FACT CHECK | ವಿಶ್ವಸಂಸ್ಥೆಯಲ್ಲಿ ಭಾರತ ಖಾಯಂ ಸದಸ್ಯತ್ವ ಹೊಂದಿದೆ ಎಂಬುದು ಸುಳ್ಳು

“ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 23 ಸೆಪ್ಟೆಂಬರ್ 2024 ರಂದು ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯಲ್ಲಿ ‘ಭವಿಷ್ಯದ ಶೃಂಗಸಭೆ’ಯನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಅವರು ವಿಶ್ವಸಂಸ್ಥೆಯಂತಹ ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆಗಳಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಖಾಯಂ ಸದಸ್ಯತ್ವವನ್ನು ಪಡೆದುಕೊಂಡಿದೆ ಮತ್ತು ವಿಟೋ ಅಧಿಕಾರವನ್ನು ಪಡೆದುಕೊಂಡಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದೇ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು ಭಾರತಕ್ಕೆ ನಿಜವಾಗಿಯೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವವನ್ನು ಪಡೆದುಕೊಂಡಿದೆ ಎಂದು ಭಾವಿಸಿದ್ದಾರೆ. ಹೀಗಾಗಿ ಹಲವರು ತಮ್ಮ ಸಾಮಾಜಿಕ ಜಾಲತಾಣದ ವೈಯಕ್ತಿಕ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ನಿಜಕ್ಕೂ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವವನ್ನು ನೀಡಲಾಗಿದೆಯೇ ಎಂದು ಪರಿಶೀಲಿಸಲು ವಿಶ್ವಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಅನ್ನು ಸರ್ಚ್ ಮಾಡಿದಾಗ, ಯುಎನ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಭಾರತವು ಇನ್ನೂ ಯುಎನ್‌ಎಸ್‌ಸಿಯ ಖಾಯಂ ಸದಸ್ಯರಾಗಿಲ್ಲ ಮತ್ತು ವಿಟೋ ಅಧಿಕಾರವನ್ನು ಹೊಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

 

 

 

 

 

 

 

 

ಪ್ರಸ್ತುತ, ಕೇವಲ ಐದು ದೇಶಗಳು – ಚೀನಾ, ಫ್ರಾನ್ಸ್, ರಷ್ಯಾ, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್-ಯುಎನ್‌ಎಸ್‌ಸಿಯ ಖಾಯಂ ಸದಸ್ಯರಾಗಿದ್ದಾರೆ ಮತ್ತು ಈ ಖಾಯಂ ಸದಸ್ಯರಿಗೆ ಮಾತ್ರ ವೀಟೋ ಅಧಿಕಾರವಿದೆ. ಯುಎನ್‌ಎಸ್‌ಸಿಯು ಐದು ಖಾಯಂ ಸದಸ್ಯ ರಾಷ್ಟ್ರಗಳ ಜೊತೆಗೆ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಿಂದ ಎರಡು ವರ್ಷಗಳ ಅವಧಿಗೆ ಚುನಾಯಿತರಾದ ಹತ್ತು ಶಾಶ್ವತವಲ್ಲದ ಸದಸ್ಯರನ್ನು ಒಳಗೊಂಡಿದೆ. ಪ್ರಸ್ತುತ, ಅಲ್ಜೀರಿಯಾ, ಈಕ್ವೆಡಾರ್, ಗಯಾನಾ, ಜಪಾನ್, ಮಾಲ್ಟಾ, ಮೊಜಾಂಬಿಕ್, ರಿಪಬ್ಲಿಕ್ ಆಫ್ ಕೊರಿಯಾ, ಸಿಯೆರಾ ಲಿಯೋನ್, ಸ್ಲೊವೇನಿಯಾ ಮತ್ತು ಸ್ವಿಟ್ಜರ್ಲೆಂಡ್ UNSC ಯ 10 ದೇಶಗಳು ಶಾಶ್ವತವಲ್ಲದ ಸದಸ್ಯರಾಗಿದ್ದಾರೆ.

 

 

 

 

 

 

 

 

ಸೆಪ್ಟೆಂಬರ್ 2024 ರ ವಿಶ್ವಸಂಸ್ಥೆಯ ಕಾರ್ಯಸೂಚಿಯನ್ನು ಸಹ ಪರಿಶೀಲಿಸಿದ್ದೇವೆ ಆದರೆ UNSC ಸುಧಾರಣೆಗಳಿಗೆ ಸಂಬಂಧಿಸಿದ ಯಾವುದೇ ವಿಷಯಗಳು ಅಥವಾ ಯಾವುದೇ ರಾಷ್ಟ್ರಗಳಿಗೆ ವೀಟೋ ಅಧಿಕಾರವನ್ನು ನೀಡಲಾಗಲಿಲ್ಲ. ಈ ಎಲ್ಲಾ ಮಾಹಿತಿಗಳನ್ನು ಆಧರಿಸಿ, ಭಾರತಕ್ಕೆ ಯುಎನ್‌ಎಸ್‌ಸಿಯಲ್ಲಿ ವಿಟೋ ಅಧಿಕಾರದೊಂದಿಗೆ ಶಾಶ್ವತ ಸದಸ್ಯತ್ವವನ್ನು ಇನ್ನೂ ನೀಡಲಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಹೆಚ್ಚಿನ ಹುಡುಕಾಟವನ್ನು ನಡೆಸಿದಾಗ UNSC ಖಾಯಂ ಸದಸ್ಯ ರಾಷ್ಟ್ರಗಳಾದ US, ಫ್ರಾನ್ಸ್ ಮತ್ತು UK ಭಾರತಕ್ಕೆ ಖಾಯಂ ಸದಸ್ಯನಾಗಲು ತಮ್ಮ ಬೆಂಬಲವನ್ನು ವಿಸ್ತರಿಸಿದೆ ಎಂದು ತಿಳಿಸುವ ಹಲವಾರು ಸುದ್ದಿ ವರದಿಗಳನ್ನು  ಕಂಡು ಕೊಂಡಿದ್ದೇವೆ. 

 

 

 

 

 

 

 

 

 

ಒಟ್ಟಾರೆಯಾಗಿ ಹೇಳುವುದಾದರೆ, ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ ಖಾಯಂ ಸದಸ್ಯತ್ವವನ್ನು ಇನ್ನೂ ನೀಡಲಾಗಿಲ್ಲ ಅಥವಾ ಅದು ವೀಟೋ ಅಧಿಕಾರವನ್ನು ಹೊಂದಿಲ್ಲ. US, ಫ್ರಾನ್ಸ್ ಮತ್ತು UK ಭಾರತಕ್ಕೆ ಖಾಯಂ ಸದಸ್ಯನಾಗಲು ತಮ್ಮ ಬೆಂಬಲವನ್ನು ಸೂಚಿಸಿವೆ ಎಂಬ ವರದಿಗಳು ಕಂಡು ಬಂದಿದೆ.  ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಯುವತಿ ಮಹಾಲಕ್ಷ್ಮಿ ಕೊಲೆ ಪ್ರಕರಣವನ್ನು’ಅಶ್ರಫ್’ ತಲೆಗೆ ಕಟ್ಟಿದ ಕೆಲವು ಮಾಧ್ಯಮಗಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights