ಫ್ಯಾಕ್ಟ್‌ಚೆಕ್ : ಮೆಟ್ರೋ ರೈಲಿನಲ್ಲಿ ವ್ಯಕ್ತಿಯೊಬ್ಬ ಸ್ನಾನ ಮಾಡುತ್ತಿರುವ ವಿಡಿಯೋ ದೆಹಲಿಯದಲ್ಲ! ಇನ್ನೆಲ್ಲಿಯದ್ದು?
ಮೆಟ್ರೋ ರೈಲಿನಲ್ಲಿ ವ್ಯಕ್ತಿಯೊಬ್ಬ ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋವನ್ನು ಶೇರ್ ಮಾಡುತ್ತಿರುವವರು ಇದನ್ನು ದೆಹಲಿ ಮೆಟ್ರೋದಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಪ್ರತಿಪಾದಿಸಿ ಪೋಸ್ಟ್ ಮಾಡಿದ್ದಾರೆ.
https://twitter.com/Chandniparmar14/status/1647197310462619650?s=20
ಹಾಗಿದ್ದರೆ ಈ ಫೊಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೋವನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ನವೆಂಬರ್ 2022 ರ ಹಿಂದಿನದು ಮತ್ತು ನ್ಯೂಯಾರ್ಕ್‌ನದ್ದು ಎಂದು ತಿಳಿದು ಬಂದಿದೆ.
ಏಪ್ರಿಲ್ 10 ರ ಇಂಡಿಯಾ ಟುಡೇ ಲೇಖನವನ್ನು ಪ್ರಕಟಿಸಿ ಇದು ಹಳೆಯ ವಿಡಿಯೋ ಎಂದು ವರದಿ ಮಾಡಿದೆ. ನ್ಯೂಯಾರ್ಕ್ ಸಿಟಿ ರೈಲಿನೊಳಗೆ ಒಬ್ಬ ವ್ಯಕ್ತಿ ಸ್ನಾನ ಮಾಡುತ್ತಿದ್ದುದನ್ನು ವರದಿ ಮಾಡಿದೆ. ವೈರಲ್ ವಿಡಿಯೊದಲ್ಲಿ ಕಂಡುಬರುವ ವ್ಯಕ್ತಿ ಪ್ರಿನ್ಸ್ ಜೀ, ಅವರು ಕಂಟೆಂಟ್ ಕ್ರಿಯೇಟರ್ ಆಗಿದ್ದಾರೆ ಎಂದು ಅದು ಹೇಳಿದೆ.

ಪ್ರಿನ್ಸ್ ಝೀ ಅದೇ ವೀಡಿಯೊವನ್ನು 11 ನವೆಂಬರ್ 2022 ರಂದು ತಮ್ಮ ಪರಿಶೀಲಿಸಿದ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “NYC ರೈಲಿನಲ್ಲಿ ಸ್ನಾನ ಮಾಡುತ್ತಿದ್ದೇನೆ” ಎಂದು ಅವರು ವೀಡಿಯೊಗೆ ಶೀರ್ಷಿಕೆ ನೀಡಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ವ್ಯಕ್ತಿಯೊಬ್ಬ ರೈಲಿನೊಳಗೆ ಸ್ನಾನ ಮಾಡುತ್ತಿರುವ ವೈರಲ್ ವಿಡಿಯೊ 2022ರ ನ್ಯೂಯಾರ್ಕ್‌ನದ್ದು ಎಂದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಕೇಂದ್ರ ಸರ್ಕಾರ ರೈತರ ಖಾತೆಗೆ ಲಕ್ಷ ಲಕ್ಷ ಹಣ ಹಾಕಿದೆ ಎಂದು ಸುಳ್ಳು ಹೇಳಿದ ನಳಿನ್ ಕುಮಾರ್ ಕಟೀಲ್

