FACT CHECK | ಮೋದಿ ಮತ್ತು ಅಮಿತ್ ಶಾರನ್ನು ವ್ಯಕ್ತಿಯೊಬ್ಬ ನಿಂದಿಸುವ 2019ರ ಹಳೆಯ ವಿಡಿಯೋವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ನಿಂದಿಸಿದ್ದಾನೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದೆ. ಇತ್ತೀಚೆಗೆ ಪುರಿ ಪೀಠದ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರು ಇಷ್ಟೊತ್ತಿಗೆ ಜೈಲಿನಲ್ಲಿ ಇರಬೇಕಾಗಿತ್ತು. ಆದರೆ ದೇಶದ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗಿರುವುದರಿಂದ ಅವರು ಹೊರಗಿದ್ದಾರೆ’ ಎಂಬ ಹೇಳಿಕೆ ನೀಡಿ ಸಂಚಲನ ಸೃಷ್ಠಿಸಿದ್ದರು.

Fact Check: ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ನಿಂದಿಸುವ ನಾಲ್ಕು ವರ್ಷ ಹಳೆಯ ವೀಡಿಯೋ ವೈರಲ್

ಈ ವಿಡಿಯೋವನ್ನು ಇತ್ತೀಚಿನ ಕ್ಯಾಪ್ಷನ್ನೊಂದಿಗೆ ಹಂಚಿಕೊಳ್ಳಲಾಗಿದ್ದು, “ಈ ವ್ಯಕ್ತಿ ಮಹಾರಾಷ್ಟ್ರದ ಅಕೋಲಾ ಮೂಲದವನು, ಭಾರತದಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತಿರುವ ವ್ಯಕ್ತಿಯನ್ನು ನಿಂದಿಸಿದರೆ ಏನಾಗುತ್ತದೆ ಎಂಬುದನ್ನು ತೋರಿಸಿ. ಇದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಈ ವೀಡಿಯೋ ಪ್ರಧಾನಿ ಮತ್ತು ಗೃಹ ಸಚಿವರಿಗೆ ತಲುಪುವಷ್ಟು ವೈರಲ್ ಮಾಡಿ” ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ, ಅಕೋಲಾ ಮೂಲದವನೆಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ನಿಂದಿಸುತ್ತಿರುವುದು ಕಂಡುಬರುತ್ತದೆ. ಇದಲ್ಲದೆ, ವ್ಯಕ್ತಿಯು ಅನೇಕ ಪ್ರಚೋದನಕಾರಿ ವಿಷಯಗಳನ್ನು ಹೇಳುವುದನ್ನು ಕೇಳಬಹುದು.
Fact Check: ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ನಿಂದಿಸುವ ನಾಲ್ಕು ವರ್ಷ ಹಳೆಯ ವೀಡಿಯೋ ವೈರಲ್

ಈ ವಿಡಿಯೋ ಫೇಸ್ ಬುಕ್ ನಲ್ಲಿ ವೈರಲ್ ಆಗಿದೆ. ಹಾಗಿದ್ದರೆ ಈ ವಿಡಿಯೋದಲ್ಲಿ ಮಾಡಿದ ಪ್ರತಿಪಾದನೆ ನಿಜವೇ ? ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ನಿಂಧಿಸಿರುವುದು ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮುಂದಾದದಾಗ, 15 ಡಿಸೆಂಬರ್ 2024 ರಂದು ಅಕೋಲಾ ಪೊಲೀಸರು ನೀಡಿದ ಪ್ರತಿಕ್ರಿಯೆಯನ್ನು ನಾವು ಸ್ವೀಕರಿಸಿದ್ದೇವೆ.

ಅಕೋಲಾ ಪೊಲೀಸರ ಪ್ಪೋಸ್ಟ್
ಅಕೋಲಾ ಪೊಲೀಸರ ಪ್ಪೋಸ್ಟ್
“ಇದು ಹಳೆಯ ವೀಡಿಯೋ ಮತ್ತು ಆ ವ್ಯಕ್ತಿ ಮತ್ತು ಇತರ 11 ಆರೋಪಿಗಳ ವಿರುದ್ಧ ಜನವರಿ 29, 2020 ರಂದು ಅಕೋಲಾದ ಪಾತೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾದ ನಂತರ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ.

ವಾಸ್ತವವಾಗಿ ಈಗ ವೈರಲ್ ಆಗುತ್ತಿರುವ ವಿಡಿಯೋ 2020ರದ್ದು ಎಂದು ನ್ಯೂಸ್‌ ಚೆಕ್ಕರ್ ವರದಿ ಮಾಡಿದೆ. ಏಪ್ರಿಲ್ 2020 ರಲ್ಲಿ ಮತ್ತೊಂದು ಎಕ್ಸ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಗೆ  ಪ್ರತಿಕ್ರಿಯಿಸಿದ ಅಕೋಲಾ ಪೊಲೀಸರು, ಈ ಬಗ್ಗೆ ಪಾತೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬರೆದಿದ್ದಾರೆ.

Fact Check: ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ನಿಂದಿಸುವ ನಾಲ್ಕು ವರ್ಷ ಹಳೆಯ ವೀಡಿಯೋ ವೈರಲ್
ಅಕೋಲಾ ಪೊಲೀಸರ ಇನ್ನೊಂದು ಪ್ರತಿಕ್ರಿಯೆ

ಇದಲ್ಲದೆ, ವಿಡಿಯೋದಲ್ಲಿ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸುವ ಹಲವಾರು ಪೋಸ್ಟರ್ ಗಳು ಲಭ್ಯವಾಗಿದೆ. ಅದರಿಂದ ವೈರಲ್ ವಿಡಿಯೋ 2019-2020 ರ ಅವಧಿಯದ್ದಾಗಿದ್ದು, ದೇಶಾದ್ಯಂತ ಸಿಎಎ ವಿರೋಧಿ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದ್ದು ಎನ್ನಬಹುದು.

Fact Check: ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ನಿಂದಿಸುವ ನಾಲ್ಕು ವರ್ಷ ಹಳೆಯ ವೀಡಿಯೋ ವೈರಲ್

ನ್ಯೂಸ್‌ ಚೆಕ್ಕರ್ ಫ್ಯಾಕ್ಟ್‌ಚೆಕ್ ತಂಡ ಪಾತೂರ್ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದ್ದು, “ವೈರಲ್ ವೀಡಿಯೋದಲ್ಲಿ ಕಂಡುಬರುವ ವ್ಯಕ್ತಿ ಶೇಖ್ ಫೈಮ್ ಮತ್ತು ಅಕೋಲಾದ ಕಾಶಿದ್ಪುರ ಪ್ರದೇಶದ ನಿವಾಸಿ. 2020ರಲ್ಲಿಯೇ ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿತ್ತು” ಎಂದು ಅವರು ಮಾಹಿತಿ ನೀಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 2019ರಲ್ಲಿ ನಡೆದ ಸಿಎಎ ವಿರೋಧಿ ಹೋರಾಟದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾರನ್ನು ನಿಂದಿಸಿದ ಹಳೆಯ ಘಟನೆಯ್ನು ಇತ್ತಿಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ನನ್ನ ಬಳಿ ಕೋಟಿ ಕೋಟಿ ಹಣವಿದೆ, ನಾನು ಲಂಡನ್‌ಗೆ ಹೋಗಿ ಸೆಟಲ್ ಆಗ್ತೀನಿ ಅಂದ್ರಾ ರಾಹುಲ್ ಗಾಂಧಿ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights