FACT CHECK | “ಗೆಟ್ ಔಟ್ ಸ್ಟಾಲಿನ್” ಎಂಬ ಪೋಸ್ಟರ್ ಹಿಡಿದು ಎಂ.ಕೆ. ಸ್ಟಾಲಿನ್ ವಿರುದ್ಧ ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು ನಿಜವೇ?

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಶಾಲಾ ವಿದ್ಯಾರ್ಥಿಗಳು “ಗೆಟ್ ಔಟ್ ಸ್ಟಾಲಿನ್” ಎಂದು ಬರೆದ ಪೋಸ್ಟರ್‌ಗಳೊಂದಿಗೆ ಪ್ರತಿಭಟನೆ ನಡೆಸುತ್ತಿರುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ.

ಕೇಂದ್ರ ಸರ್ಕಾರ ತಮಿಳುನಾಡಿಗೆ 10,000 ಕೋಟಿ ರೂಪಾಯಿ ಕೊಟ್ಟರೂ ನಾವು ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲ್ಲ, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಮತ್ತು ತ್ರಿಭಾಷಾ ಸೂತ್ರವನ್ನು ಅಳವಡಿಸಿಕೊಳ್ಳುವ ವಿಚಾರದಲ್ಲಿ ವಿವಾದ ತೀವ್ರಗೊಂಡಿದೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಈ ರೀತಿಯ ಪೋಸ್ಟ್‌ಗಳು ಪ್ರಸಾರವಾಗುತ್ತಿವೆ.

ಫೆಬ್ರವರಿ 21, 2025ರಂದು @theAshleyMolly ಎಂಬ ಎಕ್ಸ್‌ ಖಾತೆ ಬಳಕೆದಾರರೊಬ್ಬರು  ʼALL Indians are Brothers and Sisters. Stop Noth vs South divide #GetOutStalinʼ ಎಂಬ ಬ್ಯಾನರ್‌ನ್ನು ವಿದ್ಯಾರ್ಥಿಗಳು ಹಿಡಿದಿರುವ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಕ್ಕೆ ಶೀರ್ಷಿಕೆಯಾಗಿ ʼRepost and Comment if you agree with these Kids. #GetOutStalinʼ ಎಂದು ಬರೆದು ಪೊಸ್ಟ್‌ ಮಾಡಿರುವುದನ್ನು ನೋಡಬಹುದು. ವೈರಲ್ ಪೋಸ್ಟ್‌ನ ಸ್ಕ್ರೀನ್‌ಶಾಟ್‌ಅನ್ನು ಇಲ್ಲಿ ನೋಡಬಹುದು.

ಇದೇ ರೀತಿಯ ಪ್ರತಿಪಾದನೆಯನ್ನು ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಮ್ಮ ಹ್ಯಾಂಡಲ್‌ಗಳಲ್ಲಿ ಪೋಸ್ಟ್‌ ಮಾಡಿದ್ದು ಅವುಗಳನ್ನು ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಶಾಲಾ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾದ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ವೈರಲ್‌ ಆದ ಪೋಸ್ಟ್‌ನಲ್ಲಿರು ಚಿತ್ರವನ್ನು ಸತ್ಯಾಂಶವನ್ನು ತಿಳಿಯಲು ಸೂಕ್ಷ್ಮವಾಗಿ ಪರೀಶಿಲಿಸಿದಾಗ ಈ ಫೋಟೋದಲ್ಲಿ ಕಾಣುವ ಕೆಲವು ವಿದ್ಯಾರ್ಥಿನಿಯರ ಮುಖ, ಬೆರಳುಗಳು, ಕಣ್ಣುಗಳು ಸಹಜವಾಗಿಲ್ಲ, ಕೃತಕವಾಗಿರುವುದನ್ನು ನೋಡಬಹುದು. ಇದರಿಂದಾಗಿ ಚಿತ್ರವನ್ನು AI ಮೂಲಕ ರಚಿಸಲಾಗಿದೆ ಎಂದು ಅನುಮಾನ ಮೂಡುತ್ತದೆ.

ವೈರಲ್‌ ಆದ ಚಿತ್ರದ ಕೆಳ ಭಾಗದಲ್ಲಿ ಕಾಣುವ ವಾಟರ್‌ ಮಾರ್ಕ್‌ GROK ಎಂದು ಬರೆದಿರುವುದನ್ನು ನೋಡಬಹುದು.  ಗ್ರೋಕ್‌ ಎಂಬ ವೆಬ್‌ಸೈಟ್‌ನ ಮೂಲಕ ಈ ಚಿತ್ರವನ್ನು ರಚಿಸಲಾಗಿದೆ ಎಂದು ಸ್ಪಷ್ಟವಾಗಿದೆ.

ಈ ವೈರಲ್ ಚಿತ್ರವನ್ನು ಎಐ ಇಮೇಜ್ ಡಿಟೆಕ್ಷನ್ ಟೂಲ್ ʼಸೈಟ್‌ ಇಂಜಿನ್‌ʼ ನಲ್ಲಿ ಪರಿಶೀಲಿಸಿದಾಗ, ನಮಗೆ ಈ ಚಿತ್ರ 99% ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ತಿಳಿದುಬಂದಿತು.

ಮತ್ತಷ್ಟು ಮಾಹಿತಿಗಾಗಿ ಎಐ ಇಮೇಜ್ ಡಿಟೆಕ್ಷನ್ ಟೂಲ್ ʼಹೈವ್‌ ಮಾಡರೇಶನ್‌ʼ ಎಂಬ ಟೂಲ್‌ನ ಮೂಲಕ ಈ ಫೋಟೋವನ್ನು ಪರಿಶೀಲಿಸಿದ್ದೇವೆ. ಇಲ್ಲಿಯೂ ಸಹ ಈ ಚತ್ರ ಎಐ ಮೂಲಕ ರಚಿಸುವ ಸಂಭವನೀಯತೆ 96.9 ಇದೆ ಎಂದು ಫಲಿತಾಂಶದಲ್ಲಿ ತಿಳಿದುಬಂದಿದೆ.

Wasitai.com ನಲ್ಲಿ ಚಿತ್ರವನ್ನು ಪರೀಶಿಲಿಸಿದಾಗ ಅಲ್ಲಿಯೂ ಸಹ ಈ ಚಿತ್ರ ಎಐ ಬಳಸಿ ರಚಿಸಿರುವುದು ಸ್ಪಷ್ಟವಾಗಿದೆ. ಹಾಗಾಗಿ ವೈರಲ್‌ ಆದ ಚಿತ್ರವನ್ನು ಎಐ ಮೂಲಕ ರಚಿಸಲಾಗಿದೆ ಎಂಬುದು  ದೃಢವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿದಕ್ಕೆ ವಿದ್ಯಾರ್ಥಿಗಳು “ಗೆಟ್ ಔಟ್ ಸ್ಟಾಲಿನ್” ಎಂದು ಬರೆದ ಪೋಸ್ಟರ್‌ಗಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ ಎಂಬುದು ಸುಳ್ಳು. ವೈರಲ್ ಪೋಸ್ಟ್‌ನಲ್ಲಿ ಹಂಚಿಕೊಂಡ ಚಿತ್ರ AIನಿಂದ ಸೃಷ್ಟಿಸಿದ ಚಿತ್ರ ಎಂಬುದು ಸ್ಪಷ್ಟವಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಇಫ್ತಾರ್ ಕೂಟಕ್ಕೆ ಬಂದ ಹಿಂದೂ ವ್ಯಕ್ತಿಯನ್ನು ಮಸೀದಿಯಿಂದ ಓಡಿಸಿದ್ರಾ ಮುಸ್ಲಿಮರು? ಈ ಸ್ಟೋರಿ ಓದಿ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights