FACT CHECK | ಕ್ರಿಸ್ಮಸ್ ಆಚರಣೆಯನ್ನು ಸಂಸತ್‌ ಭವನದಲ್ಲಿ ನಡೆಸಲಾಗಿದೆ ಎಂಬುದು ಸುಳ್ಳು

ಏಸು ಕ್ರಿಸ್ತರ ಜನ್ಮ ಸ್ಮರಣೆಗಾಗಿ ಆಚರಿಸುವ ಕ್ರಿಸ್ಮಸ್‌ ಹಬ್ಬವನ್ನು ಕ್ರೈಸ್ತ ಬಾಂಧವರು ದೇಶದಾದ್ಯಂತ ಭಕ್ತಿ, ಶ್ರದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದ್ದಾರೆ. ಕ್ರಿಸ್ಮಸ್ ಹಬ್ಬದ ಸಲುವಾಗಿ ಪ್ರಧಾನಿ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಕ್ರಿಸ್ಮಸ್ ಆಚರಣೆ ಮಾಡುತ್ತಿರುವ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ದೃಶ್ಯವೊಂದರಲ್ಲಿ ಬಾಲ ಏಸು ಕ್ರಿಸ್ತನ ವಿಗ್ರಹದ ಮುಂದೆ ಮೇಣದ ಬತ್ತಿಯನ್ನು ಬೆಳಗುತ್ತಿರುವ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಇದರಲ್ಲಿ ಸಂಸತ್ ಆವರಣದಲ್ಲಿ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಿದ್ದಾರೆ ಎಂದು ಬರೆದುಕೊಂಡು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಂಗ್ಯ ಪ್ರತಿಕ್ರಿಯೆಗಳು ಬರಲಾರಂಭಿಸಿವೆ.

ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಇದು ಸುಳ್ಳಾಗಿದೆ ಸಂಸತ್ತಿನಲ್ಲಿ ಈ ರೀತಿಯ ಆಚರಣೆಯನ್ನು ನಡೆಸಲಾಗಿಲ್ಲ ಎಂದು ಪ್ರತಿಪಾದಿಸುತ್ತಿದ್ದಾರೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಫೋಟೋವಿನ ನಿಜಾಂಶ ಏನು ಎಂಬುದನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 19 ಡಿಸೆಂಬರ್ 2024 ರಂದು ಪ್ರಧಾನಿ ನರೇಂದ್ರ ಮೋದಿಯವರ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ವೊಂದು ಲಭ್ಯವಾಗಿದೆ.

ಇದರಲ್ಲಿ ಅವರು “ಕೇಂದ್ರ ಸಚಿವ ಶ್ರೀ ಜಾರ್ಜ್ ಅವರ ನಿವಾಸದಲ್ಲಿ ಕ್ರಿಸ್ಮಸ್ ಆಚರಣೆಯಲ್ಲಿ ಪಾಲ್ಗೊಂಡಿದ್ದೇನೆ. ಕುರಿಯನ್ ಜಿ ಕ್ರಿಶ್ಚಿಯನ್ ಸಮುದಾಯದ ಪ್ರಖ್ಯಾತ ಸದಸ್ಯರೊಂದಿಗೆ ಸಂವಾದ ನಡೆಸಲಾಯಿತು” ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಈ ಬಗ್ಗೆ ಮ್ತಷ್ಟು ಸರ್ಚ್ ಮಾಡಿದಾಗ, ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ YouTube ಚಾನಲ್‌ನಲ್ಲಿ ಕೂಡ ಈ ವೈರಲ್ ವಿಡಿಯೋದ ತುಣುಕು ಕಂಡುಬಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ನಡೆದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ಭಾಗಿಯಾಗಿದ್ದಾರೆ ಎಂಬುದು ಸುಳ್ಳು. ವೈರಲ್ ಫೋಟೋ ಕುರಿತು ಪ್ರಧಾನಿ ಮೋದಿ ಅವರೇ, ಟ್ವೀಟ್ ಮಾಡಿದ್ದು ಕೇಂದ್ರ ಸಚಿವ ಜಾರ್ಜ್ ಕುರಿಯನ್ ಅವರ ಮನೆಯಲ್ಲಿ ನಡೆದ ಕ್ರಿಸ್ಮಸ್ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ನೀಡಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮನುಸ್ಮೃತಿಯನ್ನು ಡಾ. ಬಿ. ಆರ್‌. ಅಂಬೇಡ್ಕರ್‌ ಹೊಗಳಿದ್ದರೆ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights