ಫ್ಯಾಕ್ಟ್‌ಚೆಕ್ : ಪೊಲೀಸರನ್ನು ಬೆನ್ನಟ್ಟಿರುವ ಮಹಿಳೆ ಈ ದೃಶ್ಯಗಳು ಮಣಿಪುರದಲ್ಲ!

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ದ್ವೇಷ ಗಂಭೀರ ಸ್ವರೂಪ ಪಡೆದ ಪರಿಣಾಮ ಘರ್ಷಣೆಗೆ ಕಾರಣವಾಗಿತ್ತು. ಇದರಿಂದ ಅಪಾರ ಪ್ರಮಾಣದ ಸಾವು ನೋವು ಸಂಭವಸಿವೆ. ಮಣಿಪುರದ ಪ್ರಸ್ತುತ ಪರಿಸ್ಥಿತಿಯ ದೃಶ್ಯಗಳು ಎಂಬ ಪ್ರತಿಪಾದನೆಯೊಂದಿಗೆ ವಿಡಿಯೋವೊಂದನ್ನು ಪ್ರಸಾರ ಮಾಡಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ದೃಶ್ಯಗಳಲ್ಲಿ ಮಹಿಳೆಯೊಬ್ಬರು ತನ್ನ  ಬಟ್ಟೆಗಳನ್ನು ಕಳಚಿ ಪೊಲೀಸ್ ಸಿಬ್ಬಂದಿಯನ್ನು ಬೆನ್ನಟ್ಟುವ ವಿಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ನಗ್ನವಾಗಿರುವ ಮಹಿಳೆಯೊಬ್ಬರು ರಸ್ತೆಯಲ್ಲಿ ಪೊಲೀಸರನ್ನು ಅಟ್ಟಿಸಿಕೊಂಡು ಹೋಗಿ, ಪೊಲೀಸರಿಗೆ ಹೊಡೆಯುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ‘ಇದು ಮಣಿಪುರದ ಸ್ಥಿತಿ. ಎಂಥ ದುರಂತವಿದು; ಇದೆಂಥ ದೃಶ್ಯ. ನಮ್ಮ ದೇಶಕ್ಕೇನಾಗುತ್ತಿದೆ. ಎಂಬ ಬರಹದೊಂದಿಗೆ ಈ ವಿಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಈ ದೃಶ್ಯಗಳು ಮಣಿಪುರ ಘರ್ಷಣೆಗೆ ಸಂಬಂಧಿಸಿದೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದಲ್ಲಿ ನಗ್ನವಾಗಿರುವ ಮಹಿಳೆಯೊಬ್ಬರು ರಸ್ತೆಯಲ್ಲಿ ಪೊಲೀಸರನ್ನು ಅಟ್ಟಿಸಿಕೊಂಡು ಹೋಗಿ, ಪೊಲೀಸರಿಗೆ ಹೊಡೆಯುತ್ತಿರುವ ದೃಶ್ಯಗಳು ಮಣಿಪುದಿಂದ ಬಂದಿವೆಯೇ ಎಂದು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 13 ಮೇ 2023 ರಂದು, ಉತ್ತರ ಪ್ರದೇಶದಲ್ಲಿ ಸ್ಥಳೀಯ ಚುನಾವಣೆಯ ಮತ ಎಣಿಕೆಯ ಸಮಯದಲ್ಲಿ, ಸೋನು ಕಿನ್ನರ್ ಎಂಬ ಅಭ್ಯರ್ಥಿಯ ಬೆಂಬಲಿಗರು ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ. ತರುವಾಯ, ಸೋನು ಕಿನ್ನರ್ ಅವರನ್ನು ಬೆಂಬಲಿಸಿದ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಮರು ಮತ ಎಣಿಕೆಗೆ ಒತ್ತಾಯಿಸಿ ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಈ ಗಲಾಟೆಯ ಸಮಯದಲ್ಲಿ, ಒಬ್ಬ ಟ್ರಾನ್ಸ್‌ವುಮನ್ ದೊಣ್ಣೆ ಹಿಡಿದು ಪೊಲೀಸ್ ಸಿಬ್ಬಂದಿಯನ್ನು ಬೆನ್ನಟ್ಟಿದ್ದ ದೃಶ್ಯಗಳು ಎಂದು ಸ್ಪಷ್ವಾಗಿದೆ.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಪುರಸಭೆಗಳಿಗೆ ಚುನಾವಣೆ ನಡೆದಿತ್ತು. ಚಂದೌಲಿ ಜಿಲ್ಲೆಯ ಮುಘಲ್‌ಸರಾಯ್‌ ಪುರಸಭೆಗೆ ತೃತೀಯ ಲಿಂಗಿ ಸೋನು ಕಿನ್ನರ್‌ ಎಂಬವರು ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಮತ ಎಣಿಕೆಯಲ್ಲಿ ಸೋನು ಅವರು ಮುಂದಿದ್ದರು, ಅಷ್ಟರಲ್ಲಾಗಲೇ ಚುನಾವಣಾ ಅಧಿಕಾರಿಗಳು, ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದರು. ಇದರಿಂದ ಕುಪಿತಗೊಂಡ ಅವರ ಬೆಂಬಲಿಗರು ಈ ರೀತಿ ವರ್ತಿಸಿದ್ದಾರೆ. ನಂತರ ಸೋನು ಅವರು 397 ಮತಗಳ ಅಂತರದಿಂದ ಜಯ ಗಳಿಸಿದರು. ಈ ಕುರಿತು ‘ಯುಪಿ ತಕ್‌’ ಸುದ್ದಿ ಸಂಸ್ಥೆ ವರದಿ ಪ್ರಕಟಿಸಿದೆ ಎಂದು ಫ್ಯಾಕ್ಟ್‌ಲಿ ಫ್ಯಾಕ್ಟ್‌ಚೆಕ್‌ ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳವುದಾದರೆ, ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆದ ಪ್ರತಿಭಟನೆಯ ದೃಶ್ಯಗಳನ್ನು ಹಿಂಸಾಚಾರ ಪೀಡಿತ ಮಣಿಪುರದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಶಾಲಾ ವಿದ್ಯಾರ್ಥಿಗಳುನ್ನು ಚುಡಾಯಿಸಿ ಗೂಸಾ ತಿಂದ ಯುವಕ ಮುಸ್ಲಿಮನಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights