FACT CHECK | ಭಾರತ ಜೋಡೋ ನ್ಯಾಯ ಯಾತ್ರೆಯ ವೇಳೆ ತ್ರಿವರ್ಣ ಧ್ವಜ ತೆಗೆಯುವಂತೆ ರಾಹುಲ್ ಗಾಂಧಿ ಹೇಳಿದ್ದರೆ ?

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ  ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಭಾರತದ ತ್ರಿವರ್ಣ ಧ್ವಜ ತೆಗೆಯುವಂತೆ ರಾಹುಲ್ ಗಾಂಧಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಹೇಳಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಬೆಂಬಲಿಗರು ಪೋಸ್ಟ್‌ಅನ್ನು ಹಂಚಿಕೊಳ್ಳುತ್ತಿದ್ದಾರೆ.

ಬಿಜೆಪಿ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್ ಮಾಳವೀಯ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದು, ಭಾರತದ ಧ್ವಜವನ್ನು ಕಿತ್ತೊಗೆಯುವಂತೆ ಹೇಳಿದ ರಾಹುಲ್ ಗಾಂಧಿ. ಇದು ಜಾರ್ಜ್ ಸೊರೊಸ್ ಅವರ ನಿಯಮದ ಪುಸ್ತಕದ ಪಾಠವಾಗಿದೆ. ಅಲ್ಲಿ ಆತ ಬಾರತೀಯರನ್ನು ಹೇಗೆ ಅವಮಾನಿಸಬೇಕೆಂದು ಹೇಳಿಕೊಟ್ಟಿದ್ದಾನೆ ಎಂಬ ಹೇಳಿಎಯೊಂದಿಗೆ ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾನೆ.

 

View this post on Instagram

 

A post shared by Paltu Paltan (@paltupaltann)

ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿ ಭಾರತದ ತ್ರಿವರ್ಣ ಧ್ವಜವನ್ನು ತೆಗೆಯುವಂತೆ ಸೂಚಿಸುತ್ತಾರೆ ಅವರಿಗೆ ನಮ್ಮ ರ್ಧವಜದ ಬಗ್ಗೆ ಅಭಿಮಾನವಿಲ್ಲ, ಆದರೆ ನಮ್ಮ ಹೆಮ್ಮೆಯ ಪ್ರಧಾನಿಯನ್ನು ನೋಡಿ, ನೆಲದಲ್ಲಿ ಬಿದ್ದಿದ್ದ ರಾಷ್ಟ್ರ ಧ್ವಜವನ್ನು ಹೇಗೆ ಜೋಪಾನವಾಗಿ ಮಡಿಚಿ ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ ಎಂದು, ಎಂಬ ಹೋಲಿಕೆಗಳೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಏನ್‌ಸುದ್ದಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿಯವರು ಪ್ರತಿಪಾದಿಸಿದಂತೆ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ರಾಹುಲ್ ಗಾಂಧಿ ಭಾರತದ ತ್ರಿವರ್ಣ ರ್ಧವಜವನ್ನು ತೆಗೆಯಲು ಸೂಚಿಸಿದ್ದಾರೆಯೇ ಎಂದು ಪರಿಶೀಲಿಸಲು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ತ್ರಿವರ್ಣ  ಧ್ವಜವನ್ನು ತೆರೆವುಗೊಳಿಸುವಂತೆ ರಾಹುಲ್ ಗಾಂಧಿ ಹೇಳಿಲ್ಲ ಎಂಬುದು ಸ್ಪಷ್ಟವಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಪಕ್ಷಗಳ ವಿರುದ್ಧ ಕೇಂದ್ರ ಸಂಸ್ಥೆಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದನ್ನು ಪ್ರದರ್ಶಿಸಲು ಅವರು ಧ್ವಜವನ್ನು ಹಿಡಿದಿರುವ ಕೋಲನ್ನು ಕೊಡಲು ಕೇಳಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ವಿಡಿಯೋದ 9:50 ನಿಮಿಷದ ಟೈಮ್‌ಸ್ಟ್ಯಾಂಪ್‌ನಲ್ಲಿ, ರಾಹುಲ್ ಗಾಂಧಿ ಸಂತೋಷ್ ಜೈಸ್ವಾಲ್ ಪಾಟೀಲ್ ಎಂಬ ವ್ಯಕ್ತಿಯನ್ನು ಕರೆದು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ದಂತಹ ಸಂಸ್ಥೆಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಆಡಳಿತ ಪಕ್ಷದಿಂದ ಹೇಗೆ ದುರ್ಬಳಕೆಯಾಗುತ್ತಿದೆ ಎಂಬುದನ್ನು ಪ್ರದರ್ಶಿಸಲು ಭಾವುಟದ ಕೋಲನ್ನು ಸಂಕೇತದಂತೆ ಬಳಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋದ 11.12 ನಿಮಿಷಗಳ ಸಮಯದಲ್ಲಿ, ರಾಹುಲ್ ಗಾಂಧಿ ಗುಂಪಿನಿಂದ ಕೋಲನ್ನು ಕೇಳುತ್ತಾರೆ. ಕಾಂಗ್ರೆಸ್ ಬೆಂಬಲಿಗರು ಕೋಲಿನಿಂದ ಒಂದು ಧ್ವಜವನ್ನು ತೆಗೆದುಹಾಕಲು ಹೆಣಗಾಡುತ್ತಿರುವಾಗ,ಗುಂಪಿನಲ್ಲಿದ್ದ ಮತ್ತೊಬ್ಬ ವ್ಯಕ್ತಿಯು ಒಂದು ಸಣ್ಣ ಕೋಲನ್ನು ನೀಡುವುದನ್ನು ಕಾಣಬಹುದು. 

ಒಟ್ಟಾರೆಯಾಗಿ ಹೇಳುವುದಾದರೆ, ಭಾರತ್ ಜೋಡೊ ನ್ಯಾಯ ಯಾತ್ರೆಯ ವೇಳೆ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಹೇಗೆ ತನ್ನ ವಿರುದ್ದ ಇರುವವರನ್ನು ಮಟ್ಟಹಾಕಲು ಗುರಾಣೆಯಂತೆ ಬಳಕೆ ಮಾಡುತ್ತಿದೆ ಎಂಬುದನ್ನು ಸೂಚ್ಯವಾಗಿ ಹೇಳಲು ಕೋಲನ್ನು ಕೇಳುತ್ತಾರೆ. ಈ ದೃಶ್ಯಗಳನ್ನು ಬಿಜೆಪಿಯವರು ಎಡಿಟ್ ಮಾಡಿ ರಾಹುಲ್ ಗಾಂಧಿ ಭಾರತದ ಧ್ವಜವನ್ನು ತೆಗೆಯಲು ಹೇಳಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದ್ದಾರೆ. ಹಾಗಾಗಿ ಫೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಏನ್‌ಸುದ್ದಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

 

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಬೆಲ್ಲಿ ಡ್ಯಾನ್ಸರ್ ಚಿತ್ರಕ್ಕೆ ಸ್ಮೃತಿ ಇರಾನಿ ಫೋಟೊವನ್ನು ಎಡಿಟ್ ಮಾಡಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights