ಫ್ಯಾಕ್ಟ್‌ಚೆಕ್ : ಸಂಸದ ಮತ್ತು ಶಾಸಕರು ಪರಸ್ಪರ ಬೂಟಿನಲ್ಲಿ ಹೊಡೆದಾಡಿಕೊಳ್ಳುತ್ತಿರುವ ದೃಶ್ಯಗಳು ಎಲ್ಲಿಯದು ಗೊತ್ತೇ?

ಇವರು ನಮ್ಮ ದೇಶದ ಭವಿಷ್ಯವನ್ನು ನಿರ್ಧರಿಸಲಿರುವ ಮಹಾ ನಾಯಕರು. ಮಧ್ಯಪ್ರದೇಶ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ ನಂತರ ಪರಸ್ಪರ ಪ್ರೀತಿಯನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಸಭೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಚಪ್ಪಲಿಗಳಿಂದ ಹೊಡೆದಾಡಿಕೊಳ್ಳುತ್ತಿರವು ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು I.N.D.I.A ಕೂಟ ಎಂಬ ವ್ಯಂಗ್ಯದೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

https://twitter.com/sreehns1234/status/1713968170497970576

ಮಧ್ಯಪ್ರದೇಶದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಟಿಕೆಟ್ ವಿಚಾರವಾಗಿ ಹೀಗೆ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದು ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರದ್ದು ಎಂದು ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಈ ಘಟನೆಯು 2019ಕ್ಕೆ ಸಂಬಂಧಿಸಿದ್ದು ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಲಭ್ಯವಾಗಿವೆ.

ವರದಿಯ ಪ್ರಕಾರ, ಮಾರ್ಚ್ 2019 ರಲ್ಲಿ, ಬಿಜೆಪಿ ಸಂಸದ ಶರದ್ ತ್ರಿಪಾಠಿ ಮತ್ತು ಶಾಸಕ ರಾಕೇಶ್ ಸಿಂಗ್ ಬಘೇಲ್ ನಡುವೆ ಸ್ಥಳೀಯ ಯೋಜನೆಗೆ ಫಲಕಗಳನ್ನು ಅಳವಡಿಸುವ ಸಂಬಂಧ ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ ಬೂಟು  ಗಳಿಂದ ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಉಲ್ಲೇಖಿಸಿದೆ.

ಸಂತ ಕಬೀರ್ ನಗರದ ಸಂಸದ ಶರದ್ ತ್ರಿಪಾಠಿ ಮತ್ತು ಮೆಹದವಾಲ್ ಶಾಸಕ ರಾಕೇಶ್ ಬಘೇಲ್ ಅವರು ಹೊಸದಾಗಿ ಹಾಕಲಾದ ರಸ್ತೆಯ ವಿಚಾರದಲ್ಲಿ ತಮಗೆ ಕ್ರೆಡಿಟ್ ಸಿಗಬೇಕು ಎಂದು ಸಭೆಯಲ್ಲಿ ಪರಸ್ಪರ ವಾಗ್ವಾದ ನಡೆಸಿದರು. ಸ್ವಲ್ಪ ಸಮಯದ ಮಾತಿನ ಚಕಮಕಿ ನಂತರ, ಸಂಸದರು ತಮ್ಮ ಆಸನದಿಂದ ಎದ್ದು ತಮ್ಮ ಶೂನಿಂದ ಶಾಸಕರನ್ನು ಥಳಿಸಲು ಪ್ರಾರಂಭಿಸಿದರು, ಟಿವಿ ಕ್ಯಾಮೆರಾಗಳು ದೃಶ್ಯಗಳನ್ನು ರೆಕಾರ್ಡ್ ಮಾಡಿತು ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಇದೇ ವೀಡಿಯೊವನ್ನು ಈ ಹಿಂದೆಯೂ ಸಹ ಎಎಪಿ ಸಂಸದ ಸಂಜಯ್ ಸಿಂಗ್ ಅವರು ತಮ್ಮ ಶಾಸಕರನ್ನು ಹೊಡೆಯುತ್ತಿದ್ದಾರೆ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿತ್ತು. ಆದರೆ ವಾಸ್ತವವಾಗಿ ಈ ದೃಶ್ಯಗಳು 2019ರಲ್ಲಿ ಉತ್ತರ ಪ್ರದೇಶದ BJP ಸಂಸದ ಮತ್ತು ಶಾಸಕನಿಗೆ ಸಂಬಂಧಿಸಿದ್ದಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2019ರಲ್ಲಿ ಉತ್ತರಪ್ರದೇಶದಲ್ಲಿ ಸಂಸದ ಮತ್ತು ಶಾಸಕರು ರಸ್ತೆ ಕಾಮಗಾರಿ ವಿಚಾರವಾಗಿ ಬೂಟಿನಲ್ಲಿ ಹೊಡೆದಾಡಿಕೊಂಡ ಘಟನೆಯನ್ನು ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೈತಪ್ಪಿತೆಂದು ಕಾಂಗ್ರೆಸ್ ಕಾರ್ಯಕರ್ತರು ಬೂಟಿನಲ್ಲಿ ಹೊಡೆದಾಡಿಕೊಳ್ಳುತ್ತಿರುವ ದೃಶ್ಯಗಳು ಎಂದು ಆ ಮೂಲಕ I.N.D.I.A ಕೂಟವನ್ನು ವ್ಯಂಗ್ಯ ಮಾಡುವ ಉದ್ದೇಶದಿಂದ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

 ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಸುಳ್ಳು ಪೋಸ್ಟ್‌ ಹಂಚಿಕೊಂಡ BJP ಕಾರ್ಯಕರ್ತೆ ಶಕುಂತಲಾ ವಿರುದ್ದ FIR! ಆ ಸುಳ್ಳಿನ ಪೋಸ್ಟ್‌ ಏನು ಗೊತ್ತೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights