FACT CHECK | 2022ರ ಹಳೆಯ ದೃಶ್ಯಗಳನ್ನು ಭಾರತ್ ಜೋಡೋ ನ್ಯಾಯ ಯಾತ್ರೆಯದ್ದು ಎಂದು ತಪ್ಪಾಗಿ ಹಂಚಿಕೊಂಡ ಕಾಂಗ್ರೆಸ್ ಬೆಂಬಲಿಗರು
ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ನ್ಯಾಯ ಯಾತ್ರೆ’ ರ್ಯಾಲಿಯಲ್ಲಿ ಭಾಗವಹಿಸಿರುವ ವಿಹಂಗಮ ನೋಟ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
ಪ್ರಸ್ತುತ ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ಸಿಪಿ ಮತ್ತು ಬಿಜೆಪಿ ಒಳಗೊಂಡ ಮಹಾಯುತಿ ಮೈತ್ರಿಕೂಟದ ಆಡಳಿತದಲ್ಲಿರುವ ಮಹಾರಾಷ್ಟ್ರದ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ, ರಾಹುಲ್ ಗಾಂಧಿ ಬಗ್ಗೆ ಜನರಿಗಿರುವ ಕ್ರೇಜ್ ನೋಡಿ ದೃಶ್ಯಗಳು ಎಂಬ ಹೇಳಿಕೆಯೊಂದಿಗೆ ವ್ಯಾಪಕವಾಗಿ ಪ್ರಸಾವಾಗುತ್ತಿದೆ.
https://twitter.com/AmitAzadAgarwal/status/1768228626510885006
ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಇದೇ ಹೇಳಿಕೆಯೊಂದಿಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಅಪಾರ ಪ್ರಮಾಣದಲ್ಲಿ ಜನ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾದ ವಿಡಿಯೋವನ್ನು ಪರಿಶೀಲಿಸುವಂತೆ ಏನ್ಸುದ್ದಿ.ಕಾಂಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿನಂತಿಸಿದ್ದಾರೆ.
ವಿಡಿಯೋವನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, ಡಿಸೆಂಬರ್ 16, 2022 ರಂದು ನವಭಾರತ್ ಟೈಮ್ಸ್ನ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ ವಿಡಿಯೋ ಲಭ್ಯವಾಗಿದೆ. ಭಾರತ್ ಜೋಡೋ ಯಾತ್ರೆಯ 100 ದಿನಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಡಿಸೆಂಬರ್ 16, 2022 ರಂದು ರಾಜಸ್ಥಾನದ ದೌಸಾದಲ್ಲಿ ಯಾತ್ರೆಗೆ ಸಾಗಿಬಂದ ಭಾರೀ ಜನಸ್ತೋಮ ಎಂದು ಉಲ್ಲೇಖಿಸಲಾಗಿದೆ.

ಕಾಂಗ್ರೆಸ್ ಪಕ್ಷವು ಹಂಚಿಕೊಂಡ ವಿಡಿಯೊದಲ್ಲಿ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ವೈರಲ್ ಆಗಿರುವ ದೃಶ್ಯಗಳಲ್ಲಿ ಕಂಡುಬಂದ ಪೋಸ್ಟ್ರ್ನಲ್ಲಿ ರಾಹುಲ್ ಗಾಂಧಿ ಫೋಟೊವನ್ನು ಕಾಣಬಹುದು, ಫೋಟೊದಲ್ಲಿ ರಾಹುಲ್ ಗಾಂಧಿ ಹೆಚ್ಚು ಗಡ್ಡ ಬಿಟ್ಟಿರುವುದನ್ನು ಕಾಣಬಹುದು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ನ್ಯಾಯ ಯಾತ್ರೆ’ 2024 ಮಾ. 17 ರಂದು ಕೊನೆಗೊಳ್ಳಿದೆ. ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ರಾಹುಲ್ ಗಾಂಧಿ ಅವರು ಸಂಚರಿಸಲಿದ್ದಾರೆ. ಯು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಂತ್ಯಸಂಸ್ಕಾರ ನಡೆದ ಸ್ಥಳವಾದ ದಾದರ್ನ ಚೈತ್ಯಭೂಮಿಯಲ್ಲಿ ಸಮಾಪ್ತಿಯಾಗಲಿದೆ.
ಚೈತ್ಯಭೂಮಿಯಲ್ಲಿ ಸಮಾಪ್ತಿಗೊಳ್ಳಲಿರುವ ಹಿನ್ನೆಲೆಯಲ್ಲಿ ಯಾತ್ರೆ ಮಹತ್ವದ್ದಾಗಿ ಪರಿಣಮಿಸಿದೆ. ಬಳಿಕ ಛತ್ರಪತಿ ಶಿವಾಜಿ ಮಹಾರಾಜ ಮೈದಾನದಲ್ಲಿ ರ್ಯಾಲಿ ನಡೆಯಲಿದೆ. ‘ಇಂಡಿಯಾ’ ಮೈತ್ರಿಕೂಟದ ನಾಯಕರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರ್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಂಬರಲಿರುವ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಕಾಂಗ್ರೆಸ್ ಮತ್ತು ‘ಇಂಡಿಯಾ’ ಮೈತ್ರಿಕೂಟವು ಈ ರ್ಯಾಲಿ ಮೂಲಕ ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ನಾಸಿಕ್ನಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ ಎಂದು ನಿರೂಪಿಸಲು 2022ರಲ್ಲಿ ರಾಜಸ್ಥಾನದ ದೌಸಾದಲ್ಲಿ ಭಾರತ್ ಜೋಡೋ ಯಾತ್ರೆಯ ಒಂದು ವರ್ಷ ಹಳೆಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಹಾಗಾಗಿ ಫೊಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಪಾಕಿಸ್ತಾನದಲ್ಲಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಗಾಯತ್ರಿ ಮಂತ್ರ ಹಾಡಲಾಗಿದೆಯೇ ? ಈ ಸ್ಟೋರಿ ಓದಿ

