ಫ್ಯಾಕ್ಟ್‌ಚೆಕ್ : ಕಾಂಗ್ರೆಸ್ ಶಾಸಕ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ನಿಜವೇ?

ಮಧ್ಯಪ್ರದೇಶದ ತಾಲ್ಹಿಯಲ್ಲಿ ನಡೆದ ರಾಹುಲ್ ಗಾಂಧಿ ಅವರ ಯಾತ್ರೆ ಸಂಬಂಧಿತ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಇದನ್ನು ಪ್ರಶ್ನಿಸಲು ಬಂದ  ಪೊಲೀಸರನ್ನು ಕಾಂಗ್ರೆಸ್ ಶಾಸಕ ಅವ್ಯಾಚ ಪದಗಳಿಂದ ನಿಂಧಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸುವಂತೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಏನ್‌ಸುದ್ದಿ.ಕಾಂ ಗೆ ಸಂದೇಶಗಳ ಮೂಲಕ ವಿನಂತಿಸಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : 

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 26 ನವೆಂಬರ್ 2022 ರಂದು ಶಾಹೀನ್ ಭಾಗಾ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಜಿ ಶಾಸಕ ಆಸಿಫ್ ಮಹಮ್ಮದ್ ಖಾನ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ತಮ್ಮ ಮಗಳ ಪರವಾಗಿ ಶಾಹೀನ್ ಭಾಗಾ ಪ್ರದೇಶದಲ್ಲಿ ಚುನಾವಣಾ ಪ್ರಚಾರವನ್ನು ಮಾಡುತ್ತಿರುವ ದೃಶ್ಯಗಳು ಎಂದು ತಿಳಿದುಬಂದಿದೆ.

ಪೊಲೀಸ್ ಅಧಿಕಾರಿ ಶ್ರೀ ಅಕ್ಷಯ್ ಅವರು ಶಾಹೀನ್ ಬಾಗ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದರು ಮತ್ತು ಮಾಜಿ ಕಾಂಗ್ರೆಸ್ ಶಾಸಕ ತೈಯಬ್ ಮಸೀದಿಯ ಮುಂದೆ ಮೈಕ್ ಬಳಸಿ ಸಭೆ ನಡೆಸುತ್ತಿದ್ದರು ಎಂಬುದು ವಿಡಿಯೋದ ವಿವರಣೆಯಲ್ಲಿ ತಿಳಿಸಲಾಗಿದೆ. ಇಲ್ಲಿ ಸಭೆ ನಡೆಸಲು ರಾಜ್ಯ ಚುನಾವಣಾ ಆಯೋಗದಿಂದ ಅನುಮತಿ ಪಡೆದಿದ್ದೀರಾ? ಎಂದು ಪೊಲೀಸ್ ಅಧಿಕಾರಿ ಖಾನ್ ಅವರನ್ನು ಪ್ರಶ್ನಿಸಿದ ಸಂದರ್ಭದಲ್ಲಿ ಖಾನ್  ಪೊಲೀಸ್ ಅಧಿಕಾರಿಯನ್ನು ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ್ದರು, ಅದೇ ವೇಳೆ ಅವರ ಬೆಂಬಲಿಗರು ‘ಆಸಿಫ್ ಖಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದರು ಎಂದು ವರದಿಯಾಗಿದೆ.

ದಿ ಇಂಡಿಯಾ ಟುಡೆ, ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ANI ನ್ಯೂಸ್ ಮುಂತಾದ ಹಲವಾರು ಪತ್ರಿಕೆಗಳು 26, ನವೆಂಬರ್ 2022 ರಂದು ಇದೇ ಘಟನೆಯನ್ನು ಉಲ್ಲೇಖಿಸಿ ವರದಿ ಮಾಡಿವೆ. ಪೊಲೀಸರೊಂದಿಗೆ ದರ್ಪದಿಂದ ವರ್ತಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದರು ಎಂಬ ಕಾರಣಕ್ಕೆ ಮಾಜಿ ಶಾಸಕರ ಬೆಂಬಲಿಗರಾದ ಮಿನ್ಹಾಜ್ ಮತ್ತು ಸಾಬೀರ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾಂಗ್ರೆಸ್‌ನ ಮಾಜಿ ಶಾಸಕ ಆಸಿಫ್ ಮಹಮ್ಮದ್ ಖಾನ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ತಮ್ಮ ಮಗಳ ಪರವಾಗಿ ಶಾಹೀನ್ ಭಾಗಾ ಪ್ರದೇಶದಲ್ಲಿ ಚುನಾವಣಾ ಪ್ರಚಾರವನ್ನು ಮಾಡುತ್ತಿದ್ದಾಗ, ಅನುಮತಿ ಇಲ್ಲದೆ ಮೈಕ್ ಬಳಸಿ ಪ್ರಚಾರ ಮಾಡಬಾರದು ಎಂದು ಪೊಲೀಸ್ ಅಧಿಕಾರಿಗಳು ಪ್ರಚಾರವನ್ನು ನಿಲ್ಲಿಸುವಂತೆ ಹೇಳುತ್ತಿದ್ದಾಗ,  ಅಲ್ಲಿ ನೆರದಿದ್ದ ಜನರ ಗುಂಪು ‘ಆಸಿಫ್ ಖಾನ್ ಜಿಂದಾಬಾದ್’ ಎಂದು ಘೋಷಣೆಗಳನ್ನು ಕೂಗಿದ್ದಾರೆ.

‘ಆಸಿಫ್ ಖಾನ್ ಜಿಂದಾಬಾದ್’ ಎಂದು ಜನರ ಗುಂಪ ಕೂಗಿದ ಘೋಷಣೆಯನ್ನು ತಿರುಚಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಿದ್ದಾರೆ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಯೂಟರ್ನ್

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿಯನ್ನು RBIನ ಮಾಜಿ ಗವರ್ನರ್ ರಘುರಾಮ್ ರಾಜನ್ ಟೀಕಿಸಿ ಹೇಳಿಕೆ ನೀಡಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights