FACTCHECK | 2025 ICC ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ ಆಟಗಾರರನ್ನು ಭೇಟಿಯಾದ್ರಾ ಪ್ರಧಾನಿ ಮೋದಿ

ಭಾರತ ತಂಡ 2025 ರ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತು. ಇದಾದ ನಂತರ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ತಂಡವನ್ನು ಭೇಟಿಯಾಗಿ ಮಾತನಾಡುತ್ತಿರುವುದನ್ನು ಕಾಣಬಹುದು. ಬಳಕೆದಾರರು ಈ ವೀಡಿಯೊವನ್ನು ಇತ್ತೀಚಿನದು ಎಂದು ಹಂಚಿಕೊಳ್ಳುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಆಟಗಾರರನ್ನು ಭೇಟಿಯಾಗುತ್ತಿರುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದಾಗಿದೆ. ಹಾಗಿದ್ದರೆ ಐಸಿಸಿ  ICC ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ ತಂಡವನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ ಎಂಬ ಪೋಸ್ಟ್‌ನ ಸತ್ಯಾಸತ್ಯತೆಗಳನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವಿವಿಧ ಕೀ ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 21 ನವೆಂಬರ್‌ 2023ರಂದು ಹಿಂದೂಸ್ತಾನ್‌ ಎಂಬ ವೆಬ್‌ಸೈಟ್‌ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಸುದ್ದಿ ವರದಿಯೊಂದು ಲಭ್ಯವಾಗಿದೆ.

ವರದಿಯ ಪ್ರಕಾರ, 2023 ರ ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ಸೋತ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಟೀಮ್ ಇಂಡಿಯಾ ಆಟಗಾರರೊಂದಿಗೆ ವಿಶೇಷ ಸಭೆ ನಡೆಸಿದರು. ಪ್ರಧಾನಿ ಮೋದಿ ಆಟಗಾರರೊಂದಿಗೆ ಮಾತನಾಡಿ ಅವರನ್ನು ಪ್ರೋತ್ಸಾಹಿಸಿದರು ೆಂದು ಉಲ್ಲೇಖಿಸಲಾಗಿದೆ.

ಮತ್ತಷ್ಟು ವರದಗಳಿಗಾಗಿ ಸರ್ಚ್ ಮಾಡಿದಾಗ, ANI ವೆಬ್‌ಸೈಟ್‌ನಲ್ಲಿಯೂ ಇದೇ ರೀತಿಯಾದ ವರದಿ ಲಭ್ಯವಾಗಿದೆ. ಇದರಲ್ಲಿ ಕೂಡ ಆಸ್ಟ್ರೇಲಿಯಾ ವಿರುದ್ಧದ 2023 ರ ODI ವಿಶ್ವಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ ಸೋತ ನಂತರ, ಪ್ರಧಾನಿ ಮೋದಿ ಭಾರತೀಯ ತಂಡದ ಆಟಗಾರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿದರು ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ. ಹೀಗೆ ಹಲವು ವರದಿಗಳಲ್ಲಿ ಕೂಡ ವೈರಲ್‌ ವಿಡಿಯೋವಿನ ಫೋಟೋ ಮತ್ತು ವಿಡಿಯೋಗಳನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಅವರು 2023 ರ ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ಸೋತ ನಂತರ ಭಾರತೀಯ ಆಟಗಾರರನ್ನು ಭೇಟಿಯಾಗಿದ್ದಕ್ಕೆ ಸಂಬಂಧಿಸಿದ್ದಾಗಿದೆ ಎಂಬುದು ಖಚಿತವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2025 ರ ICC ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ತಂಡವನ್ನು ಭೇಟಿ ಮಾಡಿದ್ದಾರೆ ಎಂಬುದು ಸುಳ್ಳು. ವೈರಲ್‌ ವಿಡಿಯೋ 2023 ರ ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ಸೋತ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಟೀಮ್ ಇಂಡಿಯಾ ಆಟಗಾರರನ್ನು ಭೇಟಿಯಾದ ಸಂದರ್ಭದ್ದಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ  ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪಾಕಿಸ್ತಾನದ ಸೇನಾ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಫೋಟೊ ವೈರಲ್ ! ವಾಸ್ತವವೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights