FACT CHECK | ಕೆನಡಾ ಸಂಸತ್‌ನಲ್ಲಿ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿರುವ ಹಳೆಯ ವಿಡಿಯೋವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೆ

ಕೆನಡಾದಲ್ಲಿ ಹೊಸ ಪ್ರಧಾನಿ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿದೆ, ಕೆನಡಾ ಪ್ರಧಾನಿ ಜಸ್ಟಿನ್‌ ಟ್ರೂಡೊ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಹೊಸ ಪ್ರಧಾನಿ ಆಯ್ಕೆ ನಡೆಯಬೇಕಿದ್ದು, ಕರ್ನಾಟಕ ಮೂಲದ ಲಿಬರಲ್‌ ಲಿಬರಲ್‌ ಪಕ್ಷದ ಸಂಸದ ಚಂದ್ರ ಆರ್ಯ ಕೂಡ ಸ್ಪರ್ಧೆಯಲ್ಲಿದ್ದಾರೆ.

ಇದೇ ಸಂದರ್ಭದಲ್ಲಿ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಚಂದ್ರ ಆರ್ಯ ನಾಮಪತ್ರ ಸಲ್ಲಿಸಿದ್ದು, ಸಲ್ಲಿಕೆ ನಂತರ ಕೆನಡಾ ಸಂಸತ್‌ನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.


“ಕೆನಡಾದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇರುವ ಶ್ರೀ ಚಂದ್ರ ಆರ್ಯ ತಮ್ಮ ನಾಮಪತ್ರ ಸಲ್ಲಿಕೆಗೂ ಮುನ್ನ ಕನ್ನಡದಲ್ಲಿ ಮಾತನಾಡಿದಾಗ,” ಎಂದು ಹೇಳಿ ಚಕ್ರವರ್ತಿ ಸೂಲಿಬೆಲೆ (@astitvam) ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದು, ಅವರ ವಿಡಿಯೋವನ್ನೂ ಹಾಕಿದ್ದಾರೆ.

“ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ : ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ,” ಎಂದು @PrasthuthaNews ಎಂಬ ಖಾತೆಯಲ್ಲೂ ಬರೆಯಲಾಗಿದೆ. ಇದೇ ರೀತಿಯ ಪೋಸ್ಟ್‌ಗಳನ್ನು ಪಬ್ಲಿಕ್‌ ಟಿವಿ ಸೇರಿದಂತೆ ಇತರೆ ಹಲವು ಮಾಧ್ಯಮ ಸಂಸ್ಥೆಗಳೂ ಹಂಚಿಕೊಂಡಿವೆ. ಅವನ್ನು ಇಲ್ಲಿ, ಇಲ್ಲಿ, ಇಲ್ಲಿ ಕಾಣಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಕೆನಡಾ ಸಂಸತ್‌ನಲ್ಲಿ ಕರ್ನಾಟಕ ಮೂಲದ ಲಿಬರಲ್‌ ಲಿಬರಲ್‌ ಪಕ್ಷದ ಸಂಸದ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ ಎಂದು ಪ್ರತಿಪದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, ಅವರು ಕನ್ನಡದಲ್ಲಿ ಭಾಷಣ ಮಾಡಿದ ವಿಡಿಯೋ ಸಿಕ್ಕಿತು.

ಆದರೆ, ಇದು ಈಗಿನ ವಿಡಿಯೋ ಅಲ್ಲ, ಹಳೆಯ ವಿಡಿಯೋ ಎಂದು ತಿಳಿದು ಬಂದಿದೆ. ಚಂದ್ರ ಆರ್ಯ ಅವರೇ ತಮ್ಮ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ.

2022ರ ಮೇ 20ರಂದು ಈ ವಿಡಿಯೋವನ್ನು ಪೋಸ್ಟ್‌ ಮಾಡಲಾಗಿದೆ. ಪೋಸ್ಟ್‌ನ ಜೊತೆಗೆ, “ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ (ಮೊದಲ ಭಾಷೆ) ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರವಾದ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 5 ಕೋಟಿ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಜಗತ್ತಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು,” ಎಂದು ಬರೆದುಕೊಂಡಿದ್ದರು.

Radio Canada

ಇದಲ್ಲದೆ, ವಿವಿಧ ಮಾಧ್ಯಮಗಳಲ್ಲಿ ಬಂದಿರುವ ವರದಿ ಪ್ರಕಾರ ಚಂದ್ರ ಆರ್ಯ ಅವರು ಪ್ರಧಾನಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ರೇಡಿಯೋ ಕೆನಡಾದಲ್ಲಿರುವ ಅಪ್‌ಡೇಟ್‌ ಪ್ರಕಾರ, ಆಡಳಿತರೂಢ ಲಿಬರಲ್‌ ಪಕ್ಷ ಇದೇ ಮಾರ್ಚ್‌ 9ರಂದು ತಮ್ಮ ನಾಯಕನನ್ನು ಹಾಗೂ ಮುಂದಿನ ಪ್ರಧಾನಿಯನ್ನು ಆಯ್ಕೆ ಮಾಡಲಿದೆ. ಭಾರತದಲ್ಲಿ ಇರುವಂಥಹದ್ದೇ ಸಂಸತ್‌ ವ್ಯವಸ್ಥೆ ಕೆನಡಾದಲ್ಲಿದ್ದು, ನಾಮಪತ್ರ ಸಲ್ಲಿಸುವ ಪ್ರಸಂಗಗಳೆಲ್ಲ ಇಲ್ಲಎಂದು ಸಜಗ್ ತಂಡ ವರದಿ ಮಾಡಿದೆ.

ಕರ್ನಾಟಕ ಮೂಲದ ಚಂದ್ರ ಆರ್ಯ ಅವರು ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ ಹಾಗೂ ನಾಮಪತ್ರ ಸಲ್ಲಿಸಿದ ಬಳಿಕ ಕನ್ನಡದಲ್ಲಿ ಮಾತನಾಡಿದ್ದಾರೆ ಎನ್ನುವ ಪೋಸ್ಟ್‌ಗಳು ದಾರಿ ತಪ್ಪಿಸುವಂಥವು ಎಂದು ತಿಳಿದು ಬಂದಿವೆ. ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಲ್ಲ ಎಂದು ಪರಿಶೀಲನೆಯಿಂದ ದೃಢಪಟ್ಟಿದೆ. ಅಲ್ಲದೆ ಅವರು ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ಎರಡು ವರ್ಷ ಹಳೆಯದು ಎಂದು ‘ಸಜಗ್‌’ ತಂಡ ವರದಿಯಲ್ಲಿ ತಿಳಿಸಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಅಖಿಲೇಶ್ ಯಾದವ್ ಮಹಾಕುಂಭ ಮೇಳದಲ್ಲಿ ಶಾಹೀ ಸ್ನಾನ ಸ್ನಾನ ಮಾಡಿದ್ರಾ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights