ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ಆಡಳಿತಾವದಿಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಒಬ್ಬ ನಾಗರಿಕನೂ ಸಾವನಪ್ಪಿಲ್ಲವೇ?

2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಭಾರತದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಯಾವುದೇ ನಾಗರಿಕರು ಸಾವನ್ನಪ್ಪಿಲ್ಲ ಎಂದು ಹೇಳುವ ಪೋಸ್ಟ್‌ವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

1 ವ್ಯಕ್ತಿ ಮತ್ತು ಪಠ್ಯ ನ ಚಿತ್ರವಾಗಿರಬಹುದು

 

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಪರಿಶೀಲಿಸಲು 2014ರ ನಂತರ ಭಾರತದಲ್ಲಿ ನಡೆದಿರುವ  ಭಯೋತ್ಪಾದಕ ಕೃತ್ಯಕ್ಕೆ ಸಂಬಂಧಿಸಿದಂತೆ ಗೂಗಲ್ ಸರ್ಚ್ ಮಾಡಿದಾಗ, ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಗಳ ಕುರಿತು 09 ಆಗಸ್ಟ್ 2023 ರಂದು ರಾಜ್ಯಸಭೆಯಲ್ಲಿ ಚರ್ಚೆಯಾದ ಮಾಹಿತಿ ಲಭ್ಯವಾಗಿದೆ.

ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ, ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಪ್ರತಿಕ್ರಯಿಸಿದ್ದು, 2018 ಮತ್ತು 2022 ರ ನಡುವೆ, ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿ ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕರು ನಡೆಸಿದ ಘಟನೆಗಳಲ್ಲಿ ಒಟ್ಟು ಮೂರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಹಾಗೆಯೇ ಅದೇ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ, ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 176 ನಾಗರಿಕರು ಸಾವನಪ್ಪಿದ್ದು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ 35 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದರು.

2014 ರಿಂದ ದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಗಳ ಕುರಿತು ಲೋಕಸಭೆಯಲ್ಲಿ 23 ಮಾರ್ಚ್ 2021 ಚರ್ಚಿಸಲಾದ ಮಾಹಿತಿ ಲಭ್ಯವಾಗಿದ್ದು, ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ, ಗೃಹ ಸಚಿವಾಲಯದ ಆಗಿನ ರಾಜ್ಯ ಸಚಿವ ಕಿಶನ್ ರೆಡ್ಡಿ ಅವರು 2014 ಮತ್ತು 2020 ರ ನಡುವೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಒಟ್ಟು 11 ನಾಗರಿಕರು ಸಾವನ್ನಪ್ಪಿದ್ದರು. ಇದೇ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯಲ್ಲಿ 215 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಫೆಬ್ರವರಿ 5, 2019 ರಂದು, ಗೃಹ ವ್ಯವಹಾರಗಳ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಅವರು 2014 ರಿಂದ 2018 ರವರೆಗೆ ದೇಶದಲ್ಲಿ ನಡೆದ ಭಯೋತ್ಪಾದಕ ಘಟನೆಗಳ ಸಂಖ್ಯೆ ಮತ್ತು ಜೀವ ಮತ್ತು ಆಸ್ತಿ ನಷ್ಟದ ಬಗ್ಗೆ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಚಿವರ ಪ್ರತಿಕ್ರಿಯೆಯ ಪ್ರಕಾರ, ಅಂಕಿಅಂಶಗಳು 2014 ಮತ್ತು 2018 ರ ನಡುವೆ ಸರ್ಕಾರವು ‘ಭಯೋತ್ಪಾದಕರು/ಬಂಡುಕೋರರು/ಉಗ್ರವಾದಿಗಳು’ ಎಂದು ವರ್ಗೀಕರಿಸಿದ್ದು, ಈ ದಾಳಿಯಗಳಲ್ಲಿ ಒಟ್ಟು 1,482 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಬಹಿರಂಗಪಡಿಸಿದೆ. ಇದರಲ್ಲಿ ಈಶಾನ್ಯ ರಾಜ್ಯಗಳಲ್ಲಿ ಮಾವೋವಾದಿಗಳಿಂದ ನಡೆದ ದಳಿಯಲ್ಲಿ 967 ನಾಗರಿಕರು ಸಾವನಪ್ಪಿದ್ದಾರೆ.

2000 – 2024 ರ ನಡುವಿನ ಭಯೋತ್ಪಾದಕ ದಾಳಿಯಲ್ಲಿ ನಾಗರಿಕರ ಸಾವುಗಳಿಗೆ ಸಂಬಂಧಿಸಿದ ಮಾಹಿತಿಯು ‘ದಕ್ಷಿಣ ಏಷ್ಯಾ ಭಯೋತ್ಪಾದನೆ ಪೋರ್ಟಲ್‘ ನಲ್ಲಿ ಲಭ್ಯವಿದೆ. 2014 ರ ಮೊದಲು ಭಯೋತ್ಪಾದಕ ದಾಳಿಯಿಂದ ಸಂಭವಿಸಿದ ಸಾವುಗಳಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಗೃಹ ಸಚಿವಾಲಯವು ಒದಗಿಸಿದ ಮಾಹಿತಿಯನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ಹಿಂದೆಯೂ ಇಂತಹದ್ದೆ ಸುಳ್ಳು ಪ್ರತಿಪಾದನೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ, 2014 ರಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರವೂ ಭಾರತದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ನಾಗರಿಕರ ಸಾವನಪ್ಪಿಲ್ಲ ಎಂಬುದು ಸುಳ್ಳು.

ಕೃಪೆ : ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಅಯೋಧ್ಯ ರಾಮಮಂದಿರದ ಅಧಿಕಾರಿಗಳಿಂದ ದಲಿತ ಬಾಲಕನ ಮೇಲೆ ಹಲ್ಲೆ ನಡೆದಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights