FACT CHECK | 1 ಏಪ್ರಿಲ್ 2024ರಿಂದ BBMP ವ್ಯಾಪ್ತಿಯಲ್ಲಿ ದುಪ್ಪಟ್ಟಾಗಲಿದೆಯೇ ಆಸ್ತಿ ತೆರಿಗೆ ?

ಬಿಬಿಎಂಪಿ ವ್ಯಾಪ್ತಿಯಲ್ಲಿ ಏಪ್ರಿಲ್‌ 1ರಿಂದ ಆಸ್ತಿತೆರಿಗೆ ಹೆಚ್ಚಳವಾಗಲಿದೆ ಎಂಬ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

 

View this post on Instagram

 

A post shared by Anurag Singh (@index.daily)

ಕರ್ನಾಟಕದಲ್ಲಿ ಭಾರಿ ತೆರಿಗೆ ಹೆಚ್ಚಳವಾಗಲಿದೆ ಎಂದು ಇಂಡೆಕ್ಸ್‌.ಡೈಲಿ ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಅನುರಾಗ್‌ ಸಿಂಗ್‌ ಎಂಬುವವರು ವಿಡಿಯೊ ಹರಿಯಬಿಟ್ಟಿದ್ದಾರೆ. ಬಾಡಿಗೆ ಮನೆಗಳ ಮೇಲಿನ ಆಸ್ತಿ ತೆರಿಗೆ ಎರಡು ಪಟ್ಟು, ವಾಣಿಜ್ಯ ಸಂಸ್ಥೆಗಳ ಮೇಲಿನ ತೆರಿಗೆ 3 ರಿಂದ 5 ಪಟ್ಟು ಹೆಚ್ಚಳವಾಗಲಿದೆ ಎಂಬುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಕರ್ನಾಟಕ ತನ್ನ 5 ಉಚಿತ ಹಣಕ್ಕಾಗಿ ₹ 52,000 ಕೋಟಿ ಖರ್ಚು ಮಾಡುತ್ತಿದೆ. ಕರ್ನಾಟಕದ ಬಜೆಟ್ 17% ಹೆಚ್ಚಾಗಿದೆ, ಆದರೆ ಕ್ಯಾಪೆಕ್ಸ್ 27% ರಷ್ಟು ಕಡಿಮೆಯಾಗಿದೆ. ಸರ್ಕಾರವು ಆರೋಗ್ಯ ಮತ್ತು ಶಿಕ್ಷಣದ 10% ಹಂಚಿಕೆಯನ್ನು ಕಡಿತಗೊಳಿಸುತ್ತಿದೆ. ಬೆಂಗಳೂರು ಎಲ್ಲಾ ರಂಗಗಳಲ್ಲಿ ಬಿಕ್ಕಟ್ಟು ಎದುರಿಸುತ್ತಿರುವಾಗ ನಗರಾಭಿವೃದ್ಧಿ ಸಚಿವಾಲಯವು ಹಂಚಿಕೆಯಲ್ಲಿ 25% ಇಳಿಕೆ ಕಂಡಿದೆ. ವಿತ್ತೀಯ ಕೊರತೆ ನೀಗಿಸಲು ಸರ್ಕಾರ ₹ 1 ಲಕ್ಷ ಕೋಟಿ ಸಾಲ ಪಡೆಯುತ್ತಿದೆ.

ಹಾಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿ ಅದನ್ನು ಸರಿದೂಗಿಸಲು, ಜನರಿಗೆ ತೆರಿಗೆ ಹೊರಯನ್ನು ಹೆಚ್ಚಿಸಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಹಾಗಿದ್ದರೆ ಈ ಸುದ್ದಿ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಅನುರಾಗ್‌ ಸಿಂಗ್‌ ಎಂಬುವವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಏಪ್ರಿಲ್‌ 1ರಿಂದ ಆಸ್ತಿತೆರಿಗೆ ಹೆಚ್ಚಳವಾಗಲಿದೆ ಎಂದು ಪ್ರತಿಪಾದಿಸಿ ಹಂಚಿಕೆ ಮಾಡಿರುವ ವಿಡಿಯೋಗೆ 22 ಸಾವಿರ ಲೈಕ್ಸ್‌ ಬಂದಿದೆ. ಈ ವಿಡಿಯೋದ ಸತ್ಯಾಸತ್ಯತೆಗಳನ್ನು ಪರಿಶೀಲಿಸಿದಾಗ ವೈರಲ್ ವಿಡಿಯೋದಲ್ಲಿ ಮಾಡಿದ ಪ್ರತಿಪಾದನೆ ಸುಳ್ಳು ಎಂದು ತಿಳಿದು ಬಂದಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಏಪ್ರಿಲ್‌ 1ರಿಂದ ಆಸ್ತಿತೆರಿಗೆ ಹೆಚ್ಚಳವಾಗಲಿದೆ ಎಂಬ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ. ಆಸ್ತಿ ತೆರಿಗೆ ಹೆಚ್ಚಳ ಮಾಡುತ್ತಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

ಆತ್ಮೀಯ ನಾಗರಿಕರೇ, 1ನೇ ಏಪ್ರಿಲ್ 2024 ರಿಂದ ಬಿಬಿಎಂಪಿಯಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಕೆಲವು ಸುಳ್ಳು ಸುದ್ದಿಯ ವೀಡಿಯೊಗಳು ಹರಿದಾಡುತ್ತಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ.

‘ಇವೆಲ್ಲ ಸತ್ಯಕ್ಕೆ ದೂರವಾದ ಮಾಹಿತಿ. 2016ರಲ್ಲಿ ಆಸ್ತಿ ತೆರಿಗೆ ಪರಿಷ್ಕರಿಸಲಾಗಿದ್ದು, ಆ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆಗಳು ಚಾಲ್ತಿಯಲ್ಲಿರುತ್ತವೆ. ಅದೇ ಮುಂದುವರಿಯಲಿದೆ‘ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ‘ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ಗೆ ಪತ್ರ ಬರೆಯಲಾಗಿದೆ’ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಫೇಕ್‌ ವಿಡಿಯೋ ಕುರಿತು ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ. ಅಲ್ಲದೆ ಬಿಬಿಎಂಪಿ ತನ್ನ ತೆರಿಗೆಯಲ್ಲಿ ಯಾವುದೇ ಹೆಚ್ಚಳವನ್ನು ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಏಪ್ರಿಲ್ 1, 2024 ರಿಂದ ಬಿಬಿಎಂಪಿ ಆಸ್ತಿ ತೆರಿಗೆ ದರವನ್ನು ಹೆಚ್ಚಿಸುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಫೇಕ್ ನ್ಯೂಸ್ ಫ್ಲೆಡರ್‌ಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಬಿಬಿಎಂಪಿ ಯಾವುದೇ ಆಸ್ತಿ ತೆರಿಗೆಯನ್ನು ಹೆಚ್ಚಿಸಿಲ್ಲ, 2016 ರಲ್ಲಿ ನಿಗದಿಪಡಿಸಿದ ದರದಲ್ಲಿಯೇ ವಿಧಿಸಲಾಗುವುದು ಎಂದು ಬೆಂಗಳೂರಿನ ನಿವಾಸಿಗಳಿಗೆ ತಿಳಿಸಲು ಬಯಸುತ್ತೇನೆ. ದಯವಿಟ್ಟು ಈ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಡಿಕೆ ಶಿವಕುಮಾರ್ ಟೀಟ್ ಮಾಡಿದ್ದಾರೆ.

ಸುಳ್ಳು : ಕರ್ನಾಟಕದಲ್ಲಿ ಭಾರಿ ತೆರಿಗೆ ಹೆಚ್ಚಳವಾಗಲಿದೆ ಎಂದು ಇಂಡೆಕ್ಸ್‌.ಡೈಲಿ ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಅನುರಾಗ್‌ ಸಿಂಗ್‌ ಎಂಬುವವರು ವಿಡಿಯೊ ಹರಿಯಬಿಟ್ಟಿದ್ದಾರೆ. ಬಾಡಿಗೆ ಮನೆಗಳ ಮೇಲಿನ ಆಸ್ತಿ ತೆರಿಗೆ ಎರಡು ಪಟ್ಟು, ವಾಣಿಜ್ಯ ಸಂಸ್ಥೆಗಳ ಮೇಲಿನ ತೆರಿಗೆ 3 ರಿಂದ 5 ಪಟ್ಟು ಹೆಚ್ಚಳವಾಗಲಿದೆ ಎಂಬುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಸತ್ಯಾಂಶ : 2016ರಲ್ಲಿ ಆಸ್ತಿ ತೆರಿಗೆ ಪರಿಷ್ಕರಿಸಲಾಗಿದ್ದು, ಆ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆಗಳು ಚಾಲ್ತಿಯಲ್ಲಿರುತ್ತವೆ. ಅದೇ ಮುಂದುವರಿಯಲಿದೆ‘ ಎಂದು ಬಿಬಿಎಂಪಿ ಆಯುಕ್ತರು ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights