ಫ್ಯಾಕ್ಟ್‌ಚೆಕ್: 1st PUC ಯಲ್ಲೇ ಫೇಲ್ ಆಗಿದ್ರಾ ಪ್ರಯಾಂಕ್ ಖರ್ಗೆ? ಇಲ್ಲಿದೆ ಫುಲ್ ಡೀಟೇಲ್ಸ್!

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಒಂದು ಕಡೆ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರೆಂಟಿಗಳನ್ನು ಜಾರಿ ಮಾಡುವ ಸಿದ್ದತೆಯಲ್ಲಿ ಕಾರ್ಯಪ್ರವೃತ್ತರಾಗಿದ್ದರೆ, ಇನ್ನೊಂದು ಕಡೆ BJP ಆಡಳಿತಾವಧಿಯಲ್ಲಿ ನಡೆದ ಅಕ್ರಮಗಳನ್ನು ಬಯಲಿಗೆಳೆಯಲು ಪ್ರಾರಂಭಿಸಿದೆ. ಅದರ ಭಾಗವಾಗಿ BJP ಆಡಳಿತಾವಧಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಕೆಲವು ಪಾಠಗಳನ್ನು ಪಠ್ಯದಿಂದ ಕೈಬಿಟ್ಟು, ಇನ್ನು ಕೆಲವರ ಪಾಠವನ್ನು ಸೇರಿಸಲಾಗಿತ್ತು. ಅದರಲ್ಲಿ ಚಕ್ರವರ್ತಿ ಸೂಲಿಬೆಲಿಯವರ ಪಾಠವೂ ಒಂದು.

ಬಿಜೆಪಿ ಅವಧಿಯ ಪಠ್ಯ ಪರಿಷ್ಕರಣೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ ಎಂದು ಸ್ಪಷ್ಟನೆ ನೀಡಿದರು. ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರೋ ಪಠ್ಯ ನಮ್ಮ ಮಕ್ಕಳು ಓದೋದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ. ಎಂದು ಪ್ರಶ್ನಿಸಿದರು.

ಅವರು ಯಾವ Phd ಮಾಡಿದ್ದಾರೆ? ಬಾಡಿಗೆ ಭಾಷಣಕಾರರಿಗೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿ ಅದನ್ನ ನಮ್ಮ ಮಕ್ಕಳು ಓದ ಬೇಕಾ? ಕರ್ನಾಟಕ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಯಾರು ಇವರೆಲ್ಲಾ? ವಾಟ್ಸ್ ಅಪ್ ಯುನಿವರ್ಸಿಟಿಯಲ್ಲಿ ಓದೋರು ಇವರು. ಅಲ್ಲಿನ ವಿಸಿಗಳು ತಮ್ಮ ಪಠ್ಯ ಓದೋಕೆ ಪಠ್ಯ ರಚನೆ ಮಾಡಲು ಪ್ರಾರಂಭ ಮಾಡಿದ್ದಾರಾ? ಅಂತಹ ಪಾಠ ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ‌ ಭವಿಷ್ಯ ಏನಾಗಬೇಕು? ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದರು.

ಈ ಹಿನ್ನಲೆಯಲ್ಲಿ BJP ಮತ್ತು ಚಕ್ರವರ್ತಿ ಸೂಲಿಬೆಲೆಯವರ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳುತ್ತ 1st PUC ಯನ್ನೆ ಪಾಸ್ ಮಾಡದ ಪ್ರಿಯಾಂಕ್ ಖರ್ಗೆ, ಇಂಜಿನಿಯರಿಂಗ್ ಮಾಡಿರುವ ಚಕ್ರವರ್ತಿ ಸೂಲಿಬೆಲೆಯನ್ನು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

“ಫಸ್ಟ್ ಪಿಯುಸಿಯಲ್ಲಿ ಫೇಲ್ ಆದವನು ನಮ್ ರಾಜ್ಯದಲ್ಲಿ IT BT ಮಂತ್ರಿ ಚಕ್ರವರ್ತಿ ಸೂಲಿಬೆಲೆ ಅವರ ಅರ್ಹತೆಯನ್ನು ಪ್ರಶ್ನೆ ಮಾಡೋಕೆ ಹೋಗಿ. ತನ್ನ ಯೋಗ್ಯತೆಯನ್ನ ರಾಜ್ಯದ ಜನತೆ ಮುಂದೆ ಬಟಾ ಬಯಲು ಮಾಡಿಕೊಂಡ ಖರ್ಗೆ ಕೂಸು” ಎಂದು ಪೋಸ್ಟ್‌ ಮಾಡಲಾಗಿದೆ.

ಇದೇ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಫೊಸ್ಟ್‌ಗಳಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಚಕ್ರವರ್ತಿ ಸೂಲಿಬೆಲಿ ಯವರ ಪಾಠವನ್ನು ಪಠ್ಯ ಪುಸ್ತಕದಿಂದ ಕೈಬಿಡುತ್ತೇವೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ ಖರ್ಗೆ ಹೇಳುತ್ತಿದಂತೆ, BJP  ಮತ್ತು ಚಕ್ರವರ್ತಿ ಸೂಲಿಬೆಲೆಯವರ ಬೆಂಬಲಿಗರಾದ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದು ಪ್ರಿಯಾಂಕ್ ಖರ್ಗೆ ಫಸ್ಟ್‌ ಪಿಯೂಸಿಯಲ್ಲಿ ಫೇಲ್ ಆಗಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಗಳನ್ನು ವ್ಯಾಪಕವಾಗಿ ಹಂಚಿಕೊಂಡಿದ್ದರು. ಇದನ್ನು ಪರಿಶೀಲಿಸಿದಾಗ ಇದು ಸುಳ್ಳು ಎಂದು ತಿಳಿದುಬಂದಿದೆ.

ಪ್ರಿಯಾಂಕ್ ಖರ್ಗೆಯವರ ಶೈಕ್ಷಣಿಕ ಅರ್ಹತೆಯನ್ನು ಪರಿಶೀಲಿಸಿದಾಗ, 02 ಮೇ 2018ರಲ್ಲಿ  The Economics Times ಪ್ರಿಯಾಂಕ್ ಖರ್ಗೆಯವರ ಬಗ್ಗೆ ಪ್ರಕಟಿಸಿದ  ವರದಿಯೊಂದು ಲಭ್ಯವಾಯಿತು. ಅದರ ಪ್ರಕಾರ ಪ್ರಿಯಾಂಕ್ ಖರ್ಗೆ ಅನಿಮೇಷನ್‌ನಲ್ಲಿ ಡಿಪ್ಲೊಮಾ( Diploma in Animation)  ಕೋರ್ಸ್ ಮುಗಿಸಿದ್ದಾರೆ. ಈ ಡಿಪ್ಲಮೋ ಈಗ ಪದವಿ ಎಂದು ಪರಿಗಣಿಸಲಾಗಿದೆ ಎಂದು ಸ್ವತಃ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆಯವರ ಶೈಕ್ಷಣಿಕ ಅರ್ಹತೆ ಕುರಿತು 2018ರಲ್ಲಿ ಮಾಧ್ಯಮಗಳಲ್ಲಿ ಪ್ರಿಯಾಂಕ್ ಖರ್ಗೆ ಪಿಯುಸಿ ಪಾಸ್ ಎಂದು ವರದಿ ಮಾಡಿದ್ದವು ಅದಕ್ಕೆ ಪ್ರತಿಕ್ರಿಸಿದ್ದ ವರದಿಯೊಂದು ವಿಜಯ ಕರ್ನಾಟಕ ಪ್ರಕಟಿಸಿದೆ.

ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಉಲ್ಲೇಖಿಸಿ, ಪ್ರಿಯಾಂಕ್ ಖರ್ಗೆ, ನಾನು ಓದಿದ್ದು ಡಿಜಿಟಲ್ ಅನಿಮೇಷನ್. ಈಗ ಅದನ್ನು ಡಿಗ್ರಿ ಎಂದು ಪರಿಗಣಿಸಲಾಗುತ್ತಿದೆ. ಮೇಲಾಗಿ ನ್ಯಾಷನಲ್ ಲಾ ಸ್ಕೂಲ್ ನಲ್ಲಿ 13ನೇ ರ‍್ಯಾಂಕ್ ಪಡೆದವನು ಎಂಬುದು ಯಾರಿಗೂ ಗೊತ್ತಿಲ್ಲ ಎಂದಿದ್ದಾರೆ. ಹಾಗಾಗಿ ಪ್ರಿಯಾಂಕ್ ಖರ್ಗೆ ಪ್ರಥಮ ಪಿಯೂಸಿಯಲ್ಲಿ ಫೇಲ್ ಆಗಿದ್ದಾರೆ ಎಂಬುದು ಸುಳ್ಳು.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಿಯಾಂಕ್ ಖರ್ಗೆಯ ಶೈಕ್ಷಣಿಕ ಅರ್ಹತೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಮಾಂಸ ನೀಡಲು ಹೋದ ಮುಸ್ಲಿಂ ವ್ಯಕ್ತಿಯ ಮೇಲೆ ಆನೆ ದಾಳಿ ನಡೆಸಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights