ಫ್ಯಾಕ್ಟ್‌ಚೆಕ್ : ರೋಹಿತ್ ಶರ್ಮಾ ಅವರನ್ನು ಔಟ್ ಮಾಡುವುದು ಸುಲಭ ಎಂದರೆ CSK ತಂಡದ ತುಷಾರ್ ದೇಶಪಾಂಡೆ

ಇತ್ತೀಚೆಗೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ IPL ಪಂದ್ಯದಲ್ಲಿ ಚೆನೈ ಸೂಪರ್ ಕಿಂಗ್ಸ್ ತುಷಾರ್ ದೇಶಪಾಂಡೆ ಹಿಟ್‌ಮ್ಯಾನ್ ಮುಂಬೈ ಇಂಡಿಯನ್ಸ್‌ನ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಪಡೆದಿದ್ದರು. ತುಷಾರ್ ಎಸೆದ ಚೆಂಡಿಗೆ ವಿಚಲಿತರಾದ ರೋಹಿತ್ ಶರ್ಮಾ ಬೌಲ್ಡ್‌ ಆಗಿ  ಪೆವಿಲಿಯನ್‌ಗೆ ಮರಳಿದ್ದರು.

ರೋಹಿತ್ ಶರ್ಮಾ ಅವರನ್ನು ಓಟ್ ಮಾಡಿದ ತುಷಾರ್ ದೇಶಪಾಂಡೆ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯಲ್ಲಿದ್ದಾರ “ರೋಹಿತ್ ಶರ್ಮಾ ಅವರ ವಿಕೆಟ್ ತೆಗೆದುಕೊಳ್ಳುವುದು ತುಂಬಾ ಸುಲಭ. ಅವರು ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಅವರಂತೆ ಅಲ್ಲ ಎಂದು ಹೇಳಿದ್ದಾರೆಂದು ಸಾಮಾಜಿಕ ಮಾಧಯಮಗಳಲ್ಲಿ ಪೋಸ್ಟ್‌ ವೈರಲ್ ಆಗುತ್ತಿದೆ.

‘ರೋಹಿತ್ ಶರ್ಮಾ ಅವರ ವಿಕೆಟ್ ಪಡೆಯುವುದು ಸುಲಭ, ಏಕೆಂದರೆ ಅವರು ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲ್ಲರ್ಸ್‌ನಂತೆ ಅಲ್ಲ’ ಎಂಬ ಹೇಳಿಕೆ ನೀಡಿದ್ದಾರೆ ಎಂದು ಸ್ವತಃ ಕ್ರಿಕೆಟ್ ಪ್ರೇಮಿ ಎಂದು ಬರೆದುಕೊಂಡಿರುವ ವಿಕ್ರಮ್ ರಜಪೂತ್ ಅವರು ಟ್ವಿಟ್ಟರ್‌ನಲ್ಲಿ, ತುಷಾರ್ ದೇಶಪಾಂಡೆ ರೋಹಿತ್ ಶರ್ಮಾ ಅವರನ್ನು ಅವಮಾನಿಸಿದ್ದಾರೆ ಎಂದು ಪ್ರತಿಪಾದಿಸಿ ತುಷಾರ್ ದೇಶಪಾಂಡೆ ಅವರನ್ನು ಗುರಿಯಾಗಿಸಿಕೊಂಡು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

ಹಾಗಿದ್ದರೆ ಈ ಪೋಸ್ಟ್‌ನಲ್ಲಿ ತಿಳಿಸಿರುವಂತೆ ತುಷಾರ್ ದೇಶಪಾಂಡೆ ಮುಂಬೈ ಇಂಡಿಯನ್ಸ್‌ನ ನಾಯಕ ರೋಹಿತ್ ಶರ್ಮಾ ಕುರಿತಂತೆ ಇಂತಹ ಹೇಳಿಕೆ ನೀಡಿದ್ದಾರೆಯೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಿದಾಗ,
ತುಷಾರ್ ದೇಶಪಾಂಡೆ ಹೇಳಿದ್ದಾರೆ ಎನ್ನಲಾದ ಹೇಳಿಕೆ ನಕಲಿ ಎಂದು ತಿಳಿದು ಬಂದಿದೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಪೋಸ್ಟ್‌ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರತಿಕ್ರಿಯಿಸಿದ್ದು “ಮೇಲೆ ತಿಳಿಸಿದ ಎಲ್ಲರೂ ಕ್ರಿಕೇಟ್‌ನ ಲೆಜೆಂಡ್ (ದಂತಕಥೆಗಳ) ಗಳ ಬಗ್ಗೆ ನನಗೆ ಸಂಪೂರ್ಣ ಗೌರವವಿದೆ. ನಾನು ಯಾರ ಬಗ್ಗೆಯೂ ಅಂತಹ ಅವಹೇಳನಕಾರಿ ಹೇಳಿಕೆಗಳನ್ನು ನೀಡಿಲ್ಲ, ಹಾಗಾಗಿ ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ.

ಇನ್ನೂ ಹಲವರು ದೇಶಪಾಂಡೆಯವರ ಕಥೆಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ನಕಲಿ ಸುದ್ದಿಗಳನ್ನು ಹರಡದಂತೆ ಸಾಮಾಜಿಕ ಮಾಧ್ಯಮಗಳ ಬಳಕೆದಾರರನ್ನು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಚೆನ್ನೈನ ಸೂಪರ್ ಕಿಂಗ್ಸ್ ತಂಡದ ಬೌಲರ್ ತುಷಾರ್ ದೇಶಪಾಂಡೆ ಮುಂಬೈ ಇಂಡಿಯನ್ಸ್‌ ತಂಡದ ವಿರುದ್ದ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದ ನಂತರ ‘ರೋಹಿತ್ ಶರ್ಮಾ ಅವರ ವಿಕೆಟ್ ಪಡೆಯುವುದು ಸುಲಭ, ಏಕೆಂದರೆ ಅವರು ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲ್ಲರ್ಸ್‌ನಂತೆ ಅಲ್ಲ’ ಎಂದು ಹೇಳಿದ್ದಾರೆ ಎಂಬ ಹೇಳಿಕೆ ನಕಲಿ ಎಂದು ತಿಳಿದುಬಂದಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: DFRC

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ‘Go back Modi’ ಎಂದು ಎಡಿಟ್ ಮಾಡಿದ ಚಿತ್ರ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights