FACT CHECK | ವಕ್ಫ್‌ ಬೋರ್ಡ್‌ ಪರವಾಗಿ ಪ್ರತಿಭಟನೆ ಮಾಡಿದ ಮುಸ್ಲಿಮರಿಗೆ ಪೊಲೀಸರು ಥಳಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ವಕ್ಫ್ ಬೋರ್ಡ್‌ ಪರವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಬಿಹಾರದಲ್ಲಿ ಮುಸ್ಲಿಂ ವ್ಯಕ್ತಿಗಳನ್ನು ಥಳಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.ಇದರಲ್ಲಿ ಪೊಲೀಸರ ಗುಂಪೊಂದು ಸಾರ್ವಜನಿಕರನ್ನು ದೊಣ್ಣೆಗಳಿಂದ ಥಳಿಸುತ್ತಿರುವುದನ್ನು ಕಾಣಬಹುದು.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ವಕ್ಫ್ ಬೋರ್ಡ್ ಗೆ ಸಮರ್ಥನೆಯಾಗಿ, ಪ್ರತಿಭಟನೆಯ ಹೆಸರಿನಲ್ಲಿ ಅರಾಜಕತೆ ಮಾಡುತ್ತಿರುವ ಸಮುದಾಯಕ್ಕೆ ತಿಂದಷ್ಟು ಬಡಿಸುತ್ತಿರುವ ಪೊಲೀಸರು. ಗಮನಿಸಿ: ಇದು ನಡೆದಿದ್ದು ಬಿಹಾರದಲ್ಲಿ…’’. ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ ಟೂಲ್ ಬಳಸಿ ಸರ್ಚ್‌ ಮಾಡಿದಾಗ, ಆಗಸ್ಟ್ 28, 2015 ರಂದು ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ಅದೇ ವಿಡಿಯೋ ಲಭ್ಯಾಗಿದೆ.  ವರದಿಯ ಪ್ರಕಾರ ಬಿಹಾರದ ಪಾಟ್ನಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ತಿಳಸಲಾಗಿದೆ. ಕಳೆದ ಎರಡು ವರ್ಷಗಳಿಂದ ಬಾಕಿ ಹಣ ಪಾವತಿಯಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು ಎಂದು ವರದಿಯಲ್ಲಿದೆ.

ಮಿಡ್‌ಡೇ ಇಂಡಿಯಾ ಯೂಟ್ಯೂಬ್ ಚಾನೆಲ್​ನಲ್ಲಿ ಸೆಪ್ಟೆಂಬರ್ 22, 2018 ರಂದು ಇದೇ ವೀಡಿಯೊ ಶೇರ್ ಮಾಡಲಾಗಿದ್ದು, ಎರಡು ವರ್ಷಗಳಿಂದ ಬಾಕಿ ಪಾವತಿಸದ ರಾಜ್ಯ ಸರ್ಕಾರದ ವಿರುದ್ಧ ಬಿಹಾರ ರಾಜ್ಯ ಮದ್ರಸಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಶಿಕ್ಷಕರು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬಿಹಾರದಲ್ಲಿ 2015 ರಲ್ಲಿ ಮದ್ರಸಾ ಶಿಕ್ಷಕರು ಪಾವತಿಸದ ಸಂಬಳಕ್ಕಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವುದನ್ನು,  ವಕ್ಫ್ (ತಿದ್ದುಪಡಿ) ಮಸೂದೆಯ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಮರು ಪ್ರತಿಭಟನೆ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights