ಫ್ಯಾಕ್ಟ್‌ಚೆಕ್ : EVM ಬಳಕೆಯನ್ನು ನಿಷೇಧಿಸಿದೆಯೇ ಚುನಾವಣಾ ಆಯೋಗ?
ಮುಂದಿನ 20 ವರ್ಷಗಳ ಕಾಲ ಭಾರತದಲ್ಲಿ ಇವಿಎಂ (electronic voting machines) ಗಳನ್ನು ಚುನಾವಣಾ ಆಯೋಗ ಬ್ಯಾನ್ ಮಾಡಿ ಆದೇಶ ಹೊರಡಿಸಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. 2014ರ ನಂತರ EVM ಗಳ ವಿಶ್ವಾಸಾರ್ಹತೆ ಕುರಿತಾಗಿ ಪರ ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೆ ಇಂತಹದೊಂದು ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಮೂರು ತಿಂಗಳ ಹಿಂದೆ “ಇಂಡಿಯಾ ಅಪ್‌ಡೇಟ್” ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಇದೇ ಪ್ರತಿಪಾದನೆಯೊಂದಿಗೆ ವಿಡಿಯೋ ವರದಿಯನ್ನು ಪ್ರಸಾರಮಾಡಿತ್ತು. ಅಂತಿಮವಾಗಿ, ಇವಿಎಂಗಳನ್ನು 20 ವರ್ಷಗಳವರೆಗೆ ನಿಷೇಧಿಸಲಾಗಿದೆ. ದೇಶದಲ್ಲಿ ಇನ್ನು ಮುಂದೆ ನಡೆಯುವ ಎಲ್ಲ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (EVM) ಬಳಕೆ ಇರುವುದಿಲ್ಲ ಎಂದು ಹೇಳಲಾಗುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರೂ ಈ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಸುದ್ದಿ ನಿಜವೇ? 20 ವರ್ಷಗಳವರೆಗೆ EVM ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಕರ್ನಾಟಕದಲ್ಲಿ 2023ರ 16ನೇ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದಂತೆ, ವಿದ್ಯುನ್ಮಾನ ಮತಯಂತ್ರಗಳ (EVM) ಬಳಕೆಯನ್ನು ನಿಷೇಧಿಸಲಾಇದೆ ಎಂಬ ಸುದ್ದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದು, ಈ ಸುದ್ದ ನಿಜವೇ ಎಂದು ಪರಿಶೀಲಿಸಿದಾಗ ಇದು ಸುಳ್ಳು ಅಥಾವ ನಕಲಿ ಸುದ್ದಿ ಎಂದು ಪಿಐಬಿ (PIB) ಫ್ಯಾಕ್ಟ್‌ಚೆಕ್ ವರದಿಯನ್ನು ಪ್ರಕಟಿಸಿದೆ.
https://twitter.com/PIBFactCheck/status/1640317907845492737?ref_src=twsrc%5Etfw%7Ctwcamp%5Etweetembed%7Ctwterm%5E1640317907845492737%7Ctwgr%5E828a44ad0e45cda04b9ab87b8c42c1b6326ccba8%7Ctwcon%5Es1_&ref_url=https%3A%2F%2Fwww.ndtv.com%2Findia-news%2Ffact-check-video-claims-electronic-voting-machines-have-been-banned-heres-the-truth-3899781
ಚುನಾವಣೆ ಹತ್ತಿರ ಬಂದಂತೆಲ್ಲ ವಿಪಕ್ಷಗಳು, ಸಾಮಾಜಿಕ ಕಾರ್ಯಕರ್ತರು, ತಜ್ಞರು EVMಗಳ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಲೇ ಇದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಿತಾಸಕ್ತಿಯಲ್ಲಿ EVMಗಳು ನಿಖರವಾಗಿರಬೇಕು ಮತ್ತು ಅವುಗಳ ಪರಿಣಾಮಕಾರಿತ್ವದ ಬಗ್ಗೆ ಇರುವ ಸಂದೇಹಗಳನ್ನು ಮುಖ್ಯ ಚುನಾವಣಾ ಆಯುಕ್ತರು ಪರಿಹರಿಸಬೇಕು ಎಂಬ ಕೂಗು ಕೇಳಿಬರುತ್ತಿದೆ.
EVM ನಿಷೇಧ ಕುರಿತಂತೆ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು ಎಂದು ಕೇಂದ್ರ ಸರ್ಕಾರದ ಪಿಐಬಿ ತಿಳಿಸಿದೆ. ‘ಇಂಡಿಯಾ ಅಪ್‌ಡೇಟ್’ ಎಂಬ ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸಾರವಾಗಿರುವ ಸುದ್ದಿಗೆ ಯಾವುದೇ ಆಧಾರ ಇಲ್ಲ. EVM ಬಳಕೆಯನ್ನು ನಿರ್ಬಂಧಿಸುವ ಕುರಿತಂತೆ ಯಾವುದೇ ರೀತಿಯ ಪ್ರಕಟಣೆ ಹೊರಬಿದ್ದಿಲ್ಲ ಎಂದು ಸ್ಪಷ್ಟಪಡಿಸಿರುವ PIB, ಇಂತಹ ಆಧಾರ ರಹಿತವಾದ ಪೋಸ್ಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಜನರಿಗೆ ಮನವಿ ಮಾಡಿದೆ ನೀಡಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ 20 ವರ್ಷಗಳವರೆಗೆ ಇವಿಎಂ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿರುವ ಪೋಸ್ಟ್ ಸುಳ್ಳು ಎಂದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ‘ಅದಾನಿ ಕಾಪಾಡಲು ನೂರೊಂದು ದಾರಿ’ ಎಂಬ ಪುಸ್ತಕವನ್ನು ಪ್ರಧಾನಿ ಮೋದಿ ಓದುತ್ತಿರುವುದು ನಿಜವೇ?

