FACT CHECK | ಮುಸ್ಲಿಂ ಮಹಿಳೆಗೆ ಕಿರುಕುಳ ನೀಡಿ ಸಾರ್ವಜನಿಕವಾಗಿ ಕೆನ್ನೆಗೆ ಹೊಡೆತ ತಿಂದ ವ್ಯಕ್ತಿ ಯಾರು ಗೊತ್ತೇ?

ಮಾರುಕಟ್ಟೆ ಪ್ರದೇಶದಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬರು ಯುವಕನ ಕೆನ್ನೆಗೆ ಬಾರಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಧ್ಯಮಗಳಲ್ಲಿ ವೈರಲ್ ಆಗಿದೆ. ಈ ಘಟನೆಯನ್ನು ಕೋಮು ಹಿನ್ನಲೆಯಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವ್ಯಕ್ತಿ ಹಿಂದೂ ಎಂದು ಹೇಳಿಕೊಳ್ಳುತ್ತಿದ್ದಾರೆ.

vishvasnews

ವೈರಲ್ ಪೋಸ್ಟ್ ಅನ್ನು ಹಂಚಿಕೊಂಡ ಫೇಸ್‌ಬುಕ್ ಬಳಕೆದಾರರು, ಬುರ್ಖಾ ಧರಿಸಿದ್ದರಿಂದಲೇ, ಮಹಿಳೆಯ ಮೇಲೆ ಕಣ್ಣಿಟ್ಟಿದ್ದಾರೆ. ಅವರಿಗೆ ಸರಿಯಾದ ಶಿಕ್ಷೆಯಾಗಿದೆ ಎಂದು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಫೆಬ್ರವರಿ 26, 2025 ರಂದು ABP ನ್ಯೂಸ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಲೇಖನವೊಂದು ಲಭ್ಯವಾಗಿದೆ. ವರದಿಯ ಪ್ರಕಾರ, ಈ ಘಟನೆ ಕಾನ್ಪುರದ ಬೆಕಾನ್ ಗಂಜ್‌ನಲ್ಲಿ ನಡೆದಿದ್ದು, ಸಾರ್ವಜನಿಕವಾಗಿ ತನಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಮಹಿಳೆ ಥಳಿಸಿದ್ದಾರೆ ಎಂದು ಉಲ್ಲೇಖಿಸಿದೆ.

vishvasnews

ಸುದ್ದಿ ವರದಿಯ ಪ್ರಕಾರ, ಆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಯ ಹೆಸರು ಅದ್ನಾನ್ ಎಂದು ಸಹಾಯಕ ಪೊಲೀಸ್ ಆಯುಕ್ತ ಅಭಿಷೇಕ್ ಕುಮಾರ್ ಹೇಳಿದ್ದಾರೆ. ಆತನ ಹಿನ್ನೆಲೆಯನ್ನು ತನಿಖೆ ಮಾಡಿ ಆತನ ಮನೆಯನ್ನು ಪತ್ತೆಹಚ್ಚಿದಾಗ, ಅದ್ನಾನ್ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ನೊಂದ ಮಹಿಳೆ ಲಿಖಿತ ದೂರು ನೀಡಿದರೆ, ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಫೆಬ್ರವರಿ 26, 2025 ರಂದು ಪ್ರಕಟವಾದ ಅಮರ್ ಉಜಾಲಾ ಅವರ ವೆಬ್‌ಸೈಟ್‌ನಲ್ಲಿ ವೈರಲ್ ವೀಡಿಯೊಗೆ ಸಂಬಂಧಿಸಿದ ಸುದ್ದಿ ವರದಿಯನ್ನು ಸಹ ನಾವು ಕಂಡುಕೊಂಡಿದ್ದೇವೆ. ವರದಿಯಲ್ಲಿ “ಬುಧವಾರ, ಬೆಕಾನ್‌ಗಂಜ್ ಪ್ರದೇಶದಲ್ಲಿ, ಮಹಿಳೆಯೊಬ್ಬಳು ತನಗೆ ಕಿರುಕುಳ ನೀಡಿದ್ದಕ್ಕಾಗಿ ಮಾರುಕಟ್ಟೆಯ ಮಧ್ಯದಲ್ಲಿ ಯುವಕನನ್ನು ಥಳಿಸಿದ್ದಾಳೆ. ಯುವಕ ತಮಹಿಳೆಯ ಹೊಡೆತದಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ, ಮಹಿಳೆ ಯುವಕನ ಕಾಲರ್ ಹಿಡಿದು 14 ಬಾರಿ ಕಪಾಳಮೋಕ್ಷ ಮಾಡಿದಳು”ಎಂದು ವರದಿಯಗಿದೆ.

vishvasnews

ಅದೇ ವೀಡಿಯೊವನ್ನು ಹಂಚಿಕೊಂಡಿದ್ದ X ಬಳಕೆದಾರರ ಪೋಸ್ಟ್ ಲಭ್ಯವಾಗಿದೆ. ಈ ಪೋಸ್ಟ್‌ಗೆ ಬಂದಿರುವ ಪ್ರತಿಕ್ರಿಯೆಯಲ್ಲಿ “ಕಾನ್ಪುರ್ ನಗರ ಪೊಲೀಸ್ ಕಮಿಷನರೇಟ್”, “ಘಟನೆ ದಿನಾಂಕ 25.02.2025, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಡಿಯೋದಲ್ಲಿ ಕಾಣುವ ವ್ಯಕ್ತಿಯ ಹೆಸರು ಬಜಾರಿಯಾ ಪೊಲೀಸ್ ಠಾಣೆಯ ನಿವಾಸಿ ದಿವಂಗತ ಅಬ್ದುಲ್ ಮಾಬುದ್ ಅವರ ಮಗ ಅದ್ನಾನ್, ಆರೋಪಿಯ ಕುಟುಂಬ ಸದಸ್ಯರು ಅದ್ನಾನ್ ಅವರ ಮಾನಸಿಕ ಸ್ಥಿತಿ ಸರಿಯಿಲ್ಲ, ಆತನಿಗೆ ಚಿಕಿತ್ಸೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಮಹಿಳೆ ಲಿಖಿತ ದೂರು ನೀಡಿದರೆ, ಕ್ರಮ ಕೈಗೊಳ್ಳಲಾಗುದು ಎಂದಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾನ್ಪುರದ ಮಾರುಕಟ್ಟೆ ಪ್ರದೇಶವೊಂದರಲ್ಲಿ ಮುಸ್ಲಿಂ ಮಹಿಳೆಗೆ ಕಿರುಕುಳ ನೀಡಿದ ವ್ಯಕ್ತಿಗೆ ಮಹಿಳೆ 14 ಬಾರಿ ಕೆನ್ನಗೆ ಬಾರಿಸಿದ ಘಟನೆಯನ್ನು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ. ವಾಸ್ತವವಾಗಿ ಮಹಿಳೆ ಮತ್ತು ಯುವಕ ಇಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಹರಿಯಾಣ ಕಾಂಗ್ರೆಸ್ ನಾಯಕಿ ಹಿಮಾನಿ ನರ್ವಾಲ್ ಕೊಲೆ ಮಾಡಿದ್ದು ಮುಸ್ಲಿಂ ವ್ಯಕ್ತಿಯಲ್ಲ! ಮತ್ತ್ಯಾರು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights