FACT CHECK | ವ್ಯಕ್ತಿಗೆ ಪೇಟಾ ತೊಡಿಸಿ ಸನ್ಮಾನ ಮಾಡಿ ಹಲ್ಲೆ ನಡೆಸಿದ ಘಟನೆ ಯಾವಾಗಿನದ್ದು ಗೊತ್ತೇ? ಈ ಸ್ಟೋರಿ ಓದಿ

ಹೊಸಕೋಟೆಯಲ್ಲಿ ನಡೆದಿದೆ ಎನ್ನಲಾದ ಅಮಾನವೀಯ ಘಟನೆಯೊಂದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಯಸ್ಸಾದ ವ್ಯಕ್ತಿಯೊಬ್ಬರನ್ನು ಮನೆಯಲ್ಲಿ ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಸಿಕೊಂಡಿದ್ದು, ಈ ಘಟನೆಯ ವಿಡಿಯೋ ವೈರಲ್ ಆದ ಬಳಿಕ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಲತಾ ಯಾದವ್ ಎಂಬುವರ ಮನೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಚಂದನ, ಭರತ್, ಶಿವು ಮತ್ತು ಇತರರು ಸೇರಿದಂತೆ ಆಕೆಯ ಕುಟುಂಬ ಸದಸ್ಯರು ಹಲ್ಲೆಯಲ್ಲಿ ಭಾಗಿಯಾಗಿರುವುದು ವಿಡಿಯೊದಲ್ಲಿ ನೋಡಬಹುದು. ವ್ಯಕ್ತಿಗೆ ದೈಹಿಕ ಹಿಂಸೆ, ಅವಮಾನ ಮತ್ತು ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ವ್ಯಕ್ತಿ ಅಸಹಾಯಕವಾಗಿ ಕುಳಿತಿದ್ದಾಗ ದುಷ್ಕರ್ಮಿಗಳು ಆತನಿಗೆ ಶಾಲು ಹೊದಿಸಿ ಸನ್ಮಾನಿಸಿದ್ದಾರೆ. ಆತ ಬಿಟ್ಟುಬಿಡಿ ಎಂದು ಬೇಡಿಕೊಂಡರೂ ಹಲ್ಲೆ ಮಾಡಲಾಗಿದೆ. ಯಾವ ಕಾರಣಕ್ಕಾಗಿ ಈ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ.

ವ್ಯಕ್ತಿ ಏನಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ದೂರು ನೀಡಬೇಕಿತ್ತು. ಅದನ್ನು ಬಿಟ್ಟು ಮನೆಯಲ್ಲಿ ವ್ಯಂಗ್ಯದ ರೀತಿಯಲ್ಲಿ ಸನ್ಮಾನ ಮಾಡುವ ನಾಟಕವಾಡಿ ಮನಬಂದಂತೆ ಹೊಡೆದು, ವಿಡಿಯೋ ಮಾಡಿಕೊಂಡು ಹುಚ್ಚಾಟ ಮೆರೆದಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಭಾರಿ ವೈರಲ್ ಆಗಿದ್ದು, ಅವಮಾನ ಮಾಡಿ, ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿ ಬಡವನಾಗಿದ್ದರಿಂದ ಭಯ ಮತ್ತು ಬೆದರಿಕೆಯಿಂದಾಗಿ ದೂರು ದಾಖಲಿಸಿಲ್ಲ ಎಂದು ವರದಿಯಾಗಿದೆ. ಸದ್ಯ ಈ ಘಟನೆಯನ್ನು ಕರ್ನಾಟಕ ರಾಜ್ಯ ಕಾರ್ಮಿಕ ಮಂಡಳಿ ತೀವ್ರವಾಗಿ ಖಂಡಿಸಿದ್ದು, ಹೊಸಕೋಟೆ ಪೊಲೀಸರು ಘಟನೆ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದೆ. ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಒತ್ತಾಯಿಸಿದೆ. ಹಾಗಿದ್ದರೆ ಈ ಘಟನೆ ಹಿನ್ನಲೆಯಲ್ಲಿ ಈ ವಿಡಿಯೋ ಯಾವಾಗಿನದ್ದು ಎಂದು ಪರಿಶೀಲಿಸಿದಾಗ ಹಳೆಯ ವಿಡಿಯೋ ಎಂದು ತಿಳಿದು ಬಂದಿದೆ.

ಒಂದು ವರ್ಷದ ಹಳೆಯ ವಿಡಿಯೋ :

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವ್ಯಕ್ತಿಯ ಮೇಲೆ ಹಲ್ಲೆ ನಡೆದಿರುವ ವಿಡಿಯೋವನ್ನು ಪರಿಶೀಲಿಸಲು ಎಕ್ಸ್‌ನಲ್ಲಿ ಸರ್ಚ್ ಮಾಡಿದಾಗ, ಒಂದೂವರೆ ವರ್ಷದ ಹಳೆಯ ವಿಡಿಯೊ ಆಗಿದೆ ಎಂದು ತಿಳಿದುಬಂದಿದೆ.

ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಹಲ್ಲೆಯ ವಿಡಿಯೊ, ಒಂದೂವರೆ ವರ್ಷದ ಹಳೆಯ ವಿಡಿಯೊ ಆಗಿದೆ ಎಂದು ತಿಳಿದುಬಂದಿದೆ. ಇಬ್ಬರು ವ್ಯಕ್ತಿಗಳ ವೈಯಕ್ತಿಕ ವಿಚಾರವಾಗಿ ಒಂದೂವರೆ ವರ್ಷದ ಹಳೆಯ ವಿಡಿಯೊ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ದೃಶ್ಯದಲ್ಲಿರುವ ವ್ಯಕ್ತಿಗಳನ್ನು ಹೊಸಕೋಟೆ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದ್ದು, ಸೂಕ್ತ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿ ಈ ಹಿಂದೆ ವಿಚಾರಣೆ ವೇಳೆ, ನಾನು ಮದ್ಯ ಸೇವಿಸಿ ಪರಿಚಿತರ ಮನೆಗೆ ಹೋದಾಗ ಅವರು ಈ ರೀತಿ ಚೇಷ್ಠೆ ಮಾಡಿದ್ದಾರೆ. ಅದು ನಮ್ಮಿಬ್ಬರ ವೈಯಕ್ತಿಕ ವಿಚಾರ, ಈ ಬಗ್ಗೆ ನಾನು ಮತ್ತು ಆ ಮನೆಯವರು ಯಾವುದೇ ದೂರು ನೀಡಿಲ್ಲ ಎಂದು ಹೇಳಿರುವುದಾಗಿ ಎಸ್‌ಪಿ ಸಿ.ಕೆ. ಬಾಬಾ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಕ್ರಿಯಿಸಿದ್ದರು. ಆದರೆ ವೈರಲ್ ವಿಡಿಯೋ ಒಂದೂವರೆ ವರ್ಷದಷ್ಟು ಹಳೆಯ ವಿಡಿಯೋ ಎಂದು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಆದರೂ ಈ ಘಟನೆ ಅಮಾನವೀಯ ಕ್ರಮ ಕೈಗೊಳ್ಳಿ ಎಂದು ಎಕ್ಸ್‌ ಬಳಕೆದಾರರು ಟ್ವೀಟ್‌ ಮಾಡಿದ್ದಾರೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ  ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಟೀಂ ಇಂಡಿಯಾ ಆಟಗಾರರು ಹೋಳಿ ಆಚರಿಸಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights