FACT CHECK | CAA-NRC ವಿರುದ್ದ ಹೋರಾಟದ ಹಳೆಯ ವಿಡಿಯೋವನ್ನು ಕೋಮು ನಿರೂಪಣೆಯೊಂದಿಗೆ ಹಂಚಿಕೆ
ಪೊಲೀಸರು ಲಾಠಿ ಚಾರ್ಜ್ ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊಂಡು ಇದು ಉತ್ತರ ಪ್ರದೇಶದ ಸಂಭಾಲ್ನಲ್ಲಿ ನಡೆದ ಘಟನೆ ಎಂದು ಪ್ರತಿಪಾದಿಸಿ, ಪೊಲೀಸರು ಮತ್ತು ಜನರ ನಡುವೆ ಘರ್ಷನೆ ನಡೆಯುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.
ಫೇಸ್ಬುಕ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡು, ‘‘ಉತ್ತರ ಪ್ರದೇಶ ಪೋಲೀಸರು ಇಂದು ತುಂಬಾ ಭಯಾನಕವಾಗಿ ಬ್ಯಾಟಿಂಗ್ ಮಾಡಿದ್ದಾರೆ ಮತ್ತು ಮೂವರನ್ನು ಶಾಂತಿದೂತ ಮುಸ್ಲಿಂಗಳನ್ನು ಸ್ವರ್ಗಕ್ಕೆ ಕಳುಹಿಸಿ ಕೊಟ್ಟಿದ್ದಾರೆ..!!’’ ಎಂದು ಬರೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ಸಂಭಾಲ್ನಲ್ಲಿರುವ ಜಾಮಾ ಮಸೀದಿಯ ಸಮೀಕ್ಷೆಗೆ ಸಂಬಂಧಿಸಿದಂತೆ ನಡೆದ ಹಿಂಸಾಚಾರದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಅನೇಕ ವಿಡಿಯೋ ವೈರಲ್ ಆಗುತ್ತಿದೆ. ಹಾಗಿದ್ದರೆ ಈ ಪೋಸ್ಟ್ನಲ್ಲಿ ಆಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಈ ಮೂಲಕ ಈ ವಿಡಿಯೋ ಹಳೆಯದು ಎಂಬುದು ಸ್ಪಷ್ಟವಾಗಿದೆ. ಬಳಿಕ ಈ ವಿಡಿಯೋ ನಿಖರವಾಗಿ ಎಲ್ಲಿಂದ ಬಂದಿದೆ ಎಂದು ತಿಳಿಯಲು . 2019-2020ರಲ್ಲಿ ಅಪ್ಲೋಡ್ ಮಾಡಿದ ಈ ವಿಡಿಯೋದೊಂದಿಗೆ CAA ಮತ್ತು NRC ನಂತಹ ಕೀವರ್ಡ್ಗಳನ್ನು ಬಳಸಿ 2019-20ರಲ್ಲಿ ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ಎಲ್ಲಿ ನಡೆದವು ಎಂಬುದನ್ನು ನೋಡಲು ನಾವು ಗೂಗಲ್ನಲ್ಲಿ ಕೀವರ್ಡ್ ಮೂಲಕ ಸರ್ಚ್ ಮಾಡಿದಾಗ ಮಾಹಿತಿ ಲಭ್ಯವಾಗಿದೆ.
ಆಗ ನಾವು ಹಲವಾರು ಸುದ್ದಿ ಪೋರ್ಟಲ್ಗಳ ಯೂಟ್ಯೂಬ್ ಚಾನಲ್ಗಳಲ್ಲಿ ಇದಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಕಂಡುಕೊಂಡಿದ್ದೇವೆ. ಅದರಲ್ಲಿ ವೈರಲ್ ವಿಡಿಯೋದ ಗ್ಲಿಂಪ್ಗಳನ್ನು ಕಾಣಬಹುದು. ಇಲ್ಲಿ ವಿಡಿಯೋ ಗೋರಖ್ಪುರದ್ದು ಎಂದು ಹೇಳಲಾಗಿದೆ. ಈ ಕುರಿತು ಟಿವಿ9 ಕನ್ನಡ ಕೂಡ ಡಿಸೆಂಬರ್ 20, 2019 ರಂದು ಯೂಟ್ಯೂಬ್ನಲ್ಲಿ ವಿಡಿಯೋ ಸುದ್ದಿ ಮಾಡಿದ್ದು, ‘‘ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಕಲ್ಲು ತೂರಾಟ’’ ಎಂಬ ಹೆಡ್ಲೈನ್ ನೀಡಿದೆ.
ಒಟ್ಟಾರೆಯಾಗಿ ಹೇಳುವುದಾದರೆ, 2020 ರಲ್ಲಿ ಗೋರಖ್ಪುರದಲ್ಲಿ ಸಿಎಎ, ಎನ್ಆರ್ಸಿ ವಿರುದ್ಧದ ಪ್ರತಿಭಟನೆಯ ವಿಡಿಯೋವನ್ನು, ಉತ್ತರ ಪ್ರದೇಶದ ಸಂಭಾಲ್ನಲ್ಲಿ ಜಾಮಾ ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ನಡೆದ ಹಿಂಸಾಚಾರದ ವಿಡಿಯೋ ಎಂದು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೂ ಸಂಭಾಲ್ ಘಟನೆಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಬಿಹಾರದಲ್ಲಿ ಮುಸ್ಲಿಮರು ವಂದೇ ಭಾರತ್ ರೈಲಿಗೆ ಕಲ್ಲು ತೂರಿದ್ದು ನಿಜವೇ?

