FACT CHECK | RSS ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಮುಸ್ಲಿಮನಲ್ಲ ! ಮತ್ತ್ಯಾರು ?

ರಾಜಸ್ತಾನದ ಜೈಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನೊಬ್ಬ ಅಕ್ಟೋಬರ್ 17 ರಂದು ರಾಜಸ್ತಾನದ ಜೈಪುರದಲ್ಲಿ ಶರದ್ ಪೂರ್ಣಿಮೆಯ ಆಚರಣೆ ಪ್ರಯುಕ್ತ ಪ್ರಸಾದವಾಗಿ ಖೀರ್ ವಿತರಿಸುತ್ತಿದ್ದಾಗ ನಸೀಬ್ ಎಂಬ ಮುಸ್ಲಿಂ ವ್ಯಕ್ತಿ ದೇವಾಸ್ಥಾನಕ್ಕೆ ತನ್ನ ಗುಂಬಿನೊಂದಿಗೆ ಬಂದು ದಾಳಿ ನಡೆಸಿದ್ದಾರೆ” ಎಂದು ಪ್ರತಿಪಾದಿಸಿ ಸುದರ್ಶನ್ ನ್ಯೂಸ್‌ ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದೆ.

ಈ ದಾಳಿಯ ಉದ್ದೇಶ ಬಹಳ ಸ್ಪಷ್ಟ ಮುಸ್ಲಿಂ ಬಾಹುಲ್ಯವುಳ್ಳ ಪ್ರದೇಶದಲ್ಲಿ ಹಿಂದೂಗಳು ಯಾವುದೇ ಕಾರ್ಯಕ್ರಮವನ್ನು ನಡೆಸಬಾರದು,  ಎಂಬ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಹಲವು  ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್ ಸಹಾಯದಿಂದ ಗೂಗಲ್ ಸರ್ಚ್ ಮಾಡಿದಾಗ, 20 ಅಕ್ಟೋಬರ್‌ 2024ರಲ್ಲಿ ರಾಜಸ್ತಾನ ಮೂಲದ ಹಿಂದಿ ಸುದ್ದಿ ಸಂಸ್ಥೆ ಪತ್ರಿಕಾ  ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಇದರಲ್ಲಿ “ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಚಾಕು ದಾಳಿ ನಡೆಸಿದ ಆರೋಪಿ ನಸೀಬ್ ಮನೆ ಮೇಲೆ ಬುಲ್ಡೋಜರ್ ದಾಳಿ, ಜೆಡಿಎ ಕ್ರಮ ಕೈಗೊಂಡಿದೆ.” ಎಂದು ಹಿಂದಿಯಲ್ಲಿ ಶೀರ್ಷಿಕೆಯೊಂದಿಗೆ ಪ್ರಕಟಿಸಲಾಗಿದೆ.

ಈ ವರದಿಯಲ್ಲಿ ಆರೋಪಿಯ ಹೆಸರು ನಸೀಬ್‌ ಎಂದಿದ್ದು ಹಲವರು ಆರೋಪಿಯನ್ನು ಮುಸ್ಲಿಂ ಸಮುದಾಯಕ್ಕೆ ಸೇರದವನು ಎಂದುಕೊಂಡಿದ್ದಾರೆ. ಇದೇ ಅಂಶವನ್ನು 18 ಅಕ್ಟೋಬರ್‌ ನಲ್ಲಿ ಎನ್‌ಡಿಟಿವಿ ರಾಜಸ್ತಾನ ಪ್ರಕಟಿಸಿದ ವರದಿಯಲ್ಲಿ ಕೂಡ ಉಲ್ಲೇಖಿಸಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಸುದ್ದಿ ಸಂಸ್ಥೆ ಜೈಪುರ ಕಮಿಷನರೇಟ್‌ನ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಕುವಾರ್ ರಾಷ್ಟ್ರದೀಪ್ ಅವರನ್ನು ಸಂಪರ್ಕಿಸಿ ಆರೋಪಿಯ ಬಗ್ಗೆ ವಿಚಾರಿಸಿದಾಗ ಆತ ಹಿಂದೂ ಸಮುದಾಯಕ್ಕೆ ಸೇರಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಡಿಡಿ ರಾಜಸ್ತಾನಕ್ಕೆ ಮಾಹಿತಿ ನೀಡಿರುವ ಎಸಿಪಿ ಶಾಂತಿಯುತವಾಗಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ನಸೀಬ್‌ ಚೌಧರಿ ಎಂಬ ಆರೋಪಿ ದಾಳಿ ನಡೆಸಿದ್ದಾನೆ. ಈತನ ದಾಳಿಯಿಂದ ಸಾರ್ವಜನಿಕರು ತೊಂದರೆಗೆ ಒಳಪಟ್ಟರು, ನಾವು ಕಾನೂನಾತ್ಮಕವಾಗಿ ಎಲ್ಲಾ ರೀತಿಯ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ಮಾಹಿತಿಯನ್ನು ನೀಡಿದರು.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವಂತೆ ಆರ್‌ಎಸ್‌ಎಸ್‌ ಕಾರ್ಯಕರ್ತನ ಮೇಲೆ ಮುಸಲ್ಮಾನರಿಂದ ದಾಳಿ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ ದಾಳಿ ನಡೆಸಿದ ಆರೋಪಿಯ ಪೂರ್ಣ ಹೆಸರು ನಸೀಬ್‌ ಚೌಧರಿ. ಈತ ಹಿಂದೂ ಸಮುದಾಯಕ್ಕೆ ಸೇರಿದ ವ್ಯಕ್ತಿ ಇದರಲ್ಲಿ ಯಾವುದೇ ಕೋಮು ಆಯಾಮವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಬೆದರಿಕೆಗೆ ಹೆದರಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಕ್ಷಮೆ ಯಾಚಿಸಿದ್ರಾ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights