FACT CHECK | ಜ್ಯೋತಿರಾದಿತ್ಯ ಸಿಂಧಿಯಾ BJP ಮತ್ತು ಬಜರಂಗದಳವನ್ನು ಟೀಕಿಸಿದ್ದ ಹಳೆಯ ವಿಡಿಯೋವನ್ನು ಇತ್ತೀಚಿನದ್ದು ಎಂದು ಹಂಚಿಕೆ

ಭಾರತೀಯ ಜನತಾ ಪಕ್ಷದ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಜರಂಗದಳವನ್ನು ಟೀಕಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗಷ್ಟೇ ವಿಡಿಯೋ ಶೇರ್ ಆಗುತ್ತಿದ್ದು, ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಜರಂಗದಳವನ್ನು ಟೀಕಿಸುವ ಮತ್ತು ಅದರ ಸದಸ್ಯ ಬಲರಾಮ್ ಪಾಕಿಸ್ತಾನಿ ಗೂಢಚಾರಿಕೆ ಸಂಸ್ಥೆ ಐಎಸ್‌ಐನಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸುತ್ತಿರುವ ವೀಡಿಯೊವನ್ನು ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಜರಂಗದಳವನ್ನು ಟೀಕಿಸುತ್ತಿರುವ ವೀಡಿಯೊವನ್ನು ಫೇಸ್‌ಬುಕ್ ಬಳಕೆದಾರರು ಸೆಪ್ಟೆಂಬರ್ 30 ರಂದು ಹಂಚಿಕೊಂಡಿದ್ದು, ಪೋಸ್ಟ್‌ನ ಶೀರ್ಷಿಕೆಯು, “ಲಗತಾ ಹೇ ಸಿಂಧಿಯಾ ಜಿ ಕಾ ಬಿಜೆಪಿಯಲ್ಲಿ ದಿನ ಭರ ಗಯಾ ಹೈ” ಎಂದು ಹಿಂದಿಯಲ್ಲಿ ಹಂಚಿಕೊಳ್ಳಲಾಗಿದೆ. ಅದನ್ನು ಅನುವಾದಿಸಿದಾಗ “ಬಿಜೆಪಿಯಲ್ಲಿ ಸಿಂಧಿಯಾ ಅವರ ಕಾಲ ಮುಗಿದಂತೆ ತೋರುತ್ತಿದೆ” ಎಂದು ತೋರಿಸಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 17 ಫೆಬ್ರವರಿ 2017 ರಂದು ಕಾಂಗ್ರೆಸ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವೈರಲ್ ವಿಡಿಯೋ ಲಭ್ಯವಾಗಿದೆ.

ಶೀರ್ಷಿಕೆಯಲ್ಲಿ ನೀಡಿರುವ ಮಾಹಿತಿ ಪ್ರಕಾರ, ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯ ವಿಡಿಯೋ. ಐಎಸ್‌ಐ ನೆಟ್‌ವರ್ಕ್‌ಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಬಜರಂಗದಳದ ವಿರುದ್ಧ ಕಾಂಗ್ರೆಸ್ ನಾಯಕರು ಹಲವು ಆರೋಪಗಳನ್ನು ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್ ವಿಡಿಯೋದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೇಳಿಕೆಯನ್ನು 8.39 ಸೆಕೆಂಡುಗಳಿಂದ ಕೇಳಬಹುದು.

“ಎಟಿಎಸ್ ಮಧ್ಯಪ್ರದೇಶದಲ್ಲಿ ಐಎಸ್‌ಐ ಜಾಲವನ್ನು ಬಹಿರಂಗಪಡಿಸಿದೆ. ಬೇಹುಗಾರಿಕೆ ಆರೋಪದ ಮೇಲೆ ಅಲ್ಟ್ರಾ-ಆಧುನಿಕ ತಂತ್ರಜ್ಞಾನ ಹೊಂದಿದ ದೂರಸಂಪರ್ಕ ಉಪಕರಣಗಳೊಂದಿಗೆ 11 ಜನರನ್ನು ಎಟಿಎಸ್ ಬಂಧಿಸಿದೆ. ಅವರು ಸೇನೆ ಮತ್ತು ದೇಶಕ್ಕೆ ಸಂಬಂಧಿಸಿದ ಮಾಹಿತಿ, ಚಲನವಲನ, ಫೋಟೋಗಳು ಇತ್ಯಾದಿಗಳನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ನೀಡುತ್ತಿದ್ದರು ಎಂದು ವರದಿ ಹೇಳಿದೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ಆರೋಪಿಸಿದ್ದಾರೆ.

ಮಾರ್ಚ್ 10, 2020 ರಂದು ಎಕನಾಮಿಕ್ ಟೈಮ್ಸ್‌ನ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್‌ ಪಕ್ಷವನ್ನು ತೊರೆದರು ಎಂದು ಹೇಳಿದೆ. ಮಾರ್ಚ್ 11, 2020 ರಂದು ಬಿಬಿಸಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಅಂದರೆ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ ತೊರೆದು ಬಿಜೆಪಿ ಪಕ್ಷವನ್ನು ಸೇರಿದ ವರದಿಯನ್ನು ಮಾರ್ಚ್ 11, 2020 ರಂದು NDTV ಪ್ರಕಟಿಸಿದೆ. ಹಾಗಾಗಿ ಈಗ ಸಾಮಾಜಿಕ ಮಾಧ್ಯಮಗಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ ಪಕ್ಷವನ್ನು ತೊರೆಯುವ ಮೊದಲು ನೀಡಿದ್ದ ಹೇಳಿಕೆಯೇ ಹೊರತು ಇತ್ತೀಚಿನದಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಜ್ಯೋತಿರಾದಿತ್ಯ ಸಿಂಧಿಯಾ  2017ರಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಇದ್ದಾಗ ನೀಡಿದ ಬಿಜೆಪಿ ವಿರುದ್ದದ ಹೇಳಿಕೆಯನ್ನು ಇತ್ತೀಚಿನದ್ದು, ಮತ್ತು ಬಿಜೆಪಿ ವಿರುದ್ದ ಬಂಡಾಯ ಎದ್ದಿದ್ದಾರೆ ಎಂಬಂತೆ ಬಿಂಬಿಸಲು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಪ್ರಧಾನಿ ಮೋದಿಯನ್ನು ‘ಜಿಯೋನಿಸ್ಟ್ ಗುಲಾಮ’ ಎಂದು ಕರೆದಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights