FACT CHECK | ಅಕ್ಟೋಬರ್ 1 ರಿಂದ ತೆರಿಗೆ ಪಾವತಿ ಮಾಡದಿದ್ದರೆ ವಿದೇಶಿ ಪ್ರಯಾಣಕ್ಕೆ ಅವಕಾಶವಿಲ್ಲವೇ?

“ಅಕ್ಟೋಬರ್ 1, 2024 ರಿಂದ ವಿದೇಶಕ್ಕೆ ಪ್ರಯಾಣಿಸುವ ಮೊದಲು ಎಲ್ಲಾ ಭಾರತೀಯ ನಾಗರಿಕರು ಆದಾಯ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ITCC) ಪಡೆಯಬೇಕು,  ಇಲ್ಲದಿದ್ದರೆ ಯಾವುದೇ ವಿದೇಶ ಪ್ರವಾಸವನ್ನು ಕೈಗೊಳ್ಳಲು ಯಾವ ಭಾರತೀಯನಿಂದಲೂ ಸಾಧ್ಯವಾಗುವುದಿಲ್ಲ. ಒಂದು ವೇಳೆ ತೆರಿಗೆ ಕ್ಲಿಯರೆನ್ಸ್‌ ಪಡೆಯದೆ  ವಿದೇಶ ಪ್ರವಾಸ ಮಾಡಲು ಯತ್ನಿಸಿದರೆ ಅವರಿಗೆ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್‌ ಆಗುತ್ತಿದೆ.

ಹೀಗೆ ಹೆಚ್ಚಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ಪೋಸ್ಟ್‌ ಅನ್ನು ನೋಡಿದ ಹಲವು ಸಾಮಾಜಿಕ ಜಾಲತಾಣದ ಬಳಕೆದಾರರು ತಮ್ಮ ಖಾತೆಗಳಲ್ಲಿ ಸೋಶಿಯಲ್ ಮೀಡಿಯಾಗಳಲ್ಲಿಯೂ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ವಾಟ್ಸ್‌ಆಪ್‌ಗಳಲ್ಲಿ ಈ ಸಂದೇಶವನ್ನು ಹೆಚ್ಚಾಗಿ ಫಾರ್‌ವರ್ಡ ಮಾಡುತ್ತಿದ್ದು, ಇದೇ ಸಂದೇಶವನ್ನೆ ಹಲವರು ಶೇರ್ ಮಾಡುತ್ತಿದ್ದಾರೆ. ಹಾಗಿದ್ದರೆ ನಿಜವಾಗಿಯೂ ತೆರಿಗೆ ಪಾವತಿ ಮಾಡದಿದ್ದರೆ ವಿದೇಶ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎಂದು  ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್ ಬಳಸಿ ಗೂಗಲ್ ಸರ್ಚ್ ಮಾಡಿದಾಗ,  1961 ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 230 ರ ಅಡಿಯಲ್ಲಿ, ಪ್ರತಿಯೊಬ್ಬರೂ ಆದಾಯ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ITCC) ಪಡೆಯುವ ಅಗತ್ಯವಿಲ್ಲ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಸ್ಪಷ್ಟಪಡಿಸಿದೆ ಎಂಬುದು ತಿಳಿದು ಬಂದಿದೆ.

ಇದನ್ನೇ ಆಧಾರವಾಗಿ ಇರಿಸಿಕೊಂಡು ಮತ್ತಷ್ಟು ಸರ್ಚ್ ನಡೆಸಿದಾಗ ವಿಶೇಷ ಸಂದರ್ಭಗಳಲ್ಲಿ ಮಾತ್ರ ITCC ಅವಶ್ಯಕವಾಗಿದ್ದು, ತೆರಿಗೆ ಕ್ಲಿಯರೆನ್ಸ್‌ ಕೇಳಬಹುದು. ಉದಾಹರಣೆಗೆ ಒಬ್ಬ ವ್ಯಕ್ತಿಯು ಗಮನಾರ್ಹ ಹಣಕಾಸಿನ ಅಕ್ರಮಗಳಲ್ಲಿ ತೊಡಗಿಸಿಕೊಂಡಾಗ ಮತ್ತು ಆದಾಯ ತೆರಿಗೆ ಕಾಯಿದೆ ಅಥವಾ ಸಂಪತ್ತು-ತೆರಿಗೆ ಕಾಯಿದೆಯಡಿ ತನಿಖೆಗೆ ಅವರ ಉಪಸ್ಥಿತಿಯು ಅತ್ಯಗತ್ಯವಾಗಿರುತ್ತದೆ ಈ ಸಂದರ್ಭ ಅಥವಾ ಇನ್ನೀತರೆ ಗಂಭೀರ ಆರ್ಥಿಕ ಅಪರಾಧದ ಸಾಧ್ಯತೆಗಳು ಹೆಚ್ಚಿದ್ದಾಗ ಕೇಳಬಹುದಾಗಿದೆ ಎಂಬ ಅಂಶ CBDT ಯ ಅಧಿಕೃತ ಪ್ರಕಟಣೆಯಿಂದ ತಿಳಿದು ಬಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಅಕ್ಟೋಬರ್ 1, 2024 ರಿಂದ ವಿದೇಶಕ್ಕೆ ಪ್ರಯಾಣಿಸುವ ಮೊದಲು ಎಲ್ಲಾ ಭಾರತೀಯ ನಾಗರಿಕರು ಆದಾಯ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ITCC) ಪಡೆಯಬೇಕು ಎಂಬುದು ಸುಳ್ಳಾಗಿದೆ. 1961 ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 230 ರ ಅಡಿಯಲ್ಲಿ, ಪ್ರತಿಯೊಬ್ಬರೂ ಆದಾಯ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ITCC) ಪಡೆಯುವ ಅಗತ್ಯವಿಲ್ಲ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಸ್ಪಷ್ಟಪಡಿಸಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ  ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಇಸ್ಕಾನ್‌ ಟೆಂಪಲ್‌ನಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲೀಯತ್ತೇನು ಗೊತ್ತೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights