FACT CHECK | ಹಿಂದೂ ಮಹಿಳಾ ಕಾನ್‌ಸ್ಟೆಬಲ್‌ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ! ವಾಸ್ತವವೇನು?

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಇತ್ತೀಚೆಗೆ ಮಹಿಳಾ ಕಾನ್‌ಸ್ಟೆಬಲ್ ಒಬ್ಬರ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆಯನ್ನು ‘ಹಿಂದೂ ಮಹಿಳಾ ಕಾನ್ಸ್‌ಟೆಬಲ್‌ ಮೇಲೆ ಮುಸ್ಲಿಂ ಯುವಕರಿಂದ ಥಳಿತ’ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ನವೆಂಬರ್ 30, 2024ರಂದು ಮೊರಾದಾಬಾದ್ ಜಿಲ್ಲೆಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಮಹಿಳಾ ಪೇದೆಯೊಬ್ಬರು ಯಾವುದೋ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗುತ್ತಿದ್ದಾಗ ಯುವಕನೊಬ್ಬ ಏಕಾಏಕಿ ಬಂದು ಬೈಕ್ ತಡೆದು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ, ಇತರ ಕೆಲವು ಯುವಕರು ಕೂಡ ಅಲ್ಲಿಗೆ ಬಂದು ಮಹಿಳಾ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಲು ದಾಳಿಕೋರನಿಗೆ ಸಹಾಯ ಮಾಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೇಗವಾಗಿ ವೈರಲ್ ಆಗಿದೆ. ಕೆಲವು ಎಕ್ಸ್‌ ಹ್ಯಾಂಡಲ್‌ಗಳಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಆರೋಪಿಗಳು ಮುಸ್ಲಿಂ ಧರ್ಮಕ್ಕೆ ಸೇರಿದವರು. ಆದರೆ ಮಹಿಳಾ ಕಾನ್ಸ್‌ಟೆಬಲ್ ಹಿಂದೂ ಧರ್ಮಕ್ಕೆ ಸೇರಿದವರು ಎಂದು ಹೇಳಲಾಗಿದೆ. ಅಲ್ಲದೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೊರದಾಬಾದ್‌ ಪೊಲೀಸರಲ್ಲೂ ಆಗ್ರಹಿಸಲಾಗಿದೆ.

ಇದೇ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು , ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಸಜಾಗ್‌ ತಂಡವು ಮೋರಾದಾಬಾದ್‌ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಎಸ್‌ಎಚ್ಓ ಮನೀಷ್ ಸಕ್ಸೇನ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಹಲ್ಲೆಗೊಳಗಾದ ಮಹಿಳಾ ಕಾನ್ಸ್‌ಟೆಬಲ್ ಹಿಂದೂ ಅಲ್ಲ, ಮುಸ್ಲಿಂ ಧರ್ಮಕ್ಕೆ ಸೇರಿದವರು ಎಂದು ಸ್ಪಷ್ಟಪಡಿಸಿದ್ದಾರೆ.

ಘಟನಾ ವಿವರ :

ಎಸ್‌ಎಚ್ಓ ಮನೀಷ್ ಸಕ್ಸೇನ ಅವರ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ಎಫ್‌ಐಆರ್ ಪ್ರತಿಯನ್ನು ಕೂಡ ಹಂಚಿಕೊಂಡಿದ್ದಾರೆ. 2024ರ ನವೆಂಬರ್ 30ರಂದು ರಾತ್ರಿ 9:45ಕ್ಕೆ ಈ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದಲ್ಲಿ 4 ಹೆಸರನ್ನು ಉಲ್ಲೇಖಿಸಲಾಗಿದೆ. ಅವರೇ ಇರ್ಫಾನ್, ಸಲೀಮ್, ನೈಮ್, ಮತ್ತು ನೈಮ್ ಅವರ ಸಹೋದರಿ. ಅಲ್ಲದೆ, 5-6 ಅಪರಿಚಿತ ವ್ಯಕ್ತಿಗಳ ಮೇಲೂ ದೂರು ದಾಖಲಾಗಿದೆ.

FIR

ಎಫ್‌ಐಆರ್ ಪ್ರಕಾರ, ಮಹಿಳಾ ಕಾನ್ಸ್‌ಟೆಬಲ್ ಅಮ್ರೀನ್ ಮತ್ತು ಅವರ ತಂದೆ ಇಕ್ಬಾಲ್ ಅವರು ಈ ಪ್ರಕರಣದ ಸಂತ್ರಸ್ತರು. ಅಮ್ರೀನ್ ಅವರು ಮೋರಾದಾಬಾದ್ ಪೊಲೀಸ್‌ ಆಗಿ ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಮೊರಾದಾಬಾದ್ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮರಿಂದ ಹಿಂದೂ ಮಹಿಳಾ ಕಾನ್ಸ್‌ಟೆಬಲ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಅಮೆರಿಕ ಮತ್ತು ಕೆನಡಾ ದೇಶಕ್ಕೆ ಪ್ರಯಾಣಿಸಲು ಅಮಿತ್ ಶಾಗೆ ನಿರ್ಬಂಧ ವಿಧಿಸಲಾಗಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights