FACT CHECK | ಶಿವಸೇನೆಗೆ ಸೇರಿದ ರೂ 5ಕೋಟಿ ಹಣ ಜಪ್ತಿ ಮಾಡಲಾಗಿದೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

“ಏಕನಾಥ್ ಶಿಂಧೆ ಅವರ ಶಿವಸೇನೆಯ ಶಾಸಕರ ಸಹವರ್ತಿಯಿಂದ 5 ಕೋಟಿ ರೂಪಾಯಿಗಳನ್ನು  ವಶಪಡಿಸಿಕೊಳ್ಳಲಾಗಿದೆ”ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಟ್ವಿಟರ್‌ಫೇಸ್‌ಬುಕ್  ಮತ್ತು ಇನ್‌ಸ್ಟಾಗ್ರಾಮ್‌ಗಳಲ್ಲಿ ಕೆಲವು ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

 

2024ರ ನವೆಂಬರ್ 20ಕ್ಕೆ ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದ ಹಿನ್ನೆಲೆಯಲ್ಲಿ “ಮಹಾರಾಷ್ಟ್ರದ ಶಿವಸೇನೆ ಪಕ್ಷದ ಶಾಸಕರೊಬ್ಬರ ಸಹವರ್ತಿಯಿಂದ 5 ಕೋಟಿ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ನೋಟುಗಳ ಸಂಗ್ರಹಣೆಯ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 2024ರ ಅಕ್ಟೋಬರ್ 23ರ ಟೈಮ್ಸ್ ಆಫ್ ಇಂಡಿಯಾ ಎಂಬ ವರದಿಯೊಂದು ಲಭ್ಯವಾಗಿದೆ. ಖೇಡ್-ಶಿವಪುರ ಟೋಲ್ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಪುಣೆಯ ಗ್ರಾಮಾಂತರ ಪೊಲೀಸರು ಸೋಮವಾರ ಸಂಜೆ ಕಾರೊಂದನ್ನು ವಶಕ್ಕೆ ತೆಗೆದುಕೊಂಡು, ಕಾರಿನಲ್ಲಿರುವ ₹ 5 ಕೋಟಿ ಮೌಲ್ಯದ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

ಶಿವಸೇನೆಯ (ಯುಬಿಟಿ) ನಾಯಕ ಸಂಜಯ್ ರಾವುತ್ ಮತ್ತು ಎನ್‌ಸಿಪಿ ಶಾಸಕ ರೋಹಿತ್ ಪಾಟೀಲ್ ಅವರು ಶಿವಸೇನೆಯ ಏಕನಾಥ್ ಶಿಂಧೆ ಬಣಕ್ಕೆ ಸೇರಿದ ಸಂಗೋಳ ಶಾಸಕ ಶಾಹಾಜಿ ಪಾಟೀಲ್‌ರಿಗೆ ಚುನಾವಣಾ ನಿಧಿ ಸ್ಥಾಪನೆಯ ಉದ್ದೇಶಕ್ಕಾಗಿ ಹಣವನ್ನು ಕೊಂಡೊಯ್ದಿದ್ದಾರೆ ಎಂದು ವರದಿಯಾಗಿದೆ.

ಇಂತಹ ಆರೋಪಗಳನ್ನು ಕುರಿತು ಪಾಟೀಲ್‌ ಆರೋಪಿದ್ದಾರೆ. ಆದರೆ, ಈ ವಾಹನವು ನನ್ನ ಸಾವಿರಾರು “ಕಾರ್ಯಕರ್ತರಲ್ಲಿ” ಒಬ್ಬರಿಗೆ ಸೇರಿರಬಹುದು. ಕೆಲವು ವ್ಯವಹಾರಗಳನ್ನು ನನ್ನ ಕಾರ್ಯಕರ್ತರು ನಿರ್ವಹಿಸುತ್ತಾರೆ. ಆದರೆ  ಹಣವನ್ನು ಏಕೆ ಅಥವಾ ಎಲ್ಲಿಗೆ ಸಾಗಿಸಲಾಗುತ್ತಿದೆ ಎಂದು ನನಗೆ ತಿಳಿದಿಲ್ಲ ಎಂದು ಶಾಸಕ ಪಾಟೀಲ್‌ರು ಹೇಳಿದ್ದಾರೆ.

 ಹಳೆಯ ವಿಡಿಯೋ :

ಈ ವೈರಲ್‌ ವಿಡಿಯೋ ಕುರಿತು ಮತ್ತಷ್ಟು ತಿಳಿದುಕೊಳ್ಳಲು ಗೂಗಲ್ ಲೆನ್ಸ್‌ನಲ್ಲಿ ವೈರಲ್ ಚಿತ್ರಗಳನ್ನು ಹಾಕಿ ಹುಡುಕಾಟ ನಡೆಸಿದಾಗ, 2024ರ ಅಕ್ಟೋಬರ್ 9 ರಂದು @haryana.zone ಅವರ Instagram ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟರ್‌ ಲಭಿಸಿದೆ. ಖೇಡ್-ಶಿವಪುರ ಟೋಲ್‌ನಲ್ಲಿ ಕಾರಿನಲ್ಲಿದ್ದ ₹ 5 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಿಲಾಗಿತ್ತು ಎಂದು ಪೋಸ್ಟನ್ನು ಹಂಚಿಕೊಳ್ಳಲಾಗಿತ್ತು.

ಡಿಸೆಂಬರ್ 2023 ರ ಮತ್ತೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಸಹ ಅದೇ ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು.

2021ರ ಜೂನ್ 10ರಂದು YouTubeನ  @ghanshyamponderarussian8596  ಖಾತೆಯಲ್ಲಿ ಅದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ ಈ ವಿಡಿಯೋವನ್ನು 2021ರಿಂದಲೂ ಪದೇ ಪದೇ ಹಂಚಿಕೊಳ್ಳಲಾಗುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ವಿಧಾನಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ  ಪೋಲಿಸರು ಶಿವಸೇನೆ ಪಕ್ಷದ ₹ 5 ಕೋಟಿ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು 2021ರ ಹಳೆಯ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ವಿಮಾನದಲ್ಲಿ ಹಿಂದೂ ಪ್ರಯಾಣಿಕನ ಮೇಲೆ ಮುಸ್ಲಿಂ ಜಿಹಾದಿಗಳಿಂದ ಹಲ್ಲೆ ನಡೆದಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights