FACT CHECK | ಬುರ್ಖಾ ಧರಿಸಿಕೊಂಡು ಬಂದು ಕಳ್ಳ ವೋಟು ಹಾಕಿದ್ದಾರೆ ಎಂದು 2022ರ ಉತ್ತರ ಪ್ರದೇಶದ ಹಳೆಯ ವಿಡಿಯೋ ಹಂಚಿಕೆ

ಲೋಕಸಭಾ ಚುನಾವಣೆಯ ಮತದಾನದ ವೇಳೆ ನಕಲಿ ಮತದಾನ ಮಾಡಿದ ಆರೋಪದ ಮೇಲೆ ಬುರ್ಖಾಧಾರಿ ಮಹಿಳೆಯರನ್ನು ಬಂಧಿಸಲಾಗಿದೆ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

19 ಏಪ್ರಿಲ್  2024 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳ ಜನರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ವೇಳೆ ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರು ನಕಲಿ ಮತದಾನಕ್ಕೆ ಪ್ರಯತ್ನಿಸಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

 

ಬಲಪಂಥೀಯ ಯೂಟ್ಯೂಬ್ ಚಾನೆಲ್‌ ‘ಸಂವಾದದಲ್ಲಿ’ ಏ.19, 2024ರಂದು ಬುರ್ಖಾಧಾರಿ ಮಹಿಳೆಯಿಂದ ನಕಲಿ ಮತ ಚಲಾವಣೆಗೆ ಪ್ರಯತ್ನ” ಎಂಬ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದೆ.     ವಿಡಿಯೋ ಲಿಂಕ್ ಅನ್ನು ಇಲ್ಲಿ ನೋದಬಹುದು

 

 

 

 

ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನುಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಡಿದಾಗ, ವೈರಲ್ ವಿಡಿಯೋ 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದ್ದು ಎಂಬ ಮಾಹಿತಿ ಲಭ್ಯವಾಗಿದ್ದು, ಮತದಾನದ ವೇಳೆ ವಂಚನೆ ಮಾಡಲು ಅಥವಾ ನಕಲಿ ಮತ ಚಲಾಯಿಸಲು ಯತ್ನಿಸಿದ ಬುರ್ಖಾಧಾರಿ ಮಹಿಳೆಯರನ್ನು ರಾಮ್‌ಪುರ ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಫೆ.15, 2022ರಂದು ಇದೇ ವಿಡಿಯೋವನ್ನು DEEWAN (@Spoof_Junkey) ಎಂಬ ಎಕ್ಸ್ ಬಳಕೆದಾರ ಹಂಚಿಕೊಂಡಿದ್ದರು. “ರಾಮ್‌ಪುರದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನಕ್ಕೆ ಯತ್ನ, ಉತ್ತರ ಪ್ರದೇಶದ ಪೊಲೀಸರು ಥಳಿಸಿ ಬಂಧಿಸಿದ್ದಾರೆ” ಎಂದು ಬರೆದುಕೊಂಡಿದ್ದರು. ಅದನ್ನು ಇಲ್ಲಿ ನೋದಬಹುದು.

 

ಮೇಲಿನ ಪೋಸ್ಟ್‌ನ ಮಾಹಿತಿಯಿಂದ ಕೀವರ್ಡ್ ಮೂಲಕ ಸರ್ಚ್ ಮಾಡಿದಾಗ ಘಟನೆಯ ಕುರಿತು ಫೆ.15, 2022ರಂದು ನ್ಯೂಸ್‌ 18 ಹಿಂದಿ “ರಾಮ್‌ಪುರ: ಬುರ್ಖಾ ಧರಿಸಿ ನಕಲಿ ಮತದಾನ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದು, ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.

ಫೆ.14, 2022ರಂದು ಲೈವ್ ಹಿಂದೂಸ್ತಾನ್ ವೆಬ್‌ಸೈಟ್‌ ಕೂಡ ಈ ಕುರಿತು ಸುದ್ದಿ ಪ್ರಕಟಿಸಿತ್ತು “ರಾಮ್‌ಪುರ: ಬುರ್ಖಾ ಧರಿಸಿ ನಕಲಿ ಮತದಾನಕ್ಕೆ ಆಗಮಿಸಿದ್ದ ಇಬ್ಬರು ಮಹಿಳೆಯರನ್ನು ಡಿಎಂ ಸೆರೆ ಹಿಡಿದಿದ್ದಾರೆ” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.

2022ರ ಫೆಬ್ರವರಿಯಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಆ ವೇಳೆ ರಾಂಪುರದಲ್ಲಿ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ನಕಲಿ ಮತದಾನದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಬಹಳಷ್ಟು ಸುದ್ದಿವಾಹಿನಿಗಳು ವರದಿ ಮಾಡಿವೆ. ಅಂತಹ ವರದಿಗಳನ್ನು ಇಲ್ಲಿಇಲ್ಲಿ, ಮತ್ತು ಇಲ್ಲಿ ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಮುಸ್ಲಿಮರನ್ನು ಗುರಿಯಾಗಿಸಿಕೊಂಡು, 2022 ಹಳೆಯ ವಿಡಿಯೋವನ್ನು ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನಕ್ಕೆ ಯತ್ನ ಎಂದು 2024ರ ಚುನಾವಣೆಗೆ ಲಿಂಕ್ ಮಾಡಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | BJP ನಾಯಕನಿಗೆ ಚಪ್ಪಲಿ ಹಾರ ಹಾಕಿದ ಹಳೆಯ ವಿಡಿಯೋವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights