ಫ್ಯಾಕ್ಟ್ಚೆಕ್ : ಮನಮೋಹನ್ ಸಿಂಗ್ ಸೋನಿಯಾ ಗಾಂಧಿ ಕಾಲಿಗೆ ಬಿದ್ದು ನಮಸ್ಕರಿಸಿದ್ದು ನಿಜವೇ?
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ ಎನ್ನುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫೋಟೋದಲ್ಲಿ ಕೇಸರಿ ಬಣ್ಣದ ಪೇಟಾ ಮತ್ತು ದೋತಿ ಧರಿಸಿರುವ ವ್ಯಕ್ತಿಯೊಬ್ಬರು ಸೋನಿಯಾ ಗಾಂಧಿಯವರ ಕಾಲಿಗೆ ಬಾಗಿ ನಮಸ್ಕರಿಸುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.
“ರಾಹುಲ್ ಗಾಂಧಿ ಎದುರಿಗೆ ಸೋನಿಯಾ ಗಾಂಧಿಯವರ ಕಾಲಿಗೆ ಮನಮೋಹನ್ ಸಿಂಗ್ ಬಿದ್ದು ಆರ್ಶೀವಾದ ಪಡೆದುಕೊಂಡಿದ್ದಾರೆ. 71 ವರ್ಷದ ಸೋನಿಯಾ ಕಾಳಿಗೆ 85 ವರ್ಷದ ಮನಮೋಹನ್ ಸಿಂಗ್ ಏಕೆ ಬೀಳಬೇಕು” ಎಂದು ಫೋಟೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಂಡಿದ್ದಾರೆ .
“ಗುಲಾಮರು ಆಕೆಯನ್ನು ದೇವರು, ತಾಯಿ ಎಂದು ಕರೆಯುತ್ತಾರೆ. ಆದರೆ ಆಕೆಗೆ ಕನಿಷ್ಟ ಸಾಮಾನ್ಯ ಜ್ಞಾನಿವಿಲ್ಲವೇ” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್ಅನ್ನು ಹಂಚಿಕೊಂಡಿದ್ದಾರೆ. ಪೋಸ್ಟ್ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ. ಚಿತ್ರವನ್ನು ಫೇಸ್ಬುಕ್ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ವೈರಲ್ ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾಧನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, ಇಂತಹದೇ ಚಿತ್ರ 2011ರ ಭಾರತೀಯ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಕಂಡುಬಂದಿದೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸೋನಿಯಾ ಗಾಂಧಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.
ಇದೇ ಸಮಾರಂಭದ ಇನ್ನೊಂದು ಫೋಟೋದಲ್ಲಿ ಮನಮೋಹನ್ ಸಿಂಗ್ ನೀಲಿ ಬಣ್ಣದ ಪೇಟಾ ಧರಿಸಿರುವುದು ಕಂಡುಬಂದಿದೆ. ಹಾಗಾಗಿ ಫೋಟೋದಲ್ಲಿ ಕಾಲಿಗೆ ನಮಸ್ಕರಿಸುತ್ತಿರುವ ವ್ಯಕ್ತಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಲ್ಲ ಎಂಬುದು ಸ್ಪಷ್ಟವಾಗಿದೆ.
ಅಲ್ಲದೇ ಈ ಸಮಾವೇಶ ನಡೆಯುತ್ತಿದ್ದ ಸಂದರ್ಭದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು ಮತ್ತು ಮನಮೋಹನ್ ಸಿಂಗ್ ಪ್ರಧಾನಿ ಹುದ್ದೆಯಲ್ಲಿದ್ದರು. ಈ ಫೊಟೋ ಹಲವು ವರ್ಷಗಳಿಂದ ಇದೇ ಪ್ರತಿಪಾದನೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ BJP ನಾಯಕರು ಈ ಚಿತ್ರವನ್ನು ಸುಳ್ಳು ಪ್ರತಿಪಾದನೆಯೊಂದಿಗೆ ನಾಮ್ಕಾವಸ್ತೆ ಪ್ರಧಾನಿ, ರಬ್ಬರ್ ಸ್ಟಾಪ್ ಎಂದೆಲ್ಲೆ ಅವಹೇಳನ ಮಾಡುತ್ತ ಪೋಸ್ಟ್ಅನ್ನು ಹಂಚಿಕೊಂಡಿದ್ದರು, ಇದು ಸುಳ್ಳು ಎಂದು ಫ್ಯಾಕ್ಟ್ಚೆಕ್ ವರದಿಯನ್ನು ಪ್ರಕಟಿಸಲಾಗಿತ್ತು.
ಈಗ ಚುನಾವಣೆ ಸಮೀಪಿಸುತ್ತಿದ್ದಂತೆ ಹಳೆಯ ಮತ್ತು ಸುಳ್ಳು ಪೋಸ್ಟ್ಅನ್ನು ಪುನಃ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.
ಇದನ್ನು ಓದಿರಿ : ಫ್ಯಾಕ್ಟ್ಚೆಕ್ : ಇದು ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರವೇ?

