FACT CHECK | ಬಕ್ರೀದ್‌ಗೆ ಬಲಿ ಕೊಡಲು ತಂದ ಮೇಕೆ ಮೇಲೆ ರಾಮನ ಹೆಸರು, ಕೃತ್ಯ ಎಸಗಿದವರ ವಿರುದ್ದ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸುಳ್ಳು

ವ್ಯಕ್ತಿಯೊಬ್ಬರು ಹಿಂದೂ ದೇವರಾದ ರಾಮನ ಹೆಸರನ್ನು ಬರದಿರುವ ಮೇಕೆ (ಓತ)ಯೊಂದನ್ನು ಹಿಡಿದುಕೊಂಡಿರುವ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಾ, ಈ ಕೃತ್ಯ ಎಸಗಿದವರ ವಿರುದ್ದ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಯಾಕೆಂದರೆ ಇದು ಜಾತ್ಯತೀತ ಭಾರತ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್ ಆಗಿರುವ ಫೋಟೋದಲ್ಲಿ ಮೇಕೆ ಮೇಲೆ ‘ರಾಮ’ ಎಂದು ಬರೆದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಎಂದು ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ಪೋಸ್ಟ್‌ನ ಹೇಳಿಕೆಯ ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್ ಸರ್ಚ್ ಮಾಡಿದಾಗ, ಮಾಧ್ಯಮಗಳು ಪ್ರಕಟಿಸಿದ ಹಲವು ವರದಿಗಳು ಲಭ್ಯವಾಗಿದೆ. ಅದನ್ನು ಇಲ್ಲಿ , ಇಲ್ಲಿ ಮತ್ತು ಇಲ್ಲಿ ನೋಡಬಹುದು.

ವರದಿಗಳ ಪ್ರಕಾರ, ಬಕ್ರೀದ್  ಸಂಭ್ರಮದ ದಿನದಂದು ಮುಂಬೈನಲ್ಲಿ ನಾಚಿಕೆಗೇಡಿನ ಕೃತ್ಯವೊಂದು ಬೆಳಕಿಗೆ ಬಂದಿದೆ. ಮೇಕೆಯ ಮೇಲೆ ‘ರಾಮ್’ ಎಂದು ಬರೆಯುವ ಮೂಲಕ ಅದನ್ನು ಮಾರಾಟ ಮಾಡುವ ಪ್ರಯತ್ನ ನಡೆಯಿದಿದೆ. ಜೊತೆಗೆ ಮೇಕೆಯನ್ನು ಬಲಿ ನೀಡಲು ಯೋಜನೆ ರೂಪಿಸಲಾಗಿತ್ತು ಎಂದು ತಿಳಿದುಬಂದಿದ್ದು, ಈ ಸಂಬಂಧ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮಾಂಸದ ಅಂಗಡಿಗೆ ಬೀಗಮುದ್ರೆ ಹಾಕಲಾಗಿದೆ. ಹಿಂದೂ ಸಂಘಟನೆಯವರು ಪ್ರತಿಭಟನೆ ಮಾಡಿದ ನಂತರ ನವೀ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿ ಮಟನ್ ಅಂಗಡಿಯ ಮಾಲೀಕರನ್ನು ವಶಕ್ಕೆ ಪಡೆದಿದ್ದಾರೆ.

ಮೂವರ ವಿರುದ್ಧ ಪ್ರಕರಣ

ಮುಂಬೈನ ಕುರಿ ಮಾಂಸದ ಅಂಗಡಿಯೊಂದರ ಮಾಲೀಕರು ಹಿಂದೂ ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಬೇಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ದೂರಿರುವ ಹಿಂದೂ ಸಂಘಟನೆ ಬಜರಂಗದಳ ಹೇಳಿದೆ. ದೂರಿನನ್ವಯ ಪೊಲೀಸರು ಅಂಗಡಿ ಮಾಲಕರು ಸೇರಿ ನೌಕರ ಸೇರಿದಂತೆ 3 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಮ್ ಹೆಸರನ್ನು ಬರೆದಿರುವ ಮೇಕೆಯನ್ನು ನವೀ ಮುಂಬೈನ ಸಿಬಿಡಿ ಸೆಕ್ಟರ್ 1 ರ ಗುಡ್ಲಕ್ ಮಟನ್ ಅಂಗಡಿಯಲ್ಲಿ ಮಾರಾಟಕ್ಕಾಗಿ ಇಡಲಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆದ ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಕ್ರಮ ತೆಗೆದುಕೊಂಡು ಮಾಂಸದ ಅಂಗಡಿಯನ್ನು ಸೀಲ್ ಮಾಡಿದ್ದಾರೆ.

ಅಲ್ಲದೇ ವಿಡಿಯೋ ವೈರಲ್ ಆದ ಬೆನ್ನಲ್ಲೇ ಹಿಂದೂ ಸಂಘಟನೆಯ ಸದಸ್ಯರು ಗುಡ್​ ಲಕ್​ ಮಟನ್ ಶಾಪ್ ಮುಂದೆ ಜಮಾಯಿಸಿದ್ದಾರೆ. ಈ ಬಗ್ಗೆ ಮಾಲೀಕರನ್ನು ಪ್ರಶ್ನಿಸಿದ್ದಾರೆ. ಆದರೆ ಗಲಾಟೆಯಾಗುತ್ತದೆಂದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಮಾಲೀಕನ ವಿರುದ್ಧ CBD ಬೇಲಾಪುರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲು ಮಾಡಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಮುಂಬೈನ ಮಾಂಸದ ಅಂಗಡಿಯೊಂದರಲ್ಲಿ ಮೇಕೆಯ ಮೇಲೆ ‘RAM’ ಎಂದು ಬರೆದಿರುವ ಘಟನೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹಲವು ವರದಿಗಳು ಲಭ್ಯವಾಗಿವೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಈ ರೀತಿ ಧಾರ್ಮಿಕ ಭಾವನೆಗಳನ್ನು ಕೆರಳಿಸಸುವುದರಿಂದ ಸಮುದಾಯಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಂಡುತ್ತದೆ. ಇಂತಹ ಘಟನೆಗಳು ಯಾವ ಕಾರಣಕ್ಕೂ ನಡೆಯಬಾರದು, ಇಂತಹ ಚಿಕ್ಕ ವಿಷಯಗಳೇ ಅನವಶ್ಯಕ ಕೋಮು ಸಂಘರ್ಷಕ್ಕೆ ದಾರಿ ಮಾಡಿಕೊಟ್ಟು ಅನಾಹುತಕ್ಕೆ ಕಾರಣವಾಗುತ್ತದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ‘ಪ್ರಧಾನ ಮಂತ್ರಿ ವಿಶ್ವಕರ್ಮ ಉಚಿತ ಹೊಲಿಗೆ ಯಂತ್ರ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ 15 ಸಾವಿರ ನೀಡಲಿದೆ ಎಂಬುದು ಸುಳ್ಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights