ಫ್ಯಾಕ್ಟ್‌ಚೆಕ್ : ಮದುವೆಯಾಗಲು ನಿರಾಕರಿಸಿದ ಹಿಂದೂ ಯುವತಿಯನ್ನು ಇರಿದು ಕೊಂದ ವ್ಯಕ್ತಿ ಮುಸ್ಲಿಂ ಅಲ್ಲ! ಮತ್ತ್ಯಾರು?

ಉತ್ತರಾಖಂಡದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನನ್ನು ಮದುವೆಯಾಗಲು ನಿರಾಕರಿಸಿದ ಹಿಂದೂ ಯುವತಿಯನ್ನು ಅಮಾನುಷವಾಗಿ ಕೊಂದುಹಾಕಿದ್ದಾನೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಮಹಿಳೆಯ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಬೀದಿಯ ನೆಲೆವೆಲ್ಲ ರಕ್ತಮಯವಾಗದೆ.

https://twitter.com/RadheKrishnaT16/status/1678372885994565633

ವೈರಲ್ ಆಗಿರುವ ವಿಡಿಯೋದಲ್ಲಿ ಮಧ್ಯವಯಸ್ಕ ಮಹಿಳೆಯೊಬ್ಬರು ಯುವಕನಿಗೆ ಥಳಿಸುತ್ತಿರುವುದನ್ನು ನೋಡಬಹುದು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಘಟನೆ ನಡೆದಿರುವುದು ಉತ್ತರಾಖಂಡದಲ್ಲಿಅಲ್ಲ ಎಂಬುದು ಹಲವು ಸುದ್ದಿ ವರದಿಗಳಿಂದ ತಿಳಿದುಬಂದಿದೆ. ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಪ್ರಕಾರ, ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಮಾಜಿ ಪ್ರಿಯಕರ ಹರಿತವಾದ ಚಾಕುವಿನಿಂದ ಇರಿದು ಕೊಂದಿದ್ದಾನೆ ಮತ್ತು ಸಂತ್ರಸ್ಥೆಯ ಪೋಷಕರನ್ನು ಮಿಥಿಲೇಶ್ ಮತ್ತು ರಾಕೇಶ್ ಎಂದು ಗುರುತಿಸಲಾಗಿದೆ.

ಹಗಲು ಹೊತ್ತಿನಲ್ಲಿ ಈ ಘಟನೆ ನಡೆದಿದ್ದು, ಉತ್ತರ ಪ್ರದೇಶದ ಬದೌನ್ ಮೂಲದ ರಾಮ್ ಕುಮಾರ್ ಎಂಬ 23 ವರ್ಷದ ಆರೋಪಿಯನ್ನು ಪಾಲಂ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಎಫ್‌ಐಆರ್ ಕೂಡ ದಾಖಲಾಗಿದೆ. ಘಟನೆಯನ್ನು ವರದಿ ಮಾಡಿದ ಇತರ ಕೆಲವು ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಗುರುಗ್ರಾಮ್‌ನ ಸಹಾಯಕ ಪೊಲೀಸ್ ಕಮಿಷನರ್ ವರುಣ್ ದಹಿಯಾ ಅವರು ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿ ಆರೋಪಿಯನ್ನು ಸೂರಜ್ ಪಾಲ್ ಅವರ ಮಗ ರಾಮ್ ಕುಮಾರ್ ಎಂದು ಗುರುತಿಸಿದ್ದಾರೆ. ಹಾಗಾಗಿ, ಘಟನೆಗೆ ಸಂಬಂಧಿಸಿದ ಯಾವುದೇ ಕೋಮು ಬಣ್ಣವಾಗಲಿ, ಕೋಮು ಹಿನ್ನಲೆಯಾಗಲಿ ಇಲ್ಲ, ಯುವತಿಯನ್ನು ಹತ್ಯೆ ಮಾಡಿದ ಮಾಜಿ ಪ್ರಿಯಕರ ಹಿಂದೂ ಎಂಬುದು ಪೊಲೀಸರು ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಮೇಲೆ ತಿಳಿಸಿದಂತೆ ಆರೋಪಿಗಳು, ಸಂತ್ರಸ್ತೆ ಮತ್ತು ಅವರ ಪೋಷಕರ ಹೆಸರನ್ನೇ ಉಲ್ಲೇಖಿಸಲಾಗಿದೆ. ಇದಲ್ಲದೆ, ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಉತ್ತರ ಪ್ರದೇಶದ ಬುಡೌನ್ ಜಿಲ್ಲೆಯ ನಿವಾಸಿಗಳಾಗಿದ್ದರೂ ಗುರುಗ್ರಾಮ್‌ನ ಮೊಲಹೆಡಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ  ವಾಸಿಸುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ, ಈ ಘಟನೆಯು ಗುರುಗ್ರಾಮ್‌ನಲ್ಲಿ ನಡೆದಿದೆ ಮತ್ತು ಘಟನೆಗೆ ಲವ್ ಜಿಹಾದ್ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಗುರುಗ್ರಾಮ್‌ನಲ್ಲಿ ನಡೆದ ಕೊಲೆಯ ದೃಶ್ಯಗಳನ್ನು ಉತ್ತರಾಖಂಡದಲ್ಲಿ ನಡೆದಿದೆ ಮತ್ತು ಲವ್ ಜಿಹಾದ್ ಗೆ ಸಂಬಂಧಿಸಿದೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ಮುಸ್ಲಿಮರು ರಸ್ತೆಗಳಲ್ಲಿ ನಮಾಜ್ ಮಾಡುತ್ತಿರುವ ಚಿತ್ರ ಪ್ಯಾರಿಸ್‌ನದಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights