FACT CHECK | ಮಹಾಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ರಾ ಶಾರುಖ್ ಮತ್ತು ಸಲ್ಮಾನ್ ಖಾನ್?

ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ  ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಸ್ನಾನ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ.

@jeetendrasaran ಎಂಬ X  ಬಳಕೆದಾರರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಇಬ್ಬರು ನಟರು ಕೇಸರಿ ಬಣ್ಣದ ಬಟ್ಟೆ ಧರಿಸಿ ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವುದನ್ನು ನೋಡಬಹುದು. “ಕಲಿಯುಗದಲ್ಲಿ ಮಹಾಮಂತ್ರ ಸಾಕು! ಮಹಾಮಂತ್ರ – ಹರೇ ಕೃಷ್ಣ ಹರೇ ಕೃಷ್ಣ ಕೃಷ್ಣ ಕೃಷ್ಣ ಹರೇ ಹರೇ, ಹರೇ ರಾಮ ಹರೇ ರಾಮ ರಾಮ ರಾಮ ಹರೇ ಹರೇ! ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಕುಂಭ ಸ್ನಾನದ ಸುಂದರ ದೃಶ್ಯ” ಎಂದು ಬರೆದುಕೊಂಡಿದ್ದಾರೆ.

Deba Saha ಎಂಬ ಫೇಸ್‌ಬುಕ್ ಬಳಕೆದಾರರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ. “ಬಾಲಿವುಡ್ ನಟರಾದ ಶಾರುಖ್ ಮತ್ತು ಸಲ್ಮಾನ್ ಖಾನ್ ಕುಂಭಮೇಳಕ್ಕೆ ಬಂದಿದ್ದಾರೆ” ಎಂದು ಬರೆದಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಶಾರುಖ್ ಮತ್ತು ಸಲ್ಮಾನ್ ಖಾನ್ ಕುಂಭಮೇಳ ಫೋಟೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಇಬ್ಬರು ನಟರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪರಿಶೀಲಿಸಿದಾಗ ಕುಂಭಮೇಳಕ್ಕೆ ಸಂಬಂಧಿಸಿದ ಯಾವುದೇ ಫೋಟೋಗಳು ಅಥವಾ ಪೋಸ್ಟ್‌ಗಳು ಲಭ್ಯವಾಗಿಲ್ಲ. ಫೋಟೋದಲ್ಲಿ ABP ನ್ಯೂಸ್‌ನ ಲೋಗೋ ಕಂಡುಬಂದಿದೆ. ಈ ಲೋಗೋ ಬಳಸಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ABP ನ್ಯೂಸ್‌ನ ವರದಿಯೊಂದು ಕಂಡುಬಂದಿದೆ. ಆ ವರದಿಯಲ್ಲಿ, ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಇತರ ಹಲವು ನಟರ ಕುಂಭ ಸ್ನಾನದ ಫೋಟೋಗಳಿದ್ದವು. ಆದರೆ, ವರದಿಯಲ್ಲಿ ಈ ಫೋಟೋಗಳು ಎಐ (AI) ನಿರ್ಮಿತವೆಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

 

View this post on Instagram

 

A post shared by ABP News (@abpnewstv)

ಎಬಿಪಿ ನ್ಯೂಸ್‌ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ಈ ಫೋಟೋ ಕಂಡುಬಂದಿದೆ. ಅದರ ವಿವರಣೆಯಲ್ಲಿ ಈ ಫೋಟೋಗಳು AI ನಿರ್ಮಿತವೆಂದು ತಿಳಿಸಲಾಗಿದೆ. ಎಬಿಪಿ ನ್ಯೂಸ್‌ನ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, “ಕುಂಭಮೇಳದಲ್ಲಿ ಬಾಲಿವುಡ್ ತಾರೆಗಳ ದರ್ಶನ? ಇದು ನಿಜವಲ್ಲ, AI ನಿರ್ಮಿತ ಫೋಟೋಗಳು ವೈರಲ್” ಎಂಬ ಶೀರ್ಷಿಕೆ ನೀಡಲಾಗಿದೆ.

ಒಟ್ಟಾರೆಯಾಗಿ ಹೇಳುವದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ  ವೈರಲ್ ಆಗುತ್ತಿರುವ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ಕುಂಭ ಸ್ನಾನದ ಫೋಟೋವು ನಕಲಿಯಾಗಿದೆ. ಈ ಫೋಟೋವು AI ತಂತ್ರಜ್ಞಾನದಿಂದ ಸೃಷ್ಟಿಸಲ್ಪಟ್ಟಿದೆ ಎಂದು ತಿಳಿದುಬಂದಿದೆ. ಈ ಫೋಟೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ್ರಾ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ದಂಪತಿ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights