FACT CHECK | ಇಸ್ರೇಲ್ ಪ್ರಧಾನಿ ಜೀವ ಉಳಿಸಿಕೊಳ್ಳಲು ಓಡಿಹೋಗುತ್ತಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಇಸ್ರೇಲ್‌ನ ಟೆಲ್ ಅವಿವ್‌ನ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಕೆಲವೇ ಗಂಟೆಗಳ ನಂತರ, ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೆದರಿ ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದ ಕಾರಿಡಾರ್‌ನ ಮೂಲಕ ಬಂಕರ್‌ಗೆ ಓಡಿಹೋಗುತ್ತಿದ್ದಾರೆ ಎಂದು ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

Sohidul Islam Sahid ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟರ್‌ನಲ್ಲಿ, “ಇಸ್ರೇಲ್ ಪಿಎಂ ಬೆಂಜಮಿನ್ ನೆತನ್ಯಾಹು ತನ್ನ ಜೀವವನ್ನು ಉಳಿಸಿಕೊಳ್ಳಲು ಓಡುತ್ತಿದ್ದಾರೆ. ಅವರು ಎಷ್ಟು ದಿನ ಬಂಕರ್‌ನಲ್ಲಿ ಅಡಗಿಕೊಳ್ಳುತ್ತಾರೆ” ಎಂದು ಹಂಚಿಕೊಳ್ಳಲಾಗುತ್ತಿದೆ.

Netanyahu running fact check 1

‘ಇರಾನ್‌ ದಾಳಿಗೆ ಬೆದರಿದ ನೆತನ್ಯಾಹು ಜೀವರಕ್ಷಣೆಗಾಗಿ ಬಂಕರ್‌ ಕಡೆ ಓಡುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಫೇಸ್‌ಬುಕ್ ಮತ್ತು ಎಕ್ಸ್‌ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ಕಟ್ಟಡವೊಂದರ ಕಾರಿಡಾರ್‌ನಲ್ಲಿ ಓಡುತ್ತಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ಯಾಲೆಸ್ಟೀನ್‌ನಲ್ಲಿ ಹಮಾಸ್‌ ಮತ್ತು ಲೆಬನಾನ್‌ನಲ್ಲಿ ಹಿಜ್ಬುಲ್ಲಾ ವಿರುದ್ಧ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ಖಂಡಿಸುತ್ತಿರುವ ಹಲವು ಸಾಮಾಜಿಕ ಜಾಲತಾಣ ಬಳಕೆದಾರರು, ಹಿಜ್ಬುಲ್ಲಾದ ಮುಖ್ಯಸ್ಥ ನಸರುಲ್ಲಾ ಹಸನ್‌ನನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಇರಾನ್‌ ಸೇನೆಯು ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದ ಸಂದರ್ಭಕ್ಕೆ ಈ ವಿಡಿಯೊವನ್ನು ತಳಕುಹಾಕುತ್ತಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ಕಟ್ಟಡವೊಂದರ ಕಾರಿಡಾರ್‌ನಲ್ಲಿ ಓಡುತ್ತಿರುವ ವಿಡಿಯೋ ತುಣುಕನ್ನು ಪರಿಶೀಲಿಸಲು ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 2021ರ ಡಿಸೆಂಬರ್ 14 ರಂದು ಬೆಂಜಮಿನ್ ನೆತನ್ಯಾಹು ಅವರ ಅಧಿಕೃತ X ಖಾತೆಯು ಹಂಚಿಕೊಂಡ ಮೂಲ ವಿಡಿಯೋ ಲಭ್ಯವಾಗಿದೆ.

Netanyahu running fact check 2

“ನಿಮಗಾಗಿ ಓಡಲು ನಾನು ಯಾವಾಗಲೂ ಹೆಮ್ಮೆಪಡುತ್ತೇನೆ. ಈ ಫೋಟೋ ಅರ್ಧ ಘಂಟೆಯ ಹಿಂದೆ ನೆಸೆಟ್‌ನಲ್ಲಿ ತೆಗೆದದ್ದು” ಎಂದು ಬರೆದು ಹಂಚಿಕೊಂಡಿದ್ದಾರೆ. “ಇಸ್ರೇಲ್‌ ಸಂಸತ್ತಿನ ಕಾರಿಡಾರಿನಲ್ಲಿ ಅವರು ಓಡುತ್ತಿರುವಾಗ ಈ ವಿಡಿಯೊ ಮಾಡಲಾಗಿದೆ. ಆಗ ಅವರು ಪ್ರಧಾನಿಯಾಗಿರಲಿಲ್ಲ. ವಿರೋಧ ಪಕ್ಷದ ನಾಯಕರಾಗಿದ್ದರು. ಸಂಸತ್ತಿನಲ್ಲಿ ಮಸೂದೆಯೊಂದನ್ನು ಮಂಡಿಸಿದಾಗ ಅದಕ್ಕೆ ಸಂಬಂಧಿಸಿದಂತೆ ಮತದಾನದಲ್ಲಿ ಭಾಗವಹಿಸುವುದಕ್ಕೆ ಅವರು ಓಡಿದ್ದರು.” ಎಂದು 2021ರ ಡಿಸೆಂಬರ್ 13ರಂದು ಪ್ರಕಟವಾದ ಹೀಬ್ರೂ ಸುದ್ದಿ ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2014ರಲ್ಲಿ ಇಸ್ರೇಲ್‌ ಸಂಸತ್ತಿನಲ್ಲಿ ಮಸೂದೆಯೊಂದನ್ನು ಮಂಡಿಸಿದಾಗ ಅದಕ್ಕೆ ಸಂಬಂಧಿಸಿದಂತೆ ಮತದಾನದಲ್ಲಿ ಭಾಗವಹಿಸುವುದಕ್ಕೆ ಬೆಂಜಮಿನ್ ನೆತನ್ಯಾಹು ಇಸ್ರೇಲ್‌ ಸಂಸತ್ತಿನ ಕಾರಿಡಾರಿನಲ್ಲಿ ಓಡಿ ಹೋಗುತ್ತಿರುವ ವಿಡಿಯೋವನ್ನು, ಇರಾನ್ ದಾಳಿಗೆ ಹೆದರಿ ತನ್ನ ಜೀವವನ್ನು ಬಂಕರ್‌ನಲ್ಲಿ ಅಡಗಿಕೊಳ್ಳಲು ಓಡಿಹೋಗುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಕಲಬೆರಕೆ ಹಾಲು ಸೇವನೆಯಿಂದ 2025ರ ಹೊತ್ತಿಗೆ ಶೇ. 85 ರಷ್ಟು ಭಾರತೀಯರು ಕ್ಯಾನ್ಸರ್‌ಗೆ ತುತ್ತಾಗುತ್ತಾರೆ ಎಂದು WHO ಹೇಳಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights