FACT CHECK | RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಎಂದು ಹೇಳಿದ್ದು ನಿಜವೇ?

“ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಆ ಬಗ್ಗೆ ಬಹಿರಂಗ ಹೇಳಿಕೆ ಬೇಡ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ ಎಂಬ ಹೊಸದಿಗಂತ ಪತ್ರಿಕಾ ವರದಿಯೊಂದು ವೈರಲ್ ಆಗಿದೆ.

ಬಿಜೆಪಿ ಮತ್ತು ಸಂಘಪರಿವಾರದ ಮುಂಖಡರು ಆಗಾಗ್ಗೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆಗಳನ್ನು ನೀಡಿರುವುದ್ನು ವಿಡಿಯೋಗಳಲ್ಲಿ ಕೇಳಿದ್ದೇವೆ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಪತ್ರಿಕಾ ತುಣುಕು ನಿಜವಾಗಿಯೂ ಮೋಹನ್ ಬಾಗವತ್ ಹೇಳಿಕೆಯ ವರದಿಯೇ ಎಂದು ಪರಿಶೀಳಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಹೊಸದಿಗಂತ ಹೊರತಪಡಿಸಿ ಬೇರೆ ಯಾವುದಾದರೂ ಮಾಧ್ಯಮಗಳಲ್ಲಿ ವರದಿಯಾಗಿದೆಯೇ ಎಂದು ಸರ್ಚ್ ಮಾಡಿದಾಗ, ಮೋಹನ್ ಭಾಗವತ್ ಅವರ ಈ ಹೇಳಿಕೆ ಕುರಿತು ಬೇರೆ ಯಾವ ಮಾಧ್ಯಮಗಳಲ್ಲಿಯೂ ವರದಿಯಾಗಿರುವುದು ಕಂಡು ಬಂದಿಲ್ಲ. ಹಾಗಾಗಿ ಇದೊಂದು ನಕಲಿ ವರದಿಯಾಗಿದೆ. ಲೋಕ ಸಭಾ ಚುನಾವಣೆಯನ್ನು ಹಿನ್ನಲೆಯಾಗಿಟ್ಟುಕೊಂಡು ಈ ನಕಲಿ ವರದಿಯನ್ನು ಹರಿಬಿಡಲಾಗಿದೆ.

ಲೋಕಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಅನೇಕ ಬಿಜೆಪಿ ನಾಯಕರು ಸಂವಿಧಾನ ಬದಲಾಯಿಸುವ ಕುರಿತು ಮಾತನಾಡಿ ಜನಾಕ್ರೋಶಕ್ಕೆ ಕಾರಣರಾಗಿದ್ದಾರೆ. ಈ ಹೇಳಿಕೆಗಳಿಗೆ ಪ್ರಧಾನಿ ಮೋದಿಯವರಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ತಮ್ಮ ಪಕ್ಷದ ಮುಖಂಡರ ಮೇಲೆ ಸಹ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ಬಿಜೆಪಿ ಪಕ್ಷವೇ ಸಂವಿಧಾನ ಬದಲಾಯಿಸಲು ಆಂತರಿಕವಾಗಿ ಪ್ರಯತ್ನಿಸುತ್ತಿದೆ ಎಂದು ವಿರೋದ ಪಕ್ಷಗಳು ಟೀಕಿಸುತ್ತಿವೆ ಮತ್ತು ಇದನ್ನೆ ಈ ಬಾರಿಯ ಲೋಕಸಭಾ ಚುನಾವಣೆಗೆ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ. ಆಗಾಗಿ ಇಂತಹ ನಕಲಿ ವರದಿಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ಹಲವು ನಕಲಿ ಸುದ್ದಿಗಳನ್ನು ರಾಜಕೀಯ ಪಕ್ಷಗಳು ಹರಿಬಿಟ್ಟಿದ್ದಾರೆ. ಪ್ರಸ್ತುತ ಎರಡನೇ ಹಂತದ ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಉಳಿದಿರುವಾಗ ಸಂವಿಧಾನ ಬದಲಾವಣೆ ಕುರಿತಂತೆ ಹಲವು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಶಾಸಕ ಎಸ್‌ ಬಾಲರಾಜ್ “ಸಂವಿಧಾನ ಬದಲು ಮಾಡಲು ಆರ್‌ಎಸ್‌ಎಸ್‌ಗೆ ಮಾತ್ರ ಸಾಧ್ಯ” ಎಂದು ಹೇಳಿದ್ದಾರೆ ಎಂಬ ನಕಲಿ ಸುದ್ದಿಯೊಂದನ್ನು ಹರಿಬಿಡಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ, ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಆ ಬಗ್ಗೆ ಬಹಿರಂಗ ಹೇಳಿಕೆ ಬೇಡ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ ಎಂಬ ಹೊಸದಿಗಂತ ಪತ್ರಿಕಾ ವರದಿಯನ್ನು ಎಡಿಟ್ ಮಾಡಿ ಮೋಹನ್ ಭಾಗವತ್ ಹೇಳಿಕೆ ಎಂಬಂತೆ ಬಿಂಬಿಸಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಕಾಂಗ್ರೆಸ್ ಸರ್ಕಾರ ಪ್ರತಿ ಯೂನಿಟ್‌ ವಿದ್ಯುತ್‌ಗೆ 7.25 ರೂ ಹೆಚ್ಚಳ ಮಾಡಿದೆ ಎಂಬುದು ಸುಳ್ಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights