FACT CHECK | ನಿತೀಶ್ ಕುಮಾರ್ ಮತ್ತು ರಾಹುಲ್ ಗಾಂಧಿ ಭೇಟಿಯ ಹಳೆಯ ಚಿತ್ರವನ್ನು ಇತ್ತೀಚಿನದ್ದು ಎಂದು ಹಂಚಿಕೆ

ರಾಜಕೀಯದಲ್ಲಿ ಯಾರೂ ಮಿತ್ರರೂ ಅಲ್ಲ ಯಾರೂ ಶತ್ರುವೂ ಅಲ್ಲ ಎಂಬ ಮಾತನ್ನು ಸಮರ್ಥಿಸುವಂತೆ NDA ಮಿತ್ರಪಕ್ಷದ ಪ್ರಮುಖರಲ್ಲಿ ಒಬ್ಬರಾದ ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ಇಂಡಿಯಾ ಕೂಟದ ನಾಯಕರಾದ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

“ಹರಿಯಾಣಾ ಸೋತ ನಂತರ ರಾಹುಲ್ ಗಾಂಧಿ ಅವರು ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ್ದರ ಅರ್ಥವೇನು? ಏನಾದರೂ ಆಟ ನಡೆಯುತ್ತಿರಬೇಕು?”

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಯ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಲ್ಲದೆ, ಉಭಯ ನಾಯಕರು ಇತ್ತೀಚೆಗೆ ಭೇಟಿಯಾಗಿದ್ದು, ಪ್ರಮುಖ ರಾಜಕೀಯ ಬದಲಾವಣೆ ಆಗಲಿದೆ ಎಂಬ ಬರಹಗಳೂ ಚಿತ್ರದ ಜೊತೆ ಕಂಡುಬಂದಿವೆ.ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಚಿತ್ರದಲ್ಲಿ ಕಾಣಬಹುದಾಗಿದೆ. ಹಾಗಿದ್ದರೆ ಈ ಎಲ್ಲ ನಾಯಕರ ಭೇಟಿಯ ಹಿಂದಿನ ಉದ್ದೇಶ ಏನು ? ಕೇಂದ್ರ ಸರ್ಕಾರವನ್ನ ಬೀಳಿಸುವ ಉದ್ದೇಶವೇನಾದರೂ ಇದೆಯೇ ? ಈ ಫೋಟೊ ಯಾವಾಗಿನದ್ದು ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 2023ರ ಏಪ್ರಿಲ್ 12 ರಂದು ವರದಿಯೊಂದರ ಜೊತೆ ಈ ಚಿತ್ರ ಬಳಸಿರುವುದು ಕಂಡುಬಂದಿದೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್  ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ವಿರುದ್ಧ ಸಾಮಾನ್ಯ ರಂಗವನ್ನು ರೂಪಿಸುವ ಪ್ರಯತ್ನಗಳ ಭಾಗವಾಗಿ ಭೇಟಿ ಮಾಡಿದ್ದು, ಪ್ರತಿಪಕ್ಷಗಳ ಒಗ್ಗಟ್ಟಿನ ಸೈದ್ಧಾಂತಿಕ ಹೋರಾಟದ ಕಡೆಗೆ ಇದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಒನ್ ಇಂಡಿಯಾ ಸುದ್ದಿ ತಾಣ ವರದಿ ಮಾಡಿದೆ.

ಖರ್ಗೆ ಮತ್ತು ಅವರು ಜೆಡಿಯು ಮತ್ತು ಆರ್‌ಜೆಡಿ ನಾಯಕರೊಂದಿಗೆ ಇರುವ ಚಿತ್ರವನ್ನು ಪೋಸ್ಟ್ ಮಾಡಿದ ರಾಹುಲ್ ಗಾಂಧಿ, ಅವರು “ಒಟ್ಟಾಗಿ ನಿಂತಿದ್ದೇವೆ, ಭಾರತಕ್ಕಾಗಿ ಒಟ್ಟಿಗೆ ಹೋರಾಡುತ್ತೇವೆ. ಈ ಸಿದ್ಧಾಂತದ ಕದನದಲ್ಲಿ, ಪ್ರತಿಪಕ್ಷಗಳ ಏಕತೆಯ ಕಡೆಗೆ ಇಂದು ಐತಿಹಾಸಿಕ ಹೆಜ್ಜೆ ಇಡಲಾಗಿದೆ. (ನಾವು) ಒಟ್ಟಿಗೆ ಭಾರತಕ್ಕಾಗಿ ನಿಂತಿದ್ದೇವೆ, ಒಟ್ಟಾಗಿ ಹೋರಾಡುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟ್ ನಲ್ಲಿ ತಿಳಿಸಿದ್ದರು.

ವರದಿಯ ಪ್ರಕಾರ, ನವದೆಹಲಿಯ ಖರ್ಗೆ ಅವರ ನಿವಾಸದಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಭೆಗಳ ಒಂದು ಚಿತ್ರ ಇದಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಸಂಬಂಧವೇ ಇಲ್ಲದ ಸುಳ್ಳು ಮಾಹಿತಿ ಜೊತೆ ಹಂಚಿಕೊಳ್ಳಲಾಗುತ್ತಿದೆ.

ಲೋಕಸಭೆ ಚುನಾವಣೆಗೂ ಮುನ್ನವೇ ಇಂಡಿಯಾ ಬಣ ತೊರೆದಿದ್ದ ನಿತೀಶ್ ಕುಮಾರ್‌, ಬಿಜೆಪಿ ನೇತೃತ್ವದ ಎನ್‌ಡಿಎ ಸೇರಿದ್ದರು. ಚುನಾವಣೆ ಬಳಿಕ ಕೇಂದ್ರದಲ್ಲಿ ಸರ್ಕಾರ ರಚನೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ರಾಹುಲ್ ಗಾಂಧಿ ಮತ್ತು ನಿತೀಶ್ ಭೇಟಿಯ ಉದ್ದೇಶವೇನು। ಎಂಬತ್ಯಾದಿ ಬರಹಗಳ ಜೊತೆ ಚಿತ್ರ ಹಂಚಿಕೊಳ್ಳಲಾಗುತ್ತಿದೆ. NDTV ಯೂಟ್ಯೂಬ್ ಚಾನೆಲ್‌ನಲ್ಲಿ ಉಭಯ ನಾಯಕರ ಭೇಟಿ ಕುರಿತ ಸಂಪೂರ್ಣ ವಿಡಿಯೋ ಲಭ್ಯವಾಗಿದೆ.

ಸುದ್ದಿಸಂಸ್ಥೆ ಪಿಟಿಐನ ಫ್ಯಾಕ್ಟ್‌ ಚೆಕ್ ಡೆಸ್ಕ್ ಈ ಕುರಿತಂತೆ ಪರಿಶೀಲನೆ ನಡೆಸಿದ್ದು, ಚಿತ್ರದ ಕುರಿತಾಗಿ ಹಂಚಿಕೊಳ್ಳುತ್ತಿರುವ ಮಾಹಿತಿ ಸುಳ್ಳೆಂದು ತಿಳಿದುಬಂದಿದೆ. 2023ರ ಏಪ್ರಿಲ್‌ನಲ್ಲಿ ತೆಗೆದ ಚಿತ್ರ ಇದಾಗಿದ್ದು, ವಿರೋಧ ಪಕ್ಷಗಳ ಉದ್ದೇಶಿತ ಇಂಡಿಯಾ ಬಣದ ಪ್ರಮುಖ ನಾಯಕರಾಗಿ ನಿತೀಶ್ ಕಾಣಿಸಿಕೊಂಡಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಏಪ್ರಿಲ್ 12, 2023ರಂದು ಜೆಡಿಯು ನಾಯಕ ನತೀಶ್ ಕುಮಾರ್ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ ಹಳೆಯ ಫೋಟೊವನ್ನು ಇತ್ತಿಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ದುರ್ಗಾ ಪೂಜೆ ಮುಗಿಸಿ ಮನೆಗೆ ತೆರಳುತ್ತಿದ್ದ ಇಬ್ಬರು ಹಿಂದೂ ಹುಡುಗಿಯರನ್ನು ಹತ್ಯೆ ಮಾಡಲಾಗಿದೆ ಎಂದು ಸುಳ್ಳು ಪೋಸ್ಟ್‌ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights