಹೆಸರನ್ನು ಉಲ್ಲೇಖಿಸದೆ ಅವರ ವಿರುದ್ದ ಚಾಟಿ ಬೀಸಿದ್ದರು. ಈ ಸಂದರ್ಭದ ಚಿತ್ರವನ್ನು ಎಡಿಟ್ ಮಡುವ ಮೂಲಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ವೇಳಾ ಪಟ್ಟಿಯನ್ನು ಪರಿಶೀಲಿಸುತ್ತಿದ್ದಾರೆ ಎನ್ನುವಂತೆ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಶಾಲಾ ಮಕ್ಕಳೊಂದಿಗೆ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಚಿಕ್ಕ ಮಕ್ಕಳ ರೇಸ್ ಓಡೋಣವೇ? ಎಂಬ ಸವಾಲನ್ನು ಸ್ವೀಕರಿಸಿ ಅವರ ಜೊತೆಗೆ ಓಡಿದ್ದಾರೆ. ಜೊತೆಗೆ ತಮ್ಮೊಂದಿಗೆ ಇದ್ದ ಎಲ್ಲರನ್ನೂ ಓಟದಲ್ಲಿ ಭಾಗವಹಿಸುವಂತೆ ಮಾಡಿದ್ದಾರೆ.

https://twitter.com/srinivasiyc/status/1586559839978676224

ಈ ಹಿನ್ನಲೆಯಲ್ಲಿ ನೋಡುವುದಾದರೆ ಹಳೆಯ ಫೋಟೋವನ್ನು ಎಡಿಟ್ ಮಾಡುವ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ:


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights