FACT CHECK | ಟೋಲ್‌ ಪ್ಲಾಜಾದಲ್ಲಿ ಮುಸ್ಲಿಮರು ಹಿಂದೂ ಸಿಬ್ಬಂಧಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಸುಳ್ಳು

“ಚಂಡೀಘಡ ಟೋಲ್‌ ಪ್ಲಾಜಾದಲ್ಲಿ ಮುಸಲ್ಮಾನರು ಗಲಾಟೆ ಮಾಡಿ, ಟೋಲ್‌ ಸಿಬ್ಬಂಧಿಯ ಮೇಲೆ ಹಲ್ಲೆ ನಡೆಸಿದ್ದಾರೆ, ಅದರಲ್ಲೂ ಹಿಂದೂ ಸಿಬ್ಬಂಧಿಗಳ ಮೇಲೆಯೇ ದೌರ್ಜನ್ಯ ನಡೆಸಲಾಗಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

 

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಇನ್ನು ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಮುಸಲ್ಮಾನರ ಟೋಪಿ ಧರಿಸಿರುವುದು ಕಂಡು ಬಂದಿದೆ. ಹೀಗಾಗಿ ವೈರಲ್‌ ವಿಡಿಯೋ ಕೋಮು ದ್ವೇಷಕ್ಕೆ ಸಂಬಂಧಿಸಿದಂತೆ ಹಂಚಿಕೊಳ್ಳಲಾಗುತ್ತಿದ್ದು, ಸಮಾಜದ ಸ್ವಾಸ್ಥ್ಯ ಕದಡುವುದಕ್ಕೆ ಕಿಡಿಗೇಡಿಗಳು ಮುಂದಾಗಿದ್ದಾರೆ. ಹೀಗೆ ವಿವಿಧ ರೀತಿಯ ಬರಹಗಳೊಂದಿಗೆ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ : 

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 18 ಸೆಪ್ಟೆಂಬರ್‌ 2023ರಲ್ಲಿ ಬಾಂಗ್ಲಾದೇಶದ ದ ಡೈಲಿ ಗೋನಾಕನಾಥೋ ಎಂಬ ಪತ್ರಿಕೆಯಲ್ಲಿ ಕುರಿಲ್‌ ಟೋಲ್‌ ಪ್ಲಾಜಾದಲ್ಲಿ ನಡೆದದ್ದು ಏನು? ಎಂಬ ಶೀರ್ಷಿಕೆಯೊಂದಿಗೆ ಘಟನೆಯ ವಿವರವನ್ನು ನೀಡಲಾಗಿದೆ.

 

 

 

 

 

 

 

 

 

 

 

 

 

 

ಈ ವರದಿಯ ಪ್ರಕಾರ, ಸರಕು ಸಾಗಾಟ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸಲಾಗಿತ್ತು. ಆದರೆ ಬಾಂಗ್ಲದೇಶದ ಹಲವೆಡೆ ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟವನ್ನು ನಿಷೇಧಿಸಲಾಗಿದೆ. ಹೀಗಿದ್ದರೂ ಟೋಲ್‌ ಬಳಿ ಬಂದ ಈ ವಾಹನವನ್ನು ಅಲ್ಲಿನ ಸಿಬ್ಬಂಧಿಗಳು ತಡೆದಿದ್ದಾರೆ. ಇಷ್ಟು ಮಾತ್ರವಲ್ಲದೆ ಟೋಲ್‌ ಹಣವನ್ನು ಕೂಡ ಕಟ್ಟುವುದಿಲ್ಲ ಎಂದು ವಾಗ್ವಾದವನ್ನು ನಡೆಸಿದ್ದಾರೆ. ಇದರಿಂದ ಗಲಾಟೆ ನಡೆದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದೇ ರೀತಿಯ ಅಂಶಗಳು ಹಲವು ವರದಿಗಳಲ್ಲಿ ಕೂಡ ಕಂಡು ಬಂದಿದೆ. ಈ ಎಲ್ಲಾ ಅಂಶಗಳಿಂದ ಈ ವಿಡಿಯೋ ಭಾರತದಲ್ಲ ಮತ್ತು ಭಾರತದ ಮುಸಲ್ಮಾನರಿಗೂ ಈ ವಿಡಿಯೋಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿದೆ.

 

 

 

 

 

 

 

 

 

 

 

 

 

 

 

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋಗೂ ಭಾರತಕ್ಕೂ ಸಂಬಂಧವಿಲ್ಲ. ವೈರಲ್‌ ವಿಡಿಯೋದಲ್ಲಿನ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದ್ದು, ಈ ವಿಡಿಯೋವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮೋದಿ ಆಡಳಿತದಲ್ಲಿ ನಿರ್ಮಾಣಗೊಂಡ ಸೇತುವೆ ಎಂದು ಸುಳ್ಳು ಪೋಸ್ಟ್‌ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights