ಫ್ಯಾಕ್ಟ್‌ಚೆಕ್ : ಏರ್‌ಪೋರ್ಟ್‌ನಲ್ಲಿ ತಪಾಸಣೆ ಮಾಡುವ ಅಧಿಕಾರಿಗಳೇ ಕಳ್ಳತನ ಮಾಡುತ್ತಿದ್ದಾರೆಂದು ವಿಡಿಯೋ ವೈರಲ್! ವಾಸ್ತವವೇನು?

ಏರ್‌ಪೋರ್ಟ್‌ವೊಂದರಲ್ಲಿ ಅಧಿಕಾರಿಯೊಬ್ಬರು ಪ್ರಯಾಣಿಕರನ್ನು ತಪಾಸಣೆ ಮಾಡುವ ನೆಪದಲ್ಲಿ ಪ್ರಯಾಣಿಕರ ಹಣವನ್ನು ಕದ್ದು ATM ಮತ್ತು ಬ್ಯಾಂಕ್‌ಗೆ ಸಂಬಂಧಿಸಿದ ದಾಖಲೆಗಳನ್ನು ಲಪಟಾಯಿಸುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದೆ.

ಹಲವು ಎಕ್ಸ್ (ಟ್ವಿಟರ್), ಫೇಸ್ ಬುಕ್ ಬಳಕೆದಾರರೂ ಈ ವಿಡಿಯೋವನ್ನು ಹಂಚಿಕೊಳ್ಳುತ್ತ ತಪಾಸಣೆ ಮಾಡುವ ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ಮಾಡುವ ನೆಪದಲ್ಲಿ ಹೇಗೆ ಪ್ರಯಾಣಿಕರ ಹಣವನ್ನು ಕದಿಯುತ್ತಿದ್ದಾರೆ ನೋಡಿ ಎಂದು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 2023 ನವೆಂಬರ್ 02 ರಂದು PaulVuTV ಎಂಬ YouTube ಚಾನೆಲ್ ನಲ್ಲಿ “Greedy employee takes from passenger!” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ.

ವಿಡಿಯೋವನ್ನು ಅಪ್‌ಲೋಡ್ ಮಾಡಿರುವ ಯೂಟ್ಯೂಬ್‌ ಚಾನೆಲ್‌ಅನ್ನು ಪರಿಶೀಲಿಸದಾಗ, ಹಲವು ಸ್ಕ್ರಿಪ್ಟ್‌ ಮಾಡಿದ ವಿಡಿಯೋವನ್ನು ಹಂಚಿಕೊಂಡಿರುವುದನ್ನು ಕಾಣಬಹುದು. ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಿದ ಹಲವು ವಿಡಿಯೋಗಳಲ್ಲಿ ಕಾಣಿಸಿಕೊಂಡ  ಅದೇ ಕಲಾವಿದರನ್ನು ವೈರಲ್ ವಿಡಿಯೋದಲ್ಲೂ ಕಾಣಬುಹುದು. ಅವರ ನಟನೆಯ ಕೆಲವು ಇತರ ವಿಡಿಯೋಗಳನ್ನು ಇಲ್ಲಿ ಕಾಣಬಹುದು.

ವಿಮಾನ ನಿಲ್ದಾಣಗಳಲ್ಲಿ ಕೆಲ ಸಿಬ್ಬಂದಿಗಳು ಪ್ರಯಾಣಿಕರ ಹಣವನ್ನು ಕದ್ದು ಸಿಕ್ಕಿಬಿದ್ದಿರುವ ಘಟನೆಗಳು ವರದಿಯಾಗಿವೆ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ರಿಯಲ್ ವಿಡಿಯೋಅಲ್ಲ, ಅದೊಂದು ಸ್ಕ್ರಿಪ್ಟ್‌ ಮಾಡಲಾದ ವಿಡಿಯೋ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಏರ್‌ಪೋರ್ಟ್‌ವೊಂದರಲ್ಲಿ ಅಧಿಕಾರಿಯೊಬ್ಬರು ಪ್ರಯಾಣಿಕರನ್ನು ತಪಾಸಣೆ ಮಾಡುವ ನೆಪದಲ್ಲಿ ಪ್ರಯಾಣಿಕರ ಹಣವನ್ನು ಕಳ್ಳತನ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿರುವ ವಿಡಿಯೋ ನೈಜ ವಿಡಿಯೋ ಅಲ್ಲ. ಅದೊಂದು ಸ್ಕ್ರಿಪ್ಟ್‌ ಮಾಡಲಾದ ವಿಡಿಯೋ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ರಾಷ್ಟ್ರಪತಿಗೂ ಪ್ರಧಾನಿ ಮೋದಿ ಗೌರವ ನೀಡಲಿಲ್ಲವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights