FACT CHECK | ಕ್ರೈಸ್ತ ಪಾದ್ರಿಯೊಬ್ಬರು ಪ್ರಧಾನಿ ಮೋದಿ ಹತ್ಯೆಗೆ ಪ್ರಾರ್ಥನೆ ಸಲ್ಲಿಸಿದ್ದು ನಿಜವೇ?

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲು ಕ್ರೈಸ್ತ ಪಾದ್ರಿಯೊಬ್ಬರು ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

@Deepakkkumardk ಎಂಬ ಎಕ್ಸ್‌ ಬಳಕೆದಾರರು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು, ‘ತಮಿಳುನಾಡಿನ ಚರ್ಚ್‌ನಲ್ಲಿ ಪಾದ್ರಿಯೊಬ್ಬರು, ಜೀಸಸ್, ದಯವಿಟ್ಟು ನರೇಂದ್ರ ಮೋದಿ, ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಮತ್ತು ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲು ಎಂದು ಹೇಳಿದರು. ಜೀಸಸ್, ಅಯೋಧ್ಯೆ ರಾಮಮಂದಿರವನ್ನು ನಾಶಮಾಡಿ ಚರ್ಚ್ ನಿರ್ಮಿಸಲು ನಮಗೆ ಶಕ್ತಿಯನ್ನು ನೀಡು,” ಎಂದು ತಮಿಳುನಾಡಿನ ಚರ್ಚ್‌ನ ಪಾದ್ರಿಯೊಬ್ಬರು ಹೇಳಿದ್ದಾರೆ.

“ಇದು ಪ್ರಧಾನಿ, ಗೃಹ ಸಚಿವರು, ಮುಖ್ಯಮಂತ್ರಿಗೆ ಪ್ರಾಣ ಬೆದರಿಕೆ ಹಾಗೂ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಯುಪಿ ಪೊಲೀಸರು ಮತ್ತು ಎನ್‌ಐಎ ತಕ್ಷಣ ಕ್ರಮ ಕೈಗೊಳ್ಳುವುದೇ?” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದೇ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದು, ಈ ವಿಡಿಯೋವನ್ನು ತಮಿಳುನಾಡಿನ ಚರ್ಚ್‌ನದ್ದು ಎಂದು ಹೇಳಲಾಗಿದೆ. ಹಾಗಿದ್ದರೆ ಪಾದ್ರಿಯೊಬ್ಬರು ಈ ರೀತಿ ಪ್ರಾರ್ಥನೆ ಸಲ್ಲಿಸಿರುವುದು ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ “ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲು ಪಾದ್ರಿ ಯೇಸುವಿಗೆ ಪ್ರಾರ್ಥಿಸಿದ್ದಾರೆ,” ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿರುವ ಪೋಸ್ಟ್‌ಅನ್ನು ಪರಿಶೀಲಿಸಲು ಕೀವರ್ಡ್ ಮೂಲಕ ಸರ್ಚ್ ಮಾಡಿದಾಗ, ತಮಿಳುನಾಡು ಸರ್ಕಾರದ ಫ್ಯಾಕ್ಟ್‌ಚೆಕ್‌ನ ಎಕ್ಸ್ ಪೋಸ್ಟ್‌ವೊಂದು ಲಭ್ಯವಾಗಿದೆ.

ತಮಿಳುನಾಡಿನ ಚರ್ಚ್‌ನಲ್ಲಿ ಪಾದ್ರಿಯೊಬ್ಬರ ವಿಡಿಯೋಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲು ಪಾದ್ರಿ ಯೇಸುವಿಗೆ ಪ್ರಾರ್ಥಿಸಿದ್ದಾರೆ ಎಂದು ತಿರುಚಲಾಗಿದೆ. ವಾಸ್ತವವಾಗಿ ಪಾದ್ರಿ ಆ ರೀತಿ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Image

ತಮಿಳುನಾಡು ಸರ್ಕಾರದ ಫ್ಯಾಕ್ಟ್ ಚೆಕ್ ಖಾತೆಯಲ್ಲಿಯೂ ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಕ್ಸ್ ಪೋಸ್ಟ್ ಲಭ್ಯವಾಗಿದೆ. ಇದರಲ್ಲಿಯೂ ತಮಿಳು ಪಾದ್ರಿಯ ಪ್ರಾರ್ಥನೆಯನ್ನು ತಿರುಚಲಾಗಿದೆ ಎಂದು ಹೇಳಲಾಗಿದೆ. ಪ್ರಮುಖ ರಾಜಕಾರಣಿಗಳನ್ನು ಕೊಲ್ಲಿ ಎಂದು ಹೇಳಿಲ್ಲ. ಬದಲಿಗೆ ಆಶೀರ್ವದಿಸಿ ಎಂದು ಪಾದ್ರಿ ಜೀಸಸ್‌ನಲ್ಲಿ ಬೇಡಿಕೊಳ್ಳುತ್ತಿರುವುದನ್ನೇ ತಿರುಚಿ ಹರಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

Image

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲು ಯೇಸುವಿನ ಬಳಿಕ ಪಾದ್ರಿ ಪ್ರಾರ್ಥಿಸಿದ್ದಾರೆ ಎಂದು ಹೇಳುವ ವಿಡಿಯೋವನ್ನು ತಪ್ಪಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಪರಿಶೀಲನೆಯಿಂದ ತಿಳಿದು ಬಂದಿದೆ. ಪಾದ್ರಿಯು ಪ್ರಮುಖ ರಾಜಕಾರಣಿಗಳನ್ನು ಕೊಲ್ಲಿ ಎಂದು ಪ್ರಾರ್ಥಿಸಿಲ್ಲ; ಬದಲಿಗೆ ಆಶೀರ್ವದಿಸಿ ಎಂದು ಯೇಸುವಿನಲ್ಲಿ ಬೇಡಿಕೊಂಡಿದ್ದರು ಎಂದು ದೃಢಪಟ್ಟಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲು ತಮಿಳುನಾಡಿನಲ್ಲಿ ಕ್ರೈಸ್ತ ಪಾದ್ರಿಯೊಬ್ಬರು  ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಎಡಿಟ್‌ ಮಾಡಿದ ವಿಡಿಯೊವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | HMPV ಸೋಂಕಿನಿಂದ ಚೀನಾದಲ್ಲಿ ಜನ ಸಾಯುತ್ತಿದ್ದಾರೆ ಎಂದು 2022ರ ಹಳೆಯ ವಿಡಿಯೋ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights