FACT CHECK | ರಾಜ್ಯಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರ ಆಗಿದೆ ಎಂಬುದು ಸುಳ್ಳು
ಲೋಕಸಭೆ ಮತ್ತು ರಾಜ್ಯಸಭೆಯ ಸಂಸತ್ತಿನ ಕಲಾಪಗಳ ಎರಡು ವೀಡಿಯೊಗಳನ್ನು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, ಬಳಕೆದಾರರು ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಭಾರೀ ಗದ್ದಲದ ನಡುವೆಯೇ ರಾಜ್ಯಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.
#WaqfAmendmentBill presented and passed in Rajya Sabha.
Opposition leaders started shouting against it and BJP leaders started slogans Bharat Mata ki Jai
Those who had created Waqf to give our lands to mu£lims through Waqf Board are in too much pain. pic.twitter.com/lcv8L4WWGV
— Namami Bharatam (@Namami_Bharatam) February 13, 2025
@Namami_Bharatam ಎಂಬ ಎಕ್ಸ್ (ಟ್ವಿಟರ್) ಬಳಕೆದಾರರು, “ಹಿಂದೂಗಳೇ, ಅಭಿನಂದನೆಗಳು, ವಕ್ಫ್ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ” ಎಂದು ಪೋಸ್ಟ್ ಮಾಡಿದ್ದರು.
बधाई हो हिन्दुओं ✊
वक्फ संशोधन बिल राज्यसभा में पास हो गया है
— Mayank Upadhyay (@panditmayank1) February 13, 2025
@panditmayank1 ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ “ಹಿಂದೂಗಳಿಗೆ ಅಭಿನಂದನೆಗಳು ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ ಎಂಬ ಬರಹದೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ರಾಜ್ಯಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರವಾಗಿದೆ ಎಂಬ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, “ವಕ್ಫ್ ತಿದ್ದುಪಡಿ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರ” ಎಂಬ ಕೀವರ್ಡ್ ಬಳಸಿ ಗೂಗಲ್ನಲ್ಲಿ ಸರ್ಚ್ ಮಾಡಿದಾಗ, ವಿಧೇಯಕ ಅಂಗೀಕಾರವಾಗಿದೆ ಎಂಬುದಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಬದಲಾಗಿ, ವಕ್ಫ್ ತಿದ್ದುಪಡಿ ವಿಧೇಯಕವನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ ಎಂದು ಹಲವು ವರದಿಗಳು ಲಭ್ಯವಾಗಿವೆ.
ಟಿವಿ9 ವರದಿಯ ಪ್ರಕಾರ, ವಕ್ಫ್ ತಿದ್ದುಪಡಿ ವಿಧೇಯಕವನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ. ವಿರೋಧ ಪಕ್ಷದ ಕೆಲವು ಸದಸ್ಯರು ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲೈವ್ ಹಿಂದೂಸ್ತಾನ್ ವರದಿಯ ಪ್ರಕಾರ, ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತು ಜಂಟಿ ಸಂಸದೀಯ ಸಮಿತಿಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ. ವಿಧೇಯಕ ಮಂಡನೆಯಾದ ಕೂಡಲೇ ಸದನದಲ್ಲಿ ಗದ್ದಲ, ಗಲಾಟೆ ಆರಂಭವಾಗಿದೆ. ಈ ಬಗ್ಗೆ ವಿಜಯ ಕರ್ನಾಟಕ, ಕನ್ನಡ ಪ್ರಭ ವೆಬ್ಸೈಟ್ ಕೂಡ ವರದಿ ಮಾಡಿದೆ.

ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ ಎಂಬ ಸುದ್ದಿ ಸುಳ್ಳು. ವಿಧೇಯಕವನ್ನು ಕೇವಲ ಮಂಡಿಸಲಾಗಿದ್ದು, ಅದರ ಮೇಲೆ ಚರ್ಚೆ ನಡೆದಿಲ್ಲ. ವಿರೋಧ ಪಕ್ಷಗಳ ಆಕ್ಷೇಪಣೆಯಿಂದಾಗಿ ಸದನದಲ್ಲಿ ಗದ್ದಲ ಉಂಟಾಯಿತು. 600 ಪುಟಗಳ ಈ ವರದಿಯನ್ನು ಸಮಗ್ರವಾಗಿ ಪರಿಶೀಲಿಸಿ ಚರ್ಚಿಸಬೇಕಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ರಾಜ್ಯಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ ಎಂದು ಹೇಳಿಕೊಂಡು, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಸಂಸತ್ತಿನ ಕಲಾಪಗಳ ಎರಡು ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಆದರೆ ಫೆಬ್ರವರಿ 14 ರ ಹೊತ್ತಿಗೆ, ಮಸೂದೆಯನ್ನು ಸಂಸತ್ತು ಅಂಗೀಕರಿಸಿಲ್ಲ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ನೇಪಾಳದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 24 ಭಾರತೀಯರನ್ನು ಬಂಧಿಸಲಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

